ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂತ್ರಸ್ತರ ಪರಿಹಾರಕ್ಕೆ ಕೋಟಿ ಕೊಟ್ಟ ಅನರ್ಹ ಶಾಸಕ ಸುಧಾಕರ್

|
Google Oneindia Kannada News

ಬೆಂಗಳೂರು, ಆಗಸ್ಟ್ 21: ಸಂತ್ರಸ್ತರ ಪರಿಹಾರಕ್ಕೆಂದು ಅನರ್ಹ ಶಾಸಕ ಎಂಟಿಬಿ ನಾಗರಾಜು ಒಂದು ಕೋಟಿ ರೂಪಾಯಿ ಕೊಟ್ಟಿರುವ ಬೆನ್ನಲ್ಲೇ ಈಗ ಮತ್ತೊಬ್ಬ ಅನರ್ಹ ಶಾಸಕ ಸುಧಾಕರ್ ಅವರೂ ಒಂದು ಕೋಟಿ ರೂಪಾಯಿ ನೀಡಿದ್ದಾರೆ.

ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದ ಸುಧಾಕರ್ ಅವರು ಪ್ರವಾಹ ಸಂತ್ರ್ತರ ನೆರವಿಗೆಂದು ಒಂದು ಕೋಟಿ ರೂಪಾಯಿ ಚೆಕ್ ನೀಡಿದ್ದಾರೆ.

ದುಬಾರಿ ಕಾರು ಖರೀದಿಸಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್ದುಬಾರಿ ಕಾರು ಖರೀದಿಸಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್

ಚಿಕ್ಕಬಳ್ಳಾಪುರ ಶಾಸಕರಾಗಿದ್ದ ಸುಧಾಕರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಉರುಳಲು ಸಹಾಯ ಮಾಡಿದ್ದರು. ಪಕ್ಷಾಂತರ ನಿಷೇಧ ಕಾಯ್ದೆಯ ಅಡಿ ಅನರ್ಹಗೊಂಡಿರುವ ಅವರು, ಅದರ ವಿರುದ್ಧ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

Disqualified MLA gave 1 crore rupees to CM relief fund to help flood victims

ಈ ನಡುವೆ ಸುಧಾಕರ್ ಅವರು ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದ್ದು, ಯಡಿಯೂರಪ್ಪ ಅವರ ವಿಶ್ವಾಸಗಳಿಸಲೆಂದೇ ಕೋಟಿ ರೂಪಾಯಿ ಹಣವನ್ನು ನೀಡಿದ್ದಾರೆ ಎನ್ನಲಾಗಿದೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಕೊಡಗಿನಲ್ಲಿ ಪ್ರವಾಹ ಬಂದಿದ್ದಾಗ ಸುಧಾಕರ್ ಅವರು ನೆರವಿನ ಹಸ್ತ ಚಾಚಿರಲಿಲ್ಲ. ಈಗ ನೆರವು ನೀಡಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡಿದೆ.

12 ಕೋಟಿ ಕಾರಿನಿಂದ ಸುದ್ದಿಯಾದ ಎಂಟಿಬಿ ನಾಗರಾಜ್ ಯಾರು?12 ಕೋಟಿ ಕಾರಿನಿಂದ ಸುದ್ದಿಯಾದ ಎಂಟಿಬಿ ನಾಗರಾಜ್ ಯಾರು?

ಮೊನ್ನೆಯಷ್ಟೆ ಅನರ್ಹ ಶಾಸಕ ಎಂಟಿಬಿ ನಾಗರಾಜು ಅವರು ಯಡಿಯೂರಪ್ಪ ಅವರಿಗೆ ಪ್ರವಾಹ ಸಂತ್ರಸ್ತರ ನೆರವಿಗೆಂದು ಒಂದು ಕೋಟಿ ರೂಪಾಯಿ ನೀಡಿದ್ದರು. ಅವರು ಅಂದು ಹನ್ನೊಂದು ಕೋಟಿಗೂ ಹೆಚ್ಚು ಬೆಲೆಯ ಕಾರಿನಲ್ಲಿ ಬಂದು ಒಂದು ಕೋಟಿ ಹಣ ನೀಡಿ ಹೋಗಿದ್ದರು.

English summary
Disqualified MLA Dr Sudhakar gave one crore rupees to CM Yediyurappa to help flood victims of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X