ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೂನ್ 7 ರಂದು ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ?

|
Google Oneindia Kannada News

ಬೆಂಗಳೂರು, ಮೇ 23: ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿ ಸುಮಾರು ಎರಡೂವರೆ ತಿಂಗಳು ಆಗಿದೆ. ಆದರೆ, ಈವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿಲ್ಲ. ಕಾರಣಾಂತರಗಳಿಂದ ಪದಗ್ರಹಣ ಸಮಾರಂಭ ಮುಂದಕ್ಕೆ ಹೋಗುತ್ತಲೇ ಇದೆ.

Recommended Video

BJP ಗ್ರಾಮ ಪಂಚಾಯಿತಿ ವಿಚಾರದಲ್ಲಿ ಹುನ್ನಾರ ಮಾಡುತ್ತಿದೆ | Oneindia kannada

ಇದೀಗ, ಜೂನ್ 7 ರಂದು ಡಿಕೆ ಶಿವಕುಮಾರ್ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ನೇಮಕಕೆಪಿಸಿಸಿ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ನೇಮಕ

ಶುಕ್ರವಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ನಿಗಮ ಮಂಡಳಿಗಳ ಮಾಜಿ ಅಧ್ಯಕ್ಷರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ವಿಷಯ ಹಂಚಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Dk Shiva Kumar Might Be Take Charge As A Kpcc President On June 7th

ಮಾರ್ಚ್ 11ಕ್ಕೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದರು. ಈ ಹಿಂದೆ ಮೇ 31ಕ್ಕೆ ಪದಗ್ರಹಣ ಕಾರ್ಯಕ್ರಮ ಮಾಡುವ ಆಲೋಚನೆ ಇತ್ತು. ಆದರೆ ಲಾಕ್ ಡೌನ್ ಮೇ 31ರವರೆಗೂ ಇರುವುದರಿಂದ ಪದಗ್ರಹಣ ಕಾರ್ಯಕ್ರಮ ಮುಂದೂಡಲಾಯಿತು. ಈಗ ಜೂನ್ 7ಕ್ಕೆ ನಿಗದಿ ಮಾಡಲಾಗಿದೆ.

ಈ ಕುರಿತು ರಾಜ್ಯದ ಎಲ್ಲ ಜಿಲ್ಲೆಗಳ ಕಾರ್ಯಕರ್ತರಿಗೆ ತಯಾರಿ ಮಾಡಿಕೊಳ್ಳಿ ಎಂದು ಡಿಕೆ ಶಿವಕುಮಾರ್ ಸೂಚಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪ್ರತಿಯೊಂದು ಗ್ರಾಮದಲ್ಲೂ ಪದಗ್ರಹಣ ಕಾರ್ಯಕ್ರಮ ವೀಕ್ಷಣೆ ಮಾಡುವುದಕ್ಕೆ ಟಿವಿ ಅಳವಡಿಸುವುದು. ಸಾರ್ವಜನಿಕ ಪ್ರದೇಶದಲ್ಲಿ ಟಿವಿ ಗಳನ್ನು ಅಳವಡಿಸಿ ಪಕ್ಷದ ಕಾರ್ಯಕರ್ತರು ತಾವು ಇರುವ ಸ್ಥಳದಲ್ಲಿ ಅಂತರ ಕಾಯ್ದುಕೊಂಡು ಭಾಗವಹಿಸಲು ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

English summary
Congress leader DK shiva kumar might be take charge as a kpcc president on june 7th in simple function.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X