ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ. ಜೆ. ಹಳ್ಳಿ ಗಲಭೆ; ಆರೋಪಿ ನವೀನ್‌ಗೆ ಜಾಮೀನು ಮಂಜೂರು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 22 : ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಪಿ. ನವೀನ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಗಲಭೆಯ ಕುರಿತು ಹಲವು ಪ್ರಕರಣ ದಾಖಲಾಗಿದ್ದು, ಎರಡು ಎಫ್‌ಐಆರ್ ಕುರಿತು ಎನ್‌ಐಎ ತನಿಖೆ ನಡೆಯುತ್ತಿದೆ.

ಗುರುವಾರ ಪಿ. ನವೀನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನವೀನ್ ಪುಲಿಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ. ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದಿತ್ತು.

ಬೆಂಗಳೂರು ಗಲಭೆ: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮೇಲೆ ಡಿಕೆಶಿ ಗರಂ!ಬೆಂಗಳೂರು ಗಲಭೆ: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮೇಲೆ ಡಿಕೆಶಿ ಗರಂ!

ನವೀನ್ ಪರ ವಕೀಲರು ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿಯನ್ನು 60ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ಆದ್ದರಿಂದ, ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು.

DJ Halli Riots High Court Grants Bail To P Naveen

ಆಗಸ್ಟ್ 11ರಂದು ರಾತ್ರಿ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಲಭೆ ನಡೆದಿತ್ತು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಲಾಗಿತ್ತು. ಗಲಭೆಗೆ ಸಂಬಂಧಿಸಿದಂತೆ 400ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ.

ಬೆಂಗಳೂರು ಗಲಭೆ ಕುರಿತು ಸಚಿವ ಮಾಧುಸ್ವಾಮಿ ಮಹತ್ವದ ಹೇಳಿಕೆ!ಬೆಂಗಳೂರು ಗಲಭೆ ಕುರಿತು ಸಚಿವ ಮಾಧುಸ್ವಾಮಿ ಮಹತ್ವದ ಹೇಳಿಕೆ!

ನವೀನ್ ಪರವಾಗಿ ಇರುವ ಸಾಕ್ಷ್ಯಗಳು ಡಿಜಿಟಲ್ ರೂಪದಲ್ಲಿವೆ. ಅವುಗಳನ್ನು ನಾಶಪಡಿಸುವ ಸಾಧ್ಯತೆ ಇಲ್ಲ. ಆದ್ದರಿಂದ, ಜಾಮೀನು ನೀಡಬೇಕು ಎಂದು ನವೀನ್ ಪರ ವಕೀಲರು ಮನವಿ ಮಾಡಿದ್ದರು.

 ಡಿ.ಜೆ ಹಳ್ಳಿ ಗಲಭೆ ಪ್ರಕರಣ: NIAಯಿಂದ 30 ಕಡೆ ದಾಳಿ, ಪ್ರಮುಖ ಆರೋಪಿ ಬಂಧನ ಡಿ.ಜೆ ಹಳ್ಳಿ ಗಲಭೆ ಪ್ರಕರಣ: NIAಯಿಂದ 30 ಕಡೆ ದಾಳಿ, ಪ್ರಮುಖ ಆರೋಪಿ ಬಂಧನ

ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಅರಂಭವಾದ ಕೆಲವೇ ಗಂಟೆಗಳಲ್ಲಿ ನವೀನ್ ಬಂಧಿಸಲಾಗಿತ್ತು. ಗಲಭೆಗೆ ಕೋರರರು ನವೀನ್ ಪೊಲೀಸ್ ಠಾಣೆಯಲ್ಲಿ ಇದ್ದಾನೆ ಎಂದು ಶಂಕಿಸಿ ಮುತ್ತಿಗೆ ಹಾಕಿದ್ದರು. ಠಾಣೆಗೆ ಬೆಂಕಿ ಹಚ್ಚಿದ್ದರು.

Recommended Video

CSK ತಂಡದ DJ Bravo ಇನ್ನುಳಿದ ಪಂದ್ಯದಲ್ಲಿ ಆಗೋದಿಲ್ಲ , ಏಕೆ | Oneindia Kannada

English summary
Karnataka high court granted bail for P. Naveen who arrested in connection with riots in the DJ Halli and KG Halli police stations limits of Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X