ಡಿಜೆ ಹಳ್ಳಿ ಗಲಭೆ ಪ್ರಕರಣ: ಜೈಲಿನಲ್ಲಿ ನ್ಯಾಯಾಲಯದ ಕಲಾಪ ಕೈದಿಗಳ ವೀಕ್ಷಣೆ
ಬೆಂಗಳೂರು, ಜು. 28: ಡಿ.ಜೆ.ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಕಪಾಪವನ್ನು ಕೈದಿಗಳು ಜೈಲಿನಲ್ಲಿದ್ದುಕೊಂಡೇ ಮೊಬೈಲ್ ನಲ್ಲಿ ವೀಕ್ಷಿಸಿದ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಗರಂ ಆಗಿರುವ ಹೈಕೊರ್ಟ್, ನಿವೃತ್ತ ನ್ಯಾಯಮೂರ್ತಿ ಹಾಗೂ ಐಎಎಸ್ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ತನಿಖೆ ಮಾಡುವಂತೆ ಸರ್ಕಾರಕ್ಕೆ ಸೂಚಿಸಿದೆ.
ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸರ್ಕಾರ ದಕ್ಷಿಣ ವಲಯದ ಐಜಿಪಿ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರ ಪ್ರಸ್ತಾಪ ಸಲ್ಲಿಸಿತ್ತು. ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿರುವ ಹೈಕೋರ್ಟ್, ನಿವೃತ್ತ ನ್ಯಾಯಮೂರ್ತಿಗಳು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಪಟ್ಟಿ ನೀಡಲು ಸೂಚಿಸಿದೆ.
ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಡಿ.ಜೆ. ಹಳ್ಳಿ ಗಲಭೆ ಪ್ರಕರಣದಿಂದ ಅಪಾರ ನಷ್ಟವುಂಟಾಗಿತ್ತು. ಸುಮಾರು ನೂರಕ್ಕೂ ಹೆಚ್ಚು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಕೋಮು ಗಲಭೆ ಸೃಷ್ಟಿಸುವ ಹಿನ್ನೆಲೆಯಲ್ಲಿ ಪ್ರಚೋದನೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಕೈಗೆತ್ತಿಕೊಂಡಿತ್ತು.

ಡಿ.ಜೆ. ಹಳ್ಳಿ ಗಲಭೆ ಪ್ರಕರಣ ಸಂಬಂಧ ಕೆಲ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿವೆ. ಜಾಮೀನು ಅರ್ಜಿ ವಿಚಾರಣೆ ಕಲಾಪವನ್ನು ಡಿ.ಜೆ. ಹಳ್ಳಿ ಗಲಭೆ ಪ್ರಕರಣ ಆರೋಪಿಗಳಾದ ಮೊಹಮದ್ ಶರೀಫ್, ಶೇಖ್ ಬಿಲಾಲ್ ಆನ್‌ಲೈನ್ ಮೂಲಕ ಕಲಾಪವನ್ನು ವೀಕ್ಷಣೆ ಮಾಡಿದ್ದು , ಹೈಕೋರ್ಟ್ ಗಮನಕ್ಕೆ ಬಂದಿದೆ.. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ನ್ಯಾಮೂರ್ತಿಗಳಾದ ಅರವಿಂದಕುಮಾರ್ ಮತ್ತು ಪ್ರದೀಪ್ ಸಿಂಗ್ ಯೆರೂರು ನಿವೃತ್ತ ನ್ಯಾಯಮೂರ್ತಿ ಒಳಗೊಂಡಂತೆ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ತನಿಖೆ ಮಾಡಲು ಸೂಚಿಸಿದೆ. ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ವಲಯದ ಐಜಿಪಿ ನೇತೃತ್ವದಲ್ಲಿ ತನಿಖೆ ನಡೆಸುವ ಸರ್ಕಾರದ ಪ್ರಸ್ತಾಪವನ್ನು ಹೈಕೋರ್ಟ್ ತಳ್ಳಿ ಹಾಕಿದೆ.
Recommended Video
ಜೈಲಿನಿಂದಲೇ ಉಗ್ರ ಕೃತ್ಯ ನಡೆಸಿರುವ ಉದಾಹರಣೆಗಳಿವೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬೆಂಗಳೂರು ಜೈಲಿನಲ್ಲಿ ಆರೋಪಿಗಳು ಮೊಬೈಲ್ ಬಳಕೆ ಮಾಡಿ ಕಲಾಪ ವೀಕ್ಷಣೆ ಮಾಡಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ. ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ಪರಪ್ಪನ ಅಗ್ರಹಾರ ಕಾರಾಗೃಹ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಿಕೆ ಜತೆಗೆ ಅಲ್ಲಿ ನಡೆಯುತ್ತಿರುವ ಕೃತ್ಯಗಳ ಬಗ್ಗೆ ಸಮಿತಿ ತನಿಖೆ ನಡೆಸಿ ವರದಿ ನೀಡಲಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications