ಡಿಜೆ ಹಳ್ಳಿ ಗಲಭೆ: ಕಾಂಗ್ರೆಸ್ಸಿಗೆ ಕುಮಾರಸ್ವಾಮಿ ಬಹಿರಂಗ ಸವಾಲು ಹಾಕಿ ಕೇಳಿದ 5 ಪ್ರಶ್ನೆಗಳು

ಬೆಂಗಳೂರು, ಆ 21: ನಗರದ ಪೂರ್ವ ಭಾಗದಲ್ಲಿ ನಡೆದ ಗಲಭೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಆಡಳಿತ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ಸಿಗೆ ಐದು ಪ್ರಶ್ನೆಗಳನ್ನು ಎಸೆದು ಬಹಿರಂಗ ಪತ್ರ ಬರೆದಿದ್ದಾರೆ.

Recommended Video

      ಇವನು ಕೊಟ್ಟ ಆಫರ್ ನೋಡಿ ಅಂಗಡಿ ಸೀಲ್ ಮಾಡಿದ ಪೊಲೀಸ್ | Oneindia Kannada

      ಎಚ್ಡಿಕೆ ಬರೆದ ಪತ್ರದ ಅಂಶಗಳು ಮತ್ತು ಪ್ರಶ್ನೆಗಳು ಹೀಗಿವೆ: , "ಡಿ.ಜೆ ಹಳ್ಳಿ ಗಲಭೆಯು ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆ. ಈ ಘಟನೆಯನ್ನು ಪರಾಮರ್ಶಿಸಿ, ದುಷ್ಟರನ್ನು ಶಿಕ್ಷಿಸುವ ಕಾರ್ಯವಾಗಬೇಕಾಗಿತ್ತು".

      "ಈ ಘಟನೆಯ ಅಧ್ಯಯನದ ಮೂಲಕ ಮುಂದಿನ ದಿನಗಳಲ್ಲಿ ಗಲಭೆಗಳು ಸಂಭವಿಸದಂತೆ ಎಚ್ಚರಿಕೆ, ಜವಾಬ್ದಾರಿಯುತ ನಡವಳಿಕೆಯನ್ನು ಸರ್ಕಾರ ಮತ್ತು ಅದರ ಚುಕ್ಕಾಣಿ ಹಿಡಿದಿರುವ ಪಕ್ಷ, ವಿಪಕ್ಷ ಪ್ರದರ್ಶಿಸಬೇಕಾಗಿತ್ತು".

      "ಆದರೆ, ಈ ಘಟನೆಯನ್ನೇ ನೆಪ ಮಾಡಿಕೊಂಡು ರಾಷ್ಟ್ರೀಯ ಪಕ್ಷಗಳೆರಡು ಕೆಸರೆರಚಾಟದಲ್ಲಿ ತೊಡಗಿವೆ. ಈ ಮೂಲಕ ಜನರ ಮನಸ್ಸಿನಲ್ಲಿರಬಹುದಾದ ತಮ್ಮ ವಿಶ್ವಾಸಾರ್ಹತೆ, ಉತ್ತರದಾಯಿತ್ವವನ್ನು ಬಿಜೆಪಿ ಕಾಂಗ್ರೆಸ್‌ ಪಕ್ಷಗಳೆರಡೂ ಕಳೆದುಕೊಂಡು ನಿರ್ವಾಣಗೊಂಡಿವೆ. ನನ್ನ ಕೆಲವು ಪ್ರಶ್ನೆಗಳಿಗೆ ಉತ್ತರಿಸಬಲ್ಲವೇ?

      ಡಿ.ಜೆ. ಹಳ್ಳಿ ಗಲಭೆ ಪ್ರಕರಣ

      ಡಿ.ಜೆ. ಹಳ್ಳಿ ಗಲಭೆ ಪ್ರಕರಣ

      1. ಡಿಜೆ ಹಳ್ಳಿ ಗಲಭೆ ಪ್ರಕರಣ ಮತ್ತು ಪಾದರಾಯನಪುರ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ರಕ್ಷಕನಂತೆ ತನ್ನನ್ನು ತಾನು ಬಿಂಬಿಸಿಕೊಳ್ಳುತ್ತಿದೆ. ಅನ್ಯ ಕೋಮಿನ ಜನರ ಅಪರಾಧ ಪ್ರಕರಣಗಳ ಸಂದರ್ಭದಲ್ಲಿ ಎದ್ದು ನಿಲ್ಲುವ ಕಾಂಗ್ರೆಸ್‌, ಪೌರತ್ವ ತಿದ್ದುಪಡಿ ಕಾಯ್ದೆಯಂಥ ದುರಿತ ಕಾಲದಲ್ಲಿ ಅಲ್ಪಸಂಖ್ಯಾತರ ರಕ್ಷಣೆಗೆ ಏಕೆ ನಿಲ್ಲಲಿಲ್ಲ? ಮಂಗಳೂರಿನಲ್ಲಿ ಗೋಲಿಬಾರ್‌ ಆಗಿ ಅಲ್ಪಸಂಖ್ಯಾತ ಯುವಕರು ಮೃತಪಟ್ಟಾಗ ಎಲ್ಲಿ ಹೋಗಿತ್ತು ಈ ಕಾಳಜಿ? ಕ್ರೈಂ ಸಂಭವಿಸಿದಾಗ ಮಾತ್ರವೇ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ರಕ್ಷಣೆ ಕಾಣಿಸುತ್ತದೆಯೇ?

      ಇನ್ನೊಂದು ಕಡೆಯವರು ಯಾರು ಎಂದು ಕಾಂಗ್ರೆಸ್‌ ಧೈರ್ಯದಿಂದ ಹೇಳಬಹುದೇ

      ಇನ್ನೊಂದು ಕಡೆಯವರು ಯಾರು ಎಂದು ಕಾಂಗ್ರೆಸ್‌ ಧೈರ್ಯದಿಂದ ಹೇಳಬಹುದೇ

      2. ಗಲಭೆಯಲ್ಲಿ ನಷ್ಟವನ್ನು ಗಲಭೆಕೋರರಿಂದ ಸಂಗ್ರಹಿಸಲು ಹೊರಟ ಸರ್ಕಾರಕ್ಕೆ ಕಾಂಗ್ರೆಸ್‌ ಸಲಹೆಹೊಂದನ್ನು ನೀಡಿದೆ. ‘ಇನ್ನೊಂದು ಕಡೆ‘ಯವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಹೇಳಿದೆ. ಹಾಗಾದರೆ, ಆ ‘ಇನ್ನೊಂದು ಕಡೆಯವರು' ಯಾರು ಎಂದು ಕಾಂಗ್ರೆಸ್‌ ಧೈರ್ಯದಿಂದ ಹೇಳಬಹುದೇ?

      ಎಸ್‌ಡಿಪಿಐ ಅನ್ನು ನಿಷೇಧಿಸುವ ವಿಚಾರ

      ಎಸ್‌ಡಿಪಿಐ ಅನ್ನು ನಿಷೇಧಿಸುವ ವಿಚಾರ

      3. ಎಸ್‌ಡಿಪಿಐ ಅನ್ನು ನಿಷೇಧಿಸುವ ವಿಚಾರ ಬಂದಾಗ ಕಾಂಗ್ರೆಸ್‌ ಸಿಡಿದೆದ್ದು ನಿಲ್ಲುತ್ತದೆ. ತಾಕತ್ತಿದ್ದರೆ ಅದನ್ನು ನಿಷೇಧಿಸಿ ಎಂದು ಆಡಳಿತದಲ್ಲಿರುವವರಿಗೆ ಸವಾಲೆಸೆಯುತ್ತದೆ. ಅದರ ನಿಷೇಧವಾಗುವುದು, ಆಗದೇ ಇರುವುದರಲ್ಲಿ ಕಾಂಗ್ರೆಸ್‌ಗೆ ಏನು ಲಾಭವಿದೆ? ಇದರ ವಿವರಣೆ ನೀಡಬಹುದೇ?

      ಕಾಂಗ್ರೆಸ್ಸಿಗೆ ಕುಮಾರಸ್ವಾಮಿ ಬಹಿರಂಗ ಸವಾಲು ಹಾಕಿ ಕೇಳಿದ 5 ಪ್ರಶ್ನೆಗಳು

      ಕಾಂಗ್ರೆಸ್ಸಿಗೆ ಕುಮಾರಸ್ವಾಮಿ ಬಹಿರಂಗ ಸವಾಲು ಹಾಕಿ ಕೇಳಿದ 5 ಪ್ರಶ್ನೆಗಳು

      4. ಗಲಭೆಯಲ್ಲಿ ಏನೋ ರಾಜಕೀಯ ಷಡ್ಯಂತ್ರವಿದೆ ಎಂಬುದು ಕಾಂಗ್ರೆಸ್ ಆರೋಪ. ಆ ಷಡ್ಯಂತ್ರ ಕಾಂಗ್ರೆಸ್‌ ಒಳಗಿನದ್ದೋ, ಹೊರಗಿನದ್ದೋ? ಟಿಕೆಟ್‌ ಆಕಾಂಕ್ಷಿಗಳದ್ದೋ? ಗುಟ್ಟಾಗಿರುವ ಈ ವಿಷಯ ಬಹಿರಂಗಗೊಳಿಸಲು ಕಾಂಗ್ರೆಸ್‌ಗೆ ತಾಕತ್ತು ಇದೆಯೇ? ಬೇರೆ ಪಕ್ಷಗಳಿಂದ ಕರೆದುಕೊಂಡು ಹೋದ ಮುಖಂಡರು ಕಾಂಗ್ರೆಸ್‌ಗೆ ಕೆಲ ಬಾರಿ ಅಪಥ್ಯವಾಗುತ್ತಾರೆಯೇ?

      5. ಆಂತರಿಕ ಸಮಸ್ಯೆಯನ್ನು ಗಲಭೆಯಾಗಿ ಪರಿವರ್ತಿಸಿ, ಎರಡು ಕೋಮುಗಳ ನಡುವೆ ಮನಸ್ಥಾಪ ತಂದಿಟ್ಟು, ಸಾಮಾಜಿಕ ಸಾಮರಸ್ಯ ಹಾಳು ಮಾಡಿದ ಬಗ್ಗೆ ಕಾಂಗ್ರೆಸ್‌ಗೆ ಸ್ವಲ್ಪವಾದರೂ ಅಳುಕಿದೆಯೇ?

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+