ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ.ಕೆ. ಸಹೋದರರನ್ನು ರಾಜರಾಜೇಶ್ವರಿ ನಗರದಿಂದ ಹೊರ ಹಾಕಿ!

|
Google Oneindia Kannada News

ಬೆಂಗಳೂರು, ಅ. 30: ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಮೊದಲ ಚುನಾವಣೆ ನಡೆಯುತ್ತಿದೆ. ಹೀಗಾಗಿ ಅವರ ಆಸ್ತಿತ್ವ ಉಳಿಸಿಕೊಳ್ಳಲು ಅಕ್ರಮಗಳ ಮೇಲೆ ಅಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅವರು ಮಾತನಾಡಿದರು.

ಹೀಗಾಗಿಯೇ ಅಕ್ಟೋಬರ್ 19 ರಂದು ಮುನಿರತ್ನ ಅವರು ಚುನಾವಣಾ ಅಯೋಗಕ್ಕೆ ದೂರನ್ನು ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದವರು ವೋಟರ್ ಐಡಿ ಕಾರ್ಡ್‌ಗಳನ್ನು ಸಂಗ್ರಹಿಸಿ,‌ ನಮ್ಮ ಅಭ್ಯರ್ಥಿ ಮುನಿರತ್ನ ಅವರ ಮೇಲೆ ಹಾಕಿದ್ದಾರೆ. ಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು ವೋಟರ್ ಐಡಿ ಕಾರ್ಡ್‌ಗಳನ್ನು ಸಂಗ್ರಹಿಸಿರುವ ಮಾಹಿತಿಯನ್ನು ಆಯೋಗಕ್ಕೆ ಕೊಟ್ಟಿದ್ದೇವೆ.

dk brothers were committing illegal acts to win in by election: mp shobha karandlaje

ನಾರಾಯಣಸ್ವಾಮಿ ಹಾಗೂ ಇತರರು, ಒಂದು ಸಾವಿರಕ್ಕೂ ಹೆಚ್ಚು ಐಡಿ ಕಾರ್ಡ್‌ಗಳನ್ನು ಸಂಗ್ರಹಿಸಿ ಚಿತ್ರೀಕರಣ ಮಾಡಿ ಅಯೋಗಕ್ಕೆ ನೀಡಿದ್ದಾರೆ. ಅದು‌ ಸುಳ್ಳು ಎಂಬುದು ಅಯೋಗಕ್ಕೂ ಮನವರಿಕೆ ಆಗಿದೆ. ರಾಜರಾಜೇಶ್ವರಿನಗರ, ನಂದಿನಿಲೇಔಟ್ ಹಾಗೂ ಯಶವಂತಪುರ ಪೊಲೀಸ್ ಠಾಣೆಗಳು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ.

dk brothers were committing illegal acts to win in by election: mp shobha karandlaje

Recommended Video

RRNagar Congress Candidate Kusuma Exclusive Interview | ನಾನು ಯಾರನ್ನೂ ನಂಬೋಲ್ಲ !! | Oneindia Kannada

ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಅಕ್ರಮ ಮಾಡುತ್ತಿರುವುದು ಡಿಕೆ ಬ್ರದರ್ಸ್, ನಮ್ಮ ಅಭ್ಯರ್ಥಿಯಲ್ಲ. ಅಧಿಕಾರಿಗಳ ವಿರುದ್ಧ ದಬ್ಬಾಳಿಕೆ ಮಾಡುವುದು,‌ ಒತ್ತಡ ಹಾಕುವುದನ್ನು ಮಾಡಬಾರದು. ಇಂದಿನಿಂದ ಮೂರು ದಿನಗಳ ಕಾಲ ಚುನಾವಣಾ ಅಕ್ರಮ ಮಾಡಲು ಸರಿಯಾದ ಸಮಯ. ಈ ನಿಟ್ಟಿನಲ್ಲಿ ಡಿ.ಕೆ. ಸುರೇಶ್ ಕ್ಷೇತ್ರಕ್ಕೆ ಕಾಲಿಡಬಾರದು. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಆಖಾಡದಿಂದ ಡಿಕೆ ಸಹೋದರರನ್ನು ಹೊರ ಹಾಕಿ ಎಂಬುದಷ್ಟೇ ನಮ್ಮ ಆಗ್ರಹ ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

English summary
BJP MP Shobha Karandlajee alleged that the first election is being held after D.K. Shivakumar become KPCC president. So they were committing illegal acts to win in by election. She was speaking at the state BJP office in Malleshwar. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X