ಸಿಎಂ ಮನೆಗೆ ಬಿಜೆಪಿ ಮುತ್ತಿಗೆ, ಇತರ ಜಿಲ್ಲಾ ಸುದ್ದಿಗಳು

ಬೆಂಗಳೂರು, ಅ.18 : "ಸಿಎಂ ಸಿದ್ದರಾಮಯ್ಯ ಗಣಿಧಣಿಗಳಿಂದ ಕಿಕ್ ಬ್ಯಾಕ್ ಪಡೆದಿದ್ದಾರೆ. ಆದ್ದರಿಂದ ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಸಚಿವ ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ಕೈ ಬಿಡಲು ವಿಳಂಬ ಮಾಡುತ್ತಿದ್ದಾರೆ" ಎಂದು ಆರ್. ಅಶೋಕ್ ಆರೋಪಿಸಿದ್ದಾರೆ.

ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಆರ್.ಅಶೋಕ್, ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ ಬಿಜೆಪಿ ರಾಜ್ಯಾಂದ್ಯಂತ ಪ್ರತಿಭಟನೆ ನಡೆಸಲಿದೆ. ಅ.23ರಂದು ಸಿಎಂ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದರು.

ವಿಧಾನಸಭೆ ಚುನಾವಣೆಯ ಖರ್ಚಿಗಾಗಿ ಗಣಿಧಣಿಗಳಿಂದ ಸಿಎಂ ಸಿದ್ದರಾಮಯ್ಯ ಕಿಕ್ ಬ್ಯಾಕ್ ಪಡೆದಿದ್ದಾರೆ. ಆದ್ದರಿಂದ ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಸಾಕಷ್ಟು ದಾಖಲೆಗಳಿದ್ದರೂ, ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ಸಿದ್ದರಾಮಯ್ಯ ವಜಾಗೊಳಿಸುತ್ತಿಲ್ಲ ಎಂದು ಅಶೋಕ್ ದೂರಿದರು.

ಅ.23ರಂದು ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ. ಅಂದು ಸಿಎಂ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ಅಶೋಕ್ ಹೇಳಿದರು. (ಕರ್ನಾಟಕದ ಇತರ ಜಿಲ್ಲಾಸುದ್ದಿಗಳು)

ಸಿಎಂ ಕಿಕ್ ಬ್ಯಾಕ್ ಪಡೆದಿದ್ದಾರೆ

ಸಿಎಂ ಕಿಕ್ ಬ್ಯಾಕ್ ಪಡೆದಿದ್ದಾರೆ

ಗಣಿಧಣಿಗಳಿಂದ ಸಿಎಂ ಸಿದ್ದರಾಮಯ್ಯ ಕಿಕ್ ಬ್ಯಾಕ್ ಪಡೆದಿದ್ದಾರೆ. ಆದ್ದರಿಂದ ಸಚಿವ ಸಂತೋಷ್ ಲಾಡ್ ಅವರನ್ನು ಸಮರ್ಥಿಸಿಕೊಂಡು ಸಂಪುಟದಲ್ಲಿ ಉಳಿಸಿಕೊಂಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂತೋಷ್ ಲಾಡ್ ವಜಾಕ್ಕೆ ಆಗ್ರಹಿಸಿ ಅ.23ರಂದು ಸಿಎಂ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.

10 ಟನ್ ಅನ್ನಭಾಗ್ಯ ಅಕ್ಕಿ ವಶ

10 ಟನ್ ಅನ್ನಭಾಗ್ಯ ಅಕ್ಕಿ ವಶ

ಬಳ್ಳಾರಿಯಿಂದ ತಂದು ತುಮಕೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ 10 ಟನ್ ಅನ್ನಭಾಗ್ಯ ಅಕ್ಕಿಯನ್ನು ಶುಕ್ರವಾರ ಶಿರಾ ಗೇಟ್ ಸಮೀಪ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಿರಾ ಗೇಟ್ ಸಮೀಪದ ಸಂಗಮ್ ರೈಸ್ ಮಿಲ್ ಗೆ ಅಕ್ಕಿಯನ್ನು ಮಾರಾಟ ಮಾಡಲು ಯತ್ನಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸ್ ವರಿಷ್ಠಾಧಿಕಾರಿಗಳು ರೈಸ್ ಮಿಲ್ ಮಾಲೀಕ ಶಿವ ಪ್ರಕಾಶ ಸೇರಿದಂತೆ ಮೂವರನ್ನು ಬಂಧಿಸಿ, 82 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ. ವಿಚಾರಣೆ ಮುಂದುವರೆದಿದೆ.

ಉಳ್ಳಾಲದಲ್ಲಿ ಗುಂಪು ಘರ್ಷಣೆ

ಉಳ್ಳಾಲದಲ್ಲಿ ಗುಂಪು ಘರ್ಷಣೆ

ಮಂಗಳೂರಿನ ಉಳ್ಳಾದಲ್ಲಿ ಪ್ರಾರ್ಥನೆ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು ಗುಂಪು ಘರ್ಷಣೆ ಸಂಭವಿಸಿದೆ. ಇಲ್ಲಿನ ಪ್ರಾರ್ಥನಾ ಮಂದಿರದಲ್ಲಿ ಪ್ರಾರ್ಥನೆ ನಡೆಸಿದಂತೆ ಒಂದು ಗುಂಪು ಕೋರ್ಟ್ ನಿಂದ ತಡೆಯಾಜ್ಞೆ ತಂದಿತ್ತು. ನೂತನ ಮಸೀದಿಯಲ್ಲಿ ಇದನ್ನು ಉಲ್ಲಂಘಿಸಿ ಪ್ರಾರ್ಥನೆ ಸಲ್ಲಿಸಲು ಮುಂದಾದಾಗ ಘರ್ಷಣೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರುಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಡಿಸೆಂಬರ್ ನಲ್ಲಿ ಹಂಪಿ ಉತ್ಸವ

ಡಿಸೆಂಬರ್ ನಲ್ಲಿ ಹಂಪಿ ಉತ್ಸವ

ಡಿಸೆಂಬರ್ ನಲ್ಲಿ ಹಂಪಿ ಉತ್ಸವ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ಹೇಳಿದ್ದಾರೆ. ಬಳ್ಳಾರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಅವರ ಜೊತೆ ಚರ್ಚಿಸಿ, ದಿನಾಂಕ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಕಪಟ ಸ್ವಾಮಿ ಸೆರೆ

ಕಪಟ ಸ್ವಾಮಿ ಸೆರೆ

ಮಕ್ಕಳಿಲ್ಲ ಎಂದು ತನ್ನ ಬಳಿ ಬರುವ ಜನರಿಗೆ ಮಕ್ಕಳನ್ನು ಕದ್ದು ತಂದು ಮಾರಾಟ ಮಾಡುತ್ತಿದ್ದ ಶ್ರೀನಿವಾಸ ಗುರೂಜಿ ಎಂಬ ಕಪಟ ಸನ್ಯಾಸಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಸಿಬಿಪುರದಲ್ಲಿ ಬಂಧಿಸಲಾಗಿದೆ. ಆಸ್ಪತ್ರೆಯಲ್ಲಿ ಮಕ್ಕಳನ್ನು ಕದ್ದು ಅಥವ ಮಧ್ಯವರ್ತಿಗಳಿಂದ ಮಕ್ಕಳನ್ನು ಅಪಹರಿಸಿ ತಂದು ಮಾರಾಟ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದುವರೆಗೂ 63ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿದ್ದ ಈತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವಿವೇಕ್ ಹೆಬ್ಬಾರ್ ವಿಚಾರಣೆ

ವಿವೇಕ್ ಹೆಬ್ಬಾರ್ ವಿಚಾರಣೆ

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೀಮ್ ಲಾಜೆಸ್ಟಿಕ್ ಕಂಪನಿ ಎಂ.ಡಿ ವಿವೇಕ್ ಹೆಬ್ಬಾರ್ ಸಿಬಿಐ ಕಚೇರಿಗೆ ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣ ಸಂಬಂಧ ವಿವೇಕ್ ಹೆಬ್ಬಾರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ಸಂಜೆ ಬಂಧಿಸುವ ಸಾಧ್ಯತೆ ಇದೆ. ವಿವೇಕ್ ಹೆಬ್ಬಾರ್ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಅವರ ಪುತ್ರ. ಬಳ್ಳಾರಿಯಲ್ಲಿ ಡ್ರೀಮ್ ಲಾಜೆಸ್ಟಿಕ್ ಪ್ರೈ.ಲಿ ಕಂಪನಿ ಹೊಂದಿರುವ ಇವರು, ಈ ಕಂಪನಿ ಮೂಲಕ ಅಕ್ರಮವಾಗಿ ಅದಿರು ಸಾಗಾಟ ಮಾಡುತ್ತಿದ್ದರು ಎಂಬ ಆರೋಪ ಎದುರಿಸುತ್ತಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಸಾರಥ್ಯದಲ್ಲಿ `ನಮೋ ಭಾರತ್

ಚಕ್ರವರ್ತಿ ಸೂಲಿಬೆಲೆ ಸಾರಥ್ಯದಲ್ಲಿ `ನಮೋ ಭಾರತ್

ಚಕ್ರವರ್ತಿ ಸೂಲಿಬೆಲೆ ಸಾರಥ್ಯದಲ್ಲಿ NAMO BHARATH ಭಾರತಕ್ಕಾಗಿ ನಮೋ, ನಮೋಗಾಗಿ ನಾವು. 12 ವರ್ಷಗಳ ಗುಜರಾತ್ ಸರ್ಕಾರ ಸಾಧನೆಯ ಗಾಥೆ ವಿವರಣೆ ಕಾರ್ಯಕ್ರಮ ಅ.27ರಂದು ಭಾನುವಾರ ಸಂಜೆ 6 ರಿಂದ 9ರ ತನಕ, ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+