ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಆಸ್ಪತ್ರೆಗೆ ದಾಖಲು

|
Google Oneindia Kannada News

Recommended Video

D.K.Shivakumar admitted to Apollo hospital Seshadripuram. | Oneindia Kannada

ಬೆಂಗಳೂರು, ನವೆಂಬರ್ 12 : ಮಾಜಿ ಸಚಿವ, ಕನಕಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಿ. ಕೆ. ಶಿವಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಡಿ. ಕೆ. ಶಿವಕುಮಾರ್ ಬೆಂಗಳೂರಿನಲ್ಲಿದ್ದಾರೆ.

ಸೋಮವಾರ ತಡರಾತ್ರಿ ಡಿ. ಕೆ. ಶಿವಕುಮಾರ್ಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಶೇಷಾದ್ರಿಪುರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಕ್ತದೊತ್ತಡ ಸಹ ಕಾಣಿಸಿಕೊಂಡಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಆಸ್ಪತ್ರೆಯಿಂದ ಡಿ. ಕೆ. ಶಿವಕುಮಾರ್ ಡಿಸ್ಚಾರ್ಜ್‌, ವಿಶ್ರಾಂತಿಗೆ ಸಲಹೆಆಸ್ಪತ್ರೆಯಿಂದ ಡಿ. ಕೆ. ಶಿವಕುಮಾರ್ ಡಿಸ್ಚಾರ್ಜ್‌, ವಿಶ್ರಾಂತಿಗೆ ಸಲಹೆ

ನವೆಂಬರ್ 1ರ ಶುಕ್ರವಾರ ಬೆನ್ನು ನೋವು, ರಕ್ತದೊತ್ತಡದ ಕಾರಣ ಡಿ. ಕೆ. ಶಿವಕುಮಾರ್ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು.

ಉಪ ಚುನಾವಣೆ; ಬಿಜೆಪಿ ನಾಯಕರಿಂದ ಡಿ. ಕೆ. ಶಿವಕುಮಾರ್ ಭೇಟಿ!ಉಪ ಚುನಾವಣೆ; ಬಿಜೆಪಿ ನಾಯಕರಿಂದ ಡಿ. ಕೆ. ಶಿವಕುಮಾರ್ ಭೇಟಿ!

DK Shivakumar

ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಬಳಿಕ ಡಿ. ಕೆ. ಶಿವಕುಮಾರ್ ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ವಿವಿಧ ದೇವಾಲಯಗಳಿಗೆ ನವೆಂಬರ್ 7 ಮತ್ತು 8ರಂದು ಭೇಟಿ ನೀಡಿದ್ದರು.

ಡಿ. ಕೆ. ಶಿವಕುಮಾರ್ ಭೇಟಿಯಾದ ಬಿಜೆಪಿ ನಾಯಕ ಎಸ್. ಎಂ. ಕೃಷ್ಣಡಿ. ಕೆ. ಶಿವಕುಮಾರ್ ಭೇಟಿಯಾದ ಬಿಜೆಪಿ ನಾಯಕ ಎಸ್. ಎಂ. ಕೃಷ್ಣ

ನವೆಂಬರ್ 10ರಂದು ಉಪ ಚುನಾವಣೆ ಕುರಿತು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿಯೂ ಅವರು ಪಾಲ್ಗೊಂಡಿದ್ದರು. ಸೋಮವಾರ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿತ್ತು. ನವದೆಹಲಿಯ ತಿಹಾರ್ ಜೈಲಿನಲ್ಲಿ ಸುಮಾರು 48 ದಿನಗಳ ಕಾಲ ಇದ್ದ ಡಿ. ಕೆ. ಶಿವಕುಮಾರ್ ದೆಹಲಿ ಆಸ್ಪತ್ರೆಯಲ್ಲಿಯೂ ಅನಾರೋಗ್ಯದ ಕಾರಣದಿಂದಾಗಿ ಚಿಕಿತ್ಸೆ ಪಡೆದಿದ್ದರು.

ಡಿ. ಕೆ. ಶಿವಕುಮಾರ್‌ಗೆ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದರು. ಆದರೆ, ಅಧಿಕ ಓಡಾಟದ ಕಾರಣ ಅವರು ಬಳಲಿದ್ದಾರೆ.

English summary
Former minister and Congress leader D.K.Shivakumar admitted to Apollo hospital Seshadripuram, Bengaluru on November 11, 2019 night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X