ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಟಿ ವಿಚಾರಣೆಗೆ ಹಾಜರಾದ ಡಿಕೆಶಿ ಹಾಗೂ ಅವರ ಕುಟುಂಬ

By Mahesh
|
Google Oneindia Kannada News

ಬೆಂಗಳೂರು, ನವೆಂಬರ್ 06: ಇಂಧನ ಸಚಿವ ಡಿಕೆ ಶಿವಕುಮಾರ್ ಹಾಗೂ ಅವರ ಕುಟುಂಬದವರು ಆದಾಯ ತೆರಿಗೆ ಇಲಾಖೆ ಕಚೇರಿಗೆ ಹಾಜರಾಗಿದ್ದಾರೆ.

ಆದಾಯ ತೆರಿಗೆ ಇಲಾಖೆಯಿಂದ ಡಿ.ಕೆ. ಶಿವಕುಮಾರ್ ಗೆ ಸಮನ್ಸ್ಆದಾಯ ತೆರಿಗೆ ಇಲಾಖೆಯಿಂದ ಡಿ.ಕೆ. ಶಿವಕುಮಾರ್ ಗೆ ಸಮನ್ಸ್

ಐಟಿ ಇಲಾಖೆಯಿಂದ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಅವರಿಗೆ ಮತ್ತೊಮ್ಮೆ ನೋಟಿಸ್ ಜಾರಿಯಾಗಿತ್ತು. ನವೆಂಬರ್ 06ರಂದು ವಿಚಾರಣೆಗೆ ಹಾಜರಾಗಬೇಕು. ಜತೆಗೆ ಚಾರ್ಟೆಡ್ ಅಕೌಂಟೆಂಟ್ ಗಳನ್ನು ಕರೆ ತರುವಂತಿಲ್ಲ ಎಂದು ನೋಟಿಸ್ ನಲ್ಲಿ ಸೂಚಿಸಲಾಗಿದೆ.

DK Shivakumar and family appear before IT Department for interrogation

ಅದರಂತೆ, ಡಿ.ಕೆ. ಶಿವಕುಮಾರ್​ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಐಟಿ ಕಚೇರಿಗೆ ಸೋಮವಾರ ಮಧ್ಯಾಹ್ನದ ವೇಳೆ ವಿಚಾರಣೆಗೆ ಹಾಜರಾದರು.

ಡಿಕೆ ಶಿವಕುಮಾರ್, ಅವರ ತಾಯಿ ಗೌರಮ್ಮ, ಪತ್ನಿ ಉಷಾ, ಮಗಳು ಐಶ್ವರ್ಯ ಜತೆ ಬೆಂಗಳೂರಿನ ಕ್ವೀನ್ಸ್​ ರಸ್ತೆಯಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಗೆ ಆಗಮಿಸಿದರು.

ನನ್ನ ಆಸ್ತಿ ಯೋಗೇಶ್ವರ್‌ ಗೆ ಉಡುಗೊರೆ ನೀಡುವೆ ಎಂದು ಡಿಕೆಶಿ ಹೇಳಿದ್ದೇಕೆ?ನನ್ನ ಆಸ್ತಿ ಯೋಗೇಶ್ವರ್‌ ಗೆ ಉಡುಗೊರೆ ನೀಡುವೆ ಎಂದು ಡಿಕೆಶಿ ಹೇಳಿದ್ದೇಕೆ?

ಎರಡು ತಿಂಗಳ ಹಿಂದೆ ಸದಾಶಿವನಗರದಲ್ಲಿರುವ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ ಸೇರಿದಂತೆ ಸುಮಾರು 60 ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಸುಮಾರು 3 ದಿನಗಳ ಕಾಲ ನಡೆದ ದಾಳಿಯ ಸಂದರ್ಭದಲ್ಲಿ ಹಲವು ಮಹತ್ವದ ದಾಖಲೆ ವಶಪಡಿಸಿಕೊಳ್ಳಲಾಗಿತ್ತು.

ವಶಪಡಿಸಿಕೊಂಡ ದಾಖಲೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಡಿಕೆ ಶಿವಕುಮಾರ್, ಡಿಕೆ ಸುರೇಶ್ ಹಾಗೂ ಕುಟುಂಬದವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

English summary
Income tax department has issued notice to Power Minister DK Shivakumar and family. DK Shivakumar should appear before IT department official latest by November 06 for interrogation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X