ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಜೆ ಹಳ್ಳಿ ಗಲಭೆ ಪ್ರಕರಣ: ಜೈಲಿನಲ್ಲಿ ನ್ಯಾಯಾಲಯದ ಕಲಾಪ ಕೈದಿಗಳ ವೀಕ್ಷಣೆ

|
Google Oneindia Kannada News

ಬೆಂಗಳೂರು, ಜು. 28: ಡಿ.ಜೆ.ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಕಪಾಪವನ್ನು ಕೈದಿಗಳು ಜೈಲಿನಲ್ಲಿದ್ದುಕೊಂಡೇ ಮೊಬೈಲ್ ನಲ್ಲಿ ವೀಕ್ಷಿಸಿದ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಗರಂ ಆಗಿರುವ ಹೈಕೊರ್ಟ್, ನಿವೃತ್ತ ನ್ಯಾಯಮೂರ್ತಿ ಹಾಗೂ ಐಎಎಸ್ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ತನಿಖೆ ಮಾಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸರ್ಕಾರ ದಕ್ಷಿಣ ವಲಯದ ಐಜಿಪಿ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರ ಪ್ರಸ್ತಾಪ ಸಲ್ಲಿಸಿತ್ತು. ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿರುವ ಹೈಕೋರ್ಟ್, ನಿವೃತ್ತ ನ್ಯಾಯಮೂರ್ತಿಗಳು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಪಟ್ಟಿ ನೀಡಲು ಸೂಚಿಸಿದೆ.

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಡಿ.ಜೆ. ಹಳ್ಳಿ ಗಲಭೆ ಪ್ರಕರಣದಿಂದ ಅಪಾರ ನಷ್ಟವುಂಟಾಗಿತ್ತು. ಸುಮಾರು ನೂರಕ್ಕೂ ಹೆಚ್ಚು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಕೋಮು ಗಲಭೆ ಸೃಷ್ಟಿಸುವ ಹಿನ್ನೆಲೆಯಲ್ಲಿ ಪ್ರಚೋದನೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಕೈಗೆತ್ತಿಕೊಂಡಿತ್ತು.

DJ Halli riot: High court directs to Create a committee headed by a retired judge

ಡಿ.ಜೆ. ಹಳ್ಳಿ ಗಲಭೆ ಪ್ರಕರಣ ಸಂಬಂಧ ಕೆಲ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿವೆ. ಜಾಮೀನು ಅರ್ಜಿ ವಿಚಾರಣೆ ಕಲಾಪವನ್ನು ಡಿ.ಜೆ. ಹಳ್ಳಿ ಗಲಭೆ ಪ್ರಕರಣ ಆರೋಪಿಗಳಾದ ಮೊಹಮದ್ ಶರೀಫ್, ಶೇಖ್ ಬಿಲಾಲ್ ಆನ್‌ಲೈನ್ ಮೂಲಕ ಕಲಾಪವನ್ನು ವೀಕ್ಷಣೆ ಮಾಡಿದ್ದು , ಹೈಕೋರ್ಟ್ ಗಮನಕ್ಕೆ ಬಂದಿದೆ.. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ನ್ಯಾಮೂರ್ತಿಗಳಾದ ಅರವಿಂದಕುಮಾರ್ ಮತ್ತು ಪ್ರದೀಪ್ ಸಿಂಗ್ ಯೆರೂರು ನಿವೃತ್ತ ನ್ಯಾಯಮೂರ್ತಿ ಒಳಗೊಂಡಂತೆ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ತನಿಖೆ ಮಾಡಲು ಸೂಚಿಸಿದೆ. ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ವಲಯದ ಐಜಿಪಿ ನೇತೃತ್ವದಲ್ಲಿ ತನಿಖೆ ನಡೆಸುವ ಸರ್ಕಾರದ ಪ್ರಸ್ತಾಪವನ್ನು ಹೈಕೋರ್ಟ್ ತಳ್ಳಿ ಹಾಕಿದೆ.

Recommended Video

ಕಡೇ ಓವರ್‌ನಲ್ಲಿ Umpire ಈ ರೀತಿ ಮಾಡಬಾರದಿತ್ತು | Oneindia Kannada

ಜೈಲಿನಿಂದಲೇ ಉಗ್ರ ಕೃತ್ಯ ನಡೆಸಿರುವ ಉದಾಹರಣೆಗಳಿವೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬೆಂಗಳೂರು ಜೈಲಿನಲ್ಲಿ ಆರೋಪಿಗಳು ಮೊಬೈಲ್ ಬಳಕೆ ಮಾಡಿ ಕಲಾಪ ವೀಕ್ಷಣೆ ಮಾಡಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ. ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ಪರಪ್ಪನ ಅಗ್ರಹಾರ ಕಾರಾಗೃಹ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಿಕೆ ಜತೆಗೆ ಅಲ್ಲಿ ನಡೆಯುತ್ತಿರುವ ಕೃತ್ಯಗಳ ಬಗ್ಗೆ ಸಮಿತಿ ತನಿಖೆ ನಡೆಸಿ ವರದಿ ನೀಡಲಿದೆ.

English summary
The Karnataka High Court has instructed the formation of a committee to investigate the case where the inmates watched the court's arguments in jail.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X