ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನರ್ಹ ಶಾಸಕರು ದೆಹಲಿಯತ್ತ ಪ್ರಯಾಣ ಬೆಳೆಸಿದ್ಯಾಕೆ?

|
Google Oneindia Kannada News

ಬೆಂಗಳೂರು, ಆಗಸ್ಟ್ 21: ಅನರ್ಹ ಶಾಸಕರ ಎರಡು ತಂಡಗಳು ದೆಹಲಿಗೆ ಪ್ರಯಾಣ ಬೆಳೆಸಿವೆ. ಅಲ್ಲಿ ಬಿಜೆಪಿ ಹೈಕಮಾಂಡನ್ನು ಭೇಟಿ ಮಾಡಲಿವೆ.

ಅನರ್ಹ ಶಾಸಕರು ಸಲ್ಲಿಸಿರುವ ಮೇಲ್ಮನೆಯನ್ನು ತ್ವರಿತವಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ 17 ಮಂದಿ ಶಾಸಕರು ದೆಹಲಿಗೆ ತೆರಳಿದ್ದಾರೆ.

ಅನರ್ಹ ಶಾಸಕರ ಬಗ್ಗೆ ಹೊಸ ಬಾಂಬ್ ಸಿಡಿಸಿದ ಜಗದೀಶ್ ಶೆಟ್ಟರ್ಅನರ್ಹ ಶಾಸಕರ ಬಗ್ಗೆ ಹೊಸ ಬಾಂಬ್ ಸಿಡಿಸಿದ ಜಗದೀಶ್ ಶೆಟ್ಟರ್

ಸಂಪುಟದಲ್ಲಿ ಜಾರಕಿಹೊಳಿ ಕುಟುಂಬಕ್ಕೆ ಸಚಿವ ಸ್ಥಾನ ನೀಡದೇ ಇರುವುದು ಅನರ್ಹ ಶಾಸಕ ನಾಯಕ ರಮೇಶ್ ಜಾರಕಿಹೊಳಿ ಕಸಿವಿಸಿಗೆ ಕಾರಣವಾಗಿದೆ. ಇದೇ ಸ್ಥಿತಿ ಇನ್ನುಳಿದ ಅನರ್ಹರನ್ನೂ ಕಾಡುತ್ತಿದೆ.

 Disqualified MLAs Travel To Delhi

ಪ್ರಮುಖ ಖಾತೆಗಳನ್ನು ನೀಡುವುದಾಗಿ ಆಪರೇಷನ್ ಕಮಲದ ಸಂದರ್ಭದಲ್ಲಿ ಬಿಜೆಪಿ ನಾಯಕರು ಯಡಿಯೂರಪ್ಪ ಅನರ್ಹ ಶಾಸಕರಿಗೆ ಭರವಸೆ ನೀಡಿದ್ದರು. ಎಲ್ಲವನ್ನೂ ಪಕ್ಕಾಮಾಡಿಕೊಂಡ ಮೇಲೆಯೇ 17 ಶಾಸಕರು ಮೈತ್ರಿ ಸರ್ಕಾರವನ್ನು ಉರುಳಿಸುವ ಕೆಲಸಕ್ಕೆ ಮುಂದಾಗಿದ್ದರು.

ಸದ್ಯಕ್ಕೆ ರಾಜಕೀಯ ಸ್ಥಿತಿ ಅತಂತ್ರವಾಗಿಯೇ ಮುಂದುವರೆಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಅನರ್ಹ ಶಾಸಕರು ಎರಡು ತಂಡಗಳಾಗಿ ಬಿಜೆಪಿ ವರಿಷ್ಠರ ಭೇಟಿಗಾಗಿ ದೆಹಲಿಯತ್ತ ಬುಧವಾರ ಪ್ರಯಾಣ ಬೆಳೆಸಿದರು.

ಬಿಜೆಪಿ ಅತೃಪ್ತ ಶಾಸಕರ ರಹಸ್ಯ ಸಭೆ: ಬಂಡಾಯದ ಮುನ್ಸೂಚನೆ?ಬಿಜೆಪಿ ಅತೃಪ್ತ ಶಾಸಕರ ರಹಸ್ಯ ಸಭೆ: ಬಂಡಾಯದ ಮುನ್ಸೂಚನೆ?

ಬೆಳಗಾವಿ ಭಾಗದಿಂದ ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ನೀಡುವ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿರುವ ಬಿಜೆಪಿ-ಆರ್ ಎಸ್ ಎಸ್ ನೀತಿಗೆ ಬೆಳಗಾವಿ ಸಾಹುಕಾರ ಬಣ ಕೋಪಗೊಂಡಿದೆ.

ಆದಷ್ಟು ಬೇಗ ತಮ್ಮ ರಾಜಕೀಯ ನಡೆಯನ್ನು ಭದ್ರಪಡಿಸಿಕೊಳ್ಳುವ ತರಾತುರಿಯಲ್ಲಿರುವ ಅನರ್ಹರು ಸುಪ್ರೀಂಕೋರ್ಟ್ ತೀರ್ಪಿನತ್ತ ತಮ್ಮೆಲ್ಲ ಗಮನವನ್ನು ಕೇಂದ್ರೀಕರಿಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಕೇಂದ್ರ ನಾಯಕರನ್ನು ಭೇಟಿ ಮಾಡಿ ಭರವಸೆಯನ್ನು ಪಡೆಯುವ ಉದ್ದೇಶವನ್ನೂ ಹೊಂದಿದ್ದಾರೆ.

ನೋಬಾಲ್‌ಗೆ ರನ್‌ ಔಟ್ ಆಗಿದ್ದೇನೆ: ಬಿಜೆಪಿ ಶಾಸಕ ರಾಜುಗೌಡನೋಬಾಲ್‌ಗೆ ರನ್‌ ಔಟ್ ಆಗಿದ್ದೇನೆ: ಬಿಜೆಪಿ ಶಾಸಕ ರಾಜುಗೌಡ

ಬಿಜೆಪಿಯ ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಪ್ರಮುಖ ಖಾತೆಗಳತ್ತ ಹಿರಿಯ ಸಚಿವರು ಕಣ್ಣಿಟ್ಟಿದ್ದಾರೆ. ಹೀಗಾಗಿ ತಾವು ಬೇಡಿಕೆಯಿಟ್ಟಿದ್ದ ಖಾತೆಗಳು ಕೈತಪ್ಪುವ ಆತಂಕದಲ್ಲಿ ಅನರ್ಹರು ಇದ್ದಾರೆ. ಇದಕ್ಕಾಗಿಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸದ್ಯಕ್ಕೆ ಖಾತೆ ಹಂಚಿಕೆಯ ಗೋಜಿಗೆ ಕೈಹಾಕುತ್ತಿಲ್ಲ ಎಂಬ ಮಾತುಗಳೂ ಕೇಳಿ ಬಂದಿವೆ.

ಕೆ.ಸುಧಾಕರ್ ಸಂಜೆಯ ವಿಮಾನದಲ್ಲಿ ದೆಹಲಿಗೆ ತೆರಳುವುದಾಗಿ ಹೇಳಿದರು. ತಿರುಪತಿಗೆ ಹೋಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುತ್ತಿಲ್ಲ ಎಂದು ಮುನಿರತ್ನ ಸ್ಪಷ್ಟಪಡಿಸಿದ್ದಾರೆ.

English summary
Two teams of incompetent MLAs traveled to Delhi. They will meet the BJP High Command there.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X