ಮಾಗಡಿ ಜನರಿಗೆ ಕಾವೇರಿ, ಹೇಮಾವತಿ, ಎತ್ತಿನಹೊಳೆ ನೀರು: ಸಿಹಿಸುದ್ದಿ ಕೊಟ್ಟ ಡಿ.ಕೆ.ಶಿವಕುಮಾರ್
ಮಾಗಡಿ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ಇದಕ್ಕೆ ಅಗತ್ಯವಿರುವ ಟೆಂಡರ್‌ಗಳನ್ನು ಈಗಾಗಲೇ ಕರೆಯಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಮಾಗಡಿಯಲ್ಲಿ ಬುಧವಾರ ನಡೆದ ವೈ.ಜಿ.ಗುಡ್ಡ ಏತ ನೀರಾವರಿ ಯೋಜನೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡರು.
ಸತ್ತೇಗಾಲದಿಂದ ಇಗ್ಗಲೂರಿಗೆ 26 ಕಿ.ಮೀ, ಇಗ್ಗಲೂರಿನಿಂದ ಮೊಗೇನಹಳ್ಳಿಗೆ 58 ಕಿ.ಮೀ. ಮೊಗೇನಹಳ್ಳಿಯಿಂದ ಕಣ್ವಕ್ಕೆ 6 ಕಿ.ಮೀ, ಕಣ್ವದಿಂದ ವೈ.ಜಿ. ಗುಡ್ಡಕ್ಕೆ 25 ಕಿ.ಮೀ ಸೇರಿ ಒಟ್ಟು 115 ಕಿ.ಮೀ ಮಾರ್ಗದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ನೀರನ್ನು ಪಂಪ್ ಮಾಡಿ ಹರಿಸಲಾಗುವುದು ಎಂದರು.

ನಾವು ಅಂತರ್ಜಲ ಹೆಚ್ಚಳ ಮಾಡಲು ಈ ನೀರು ತರುತ್ತಿದ್ದೇವೆ. ಇದಕ್ಕೆ 160 ಎಚ್.ಪಿ ಪಂಪ್ ಮೂಲಕ 115 ಕಿ.ಮೀ ದೂರಕ್ಕೆ ಲಿಫ್ಟ್ ಮಾಡಲಾಗುತ್ತಿದೆ. ಆಮೂಲಕ ಈ ಭಾಗದ ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದೇವೆ. ಇದರಿಂದ ರೈತರಿಗೆ ಶಕ್ತಿ ತುಂಬುವಂತಾಗುತ್ತದೆ. ಬಡ ರೈತನ ಬದುಕಿಸಲು, ಸಹಾಯ ಮಾಡಲು ರೈತರ ಮಕ್ಕಳಿಗೆ ಈ ಚಿಂತನೆ ಬರಲಿಲ್ಲವೇ? ಜನರಿಂದ ಮತ ಹಾಕಿಸಿಕೊಂಡು ರಾಜಕಾರಣ ಮಾಡಿಕೊಂಡಿರುವುದಲ್ಲ. ಜನ ನಮ್ಮನ್ನು ನಾಯಕರನ್ನಾಗಿ ಆಯ್ಕೆ ಮಾಡಿದ್ದು, ಜನರ ಬದುಕಿನಲ್ಲಿ ಬದಲಾವಣೆ ತರಲು ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ನಮ್ಮ ಕೆಲಸ ನೋಡಿ ನಾವು ಇಂತಹ ಕೆಲಸ ಮಾಡಲು ಆಗಲಿಲ್ಲವಲ್ಲ ಎಂದು ಕೈ ಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ವಿರುದ್ಧ ಪರೋಕ್ಷವಾಗಿ ಟೀಕಿಸಿದರು.
ಮಂಡ್ಯ ರೈತರಿಗೆ ಟ್ರಾನ್ಸ್ಫಾರ್ಮರ್ ಹಾಕಿಸಲಿ
ಕುಮಾರಣ್ಣ ಅವರು ಮಂಡ್ಯ ಸಂಸದರಾಗಿದ್ದಾರೆ, ಮದ್ದೂರಿನಲ್ಲಿ ರೈತರಿಗೆ ನಮ್ಮ ರೀತಿ ಟ್ರಾನ್ಸ್ಫಾರ್ಮರ್ ಹಾಕಿಸಲು ಹೇಳಿ ನೋಡೋಣ. ಕೇಂದ್ರ ಸರ್ಕಾರದಿಂದ ಹಣ ತಂದು ಮಂಡ್ಯದ ರೈತರಿಗೆ ಟ್ರಾನ್ಸ್ಫಾರ್ಮರ್ ಹಾಕಿಸಲಿ ಸಾಕು. ರೈತರ ಪಂಪ್‌ಸೆಟ್‌ಗಳಿಗೆ 10 ಹೆಚ್.ಪಿ ಉಚಿತ ವಿದ್ಯುತ್ ನೀಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಇಲ್ಲಿ ಬಂದಿದ್ದ ಕೆಲವು ಮಹಿಳಾ ಫಲಾನುಭವಿಗಳಿಗೆ ಪಟ್ಟಾ ದಾಖಲೆ ಕೊಟ್ಟಿದ್ದೇವೆ. ಅದರಲ್ಲಿ ಅವರ ಫೋಟೋ, ಅವರ ಮನೆ ಫೋಟೋ, ಇ ಖಾತಾ ನೀಡಿದ್ದೇವೆ. ಇದೇ ರೀತಿ 2.20 ಲಕ್ಷ ಜನರಿಗೆ ಆಸ್ತಿ ದಾಖಲೆ ನೀಡುವ ಮೂಲಕ ಭೂಮಿ ಗ್ಯಾರಂಟಿ ನೀಡಿದ್ದೇವೆ ಎಂದರು.
ನಮ್ಮದು ನಾಳೆ ಎನ್ನುವ ಸರ್ಕಾರವಲ್ಲ
ಶಾಸಕರಾಗಿ, ಸಂಸದರಾಗಿ ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವರು ಇಲ್ಲಿಗೆ ಬಂದು ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡುತ್ತಾರೆ. ನಾಳೆ ಕೆಲಸ ಮಾಡುತ್ತೇವೆ ಎಂಬುದು ಶತೃತ್ವ, ಇವತ್ತೇ ಕೆಲಸ ಮಾಡುತ್ತೇವೆ ಎಂಬುದು ಮಿತ್ರತ್ವ. ನಾಳೆ ಯಾರು ಇರುತ್ತಾರೋ ಇರುವುದಿಲ್ಲವೋ ಗೊತ್ತಿಲ್ಲ. ಅಧಿಕಾರ ಇದ್ದಾಗ ನಾವು ಏನು ಮಾಡಿದೆವು ಎಂಬುದು ಮುಖ್ಯ. ನಮ್ಮದು ನಾಳೆ ಎನ್ನುವ ಸರ್ಕಾರವಲ್ಲ, ಇಂದೇ ಎನ್ನುವ ಸರ್ಕಾರ ಎಂದರು.
ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಮತಕ್ಕಾಗಿ ಬಂದಾಗ ಯಾರು ಏನು ಮಾಡಿದ್ದಾರೆ ಎಂದು ಕೇಳಬೇಕು. ಕಾಂಗ್ರೆಸ್ ಕಾರ್ಯಕರ್ತರು ನೀವುಗಳು ಬೇರೆ ಪಕ್ಷಗಳ ನಿಮ್ಮ ಸ್ನೇಹಿತರ ಜತೆ ಯಾರ ಕಾಲದಲ್ಲಿ ಯಾವ ಕೆಲಸ ಆಗಿದೆ ಎಂದು ಲೆಕ್ಕಾಚಾರ ಹಾಕಬೇಕು. ಅಧಿಕಾರ ಯಾರಿಗೆ ಇರಲಿಲ್ಲ? ದಳದ ಸಿಎಂ, ಪ್ರಧಾನಿ ಎಲ್ಲರಿಗೂ ಅಧಿಕಾರ ಇತ್ತಲ್ಲವೇ? ಅಧಿಕಾರದಲ್ಲಿ ಇದ್ದಾಗ ಯಾವ ಸಾಕ್ಷಿ ಗುಡ್ಡೆ ಬಿಟ್ಟು ಹೋಗಿದ್ದಾರೆ? ಎಂದು ಪ್ರಶ್ನಿಸಿದರು.
ನಮ್ಮ ಕೆಲಸ, ತೀರ್ಮಾನಗಳಿಂದ ಈ ಭಾಗದ ಜನರ ಆಸ್ತಿ ಮೌಲ್ಯ ಹೆಚ್ಚಾಗಿದೆ. ಬಿಡದಿ ಟೌನ್ ಶಿಪ್ ಯೋಜನೆ ಭೂಸಂತ್ರಸ್ತರಿಗೆ ನಾನು ಎಕರೆಗೆ 2.50 ಕೋಟಿ ಪರಿಹಾರ ನಿಗದಿ ಮಾಡಿದ್ದೇನೆ. ಕುಮಾರಸ್ವಾಮಿ ಅವರು ಅಲ್ಲಿ ಎಕರೆಗೆ 6-7 ಸಾವಿರಕ್ಕೆ ಜಮೀನು ತೆಗೆದುಕೊಂಡಿದ್ದರು. ನಾನು ಕೂಡ ಎಕರೆಗೆ 7-8 ಲಕ್ಷಕ್ಕೆ 10-20 ಎಕರೆ ಜಮೀನು ಖರೀದಿ ಮಾಡಿದ್ದೇನೆ. ಭೂಸ್ವಾಧೀನವಾಗುವ ಕುಮಾರಸ್ವಾಮಿ ಅವರ ಜಮೀನಿಗೂ 2.50 ಕೋಟಿ ನಿಗದಿ ಮಾಡಿದ್ದೇವೆ. ನಾವು ಅಧಿಕಾರಕ್ಕೆ ಬಂದಾಗ ನಾವು ತೆಗೆದುಕೊಳ್ಳುವ ಒಂದು ತೀರ್ಮಾನ ಜನರಿಗೆ ಶಕ್ತಿ ತುಂಬುವಂತಿರಬೇಕು" ಎಂದು ಹೇಳಿದರು.

ಕುದುರೆ ರೇಸ್ ಆಡಿ ಎಂದಿಲ್ಲ
ಮೈಸೂರು ಮಹಾರಾಜರ ಕಾಲದಿಂದಲೂ ಕುಣಿಗಲ್‌ನಲ್ಲಿ ಕುದುರೆ ಸಾಕಲಾಗುತ್ತಿದೆ. ಬೆಂಗಳೂರು ರೇಸ್ ಕೋರ್ಸ್ ಅನ್ನು ಇಲ್ಲಿಗೆ ಸ್ಥಳಾಂತರಿಸುತ್ತೇವೆ ಎಂದರೆ ಇದಕ್ಕೆ ವಿರೋಧ ಮಾಡುತ್ತೀರಿ? ಇದರಿಂದ ಸುಮಾರು 2 ಸಾವಿರ ಜನರಿಗೆ ಕೆಲಸ ಸಿಗುತ್ತದೆ. ನಾವು ಕುಣಿಗಲ್ ಜನರಿಗೆ ರೇಸ್ ಆಡಿ ಎಂದು ಹೇಳಿಲ್ಲ ಎಂದರು.
ಮಾಗಡಿ ಕ್ಷೇತ್ರದ ನೀರಾವರಿ ಯೋಜನೆಗೆ 1 ಸಾವಿರ ಕೋಟಿ ಅನುದಾನ ನೀಡಿದ್ದೇನೆ. ಕುಣಿಗಲ್ ಕ್ಷೇತ್ರದ ನೀರಾವರಿ ಯೋಜನೆಗಳಿಗೆ 1 ಸಾವಿರ ಕೋಟಿ, ರಾಮನಗರ ಹಾಗೂ ಕನಕಪುರ ಕ್ಷೇತ್ರಗಳಿಗೆ 1 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಈ ಬಗ್ಗೆ ಬಿಜೆಪಿಯವರು ಉತ್ತರ ನೀಡಬೇಕು. ನಿಮ್ಮ ಕಾಲದಲ್ಲಿ ನೀವು ಏನು ಮಾಡಿದ್ದೀರಿ ಎಂದು ಹೇಳಿ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ತಿರುಗೇಟು ನೀಡಿದರು.
ತಾವರೆಕೆರೆ, ಕುಣಿಗಲ್‌ನಿಂದ ಇಲ್ಲಿಯವರೆಗೂ ಅತ್ಯುತ್ತಮ ರಸ್ತೆಗಳು ನಿರ್ಮಾಣ ಮಾಡಲಾಗಿದೆ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ. ಮುಂದೆಯೂ ನಮ್ಮ ಸರ್ಕಾರ ಅಧಿಕಾರದಲ್ಲಿ ಇರುತ್ತದೆ. 18-20 ತಿಂಗಳಲ್ಲಿ ಈ ಯೋಜನೆ ಮಾಡಲು ಸೂಚಿಸಲಾಗಿದೆ. ಮುಂಖ್ಯಮಂತ್ರಿ ವಿಚಾರವಾಗಿ ಈಗ ಮಾತನಾಡುವುದಿಲ್ಲ, ಮಾತನಾಡಿದರೆ ಅದನ್ನೇ ಬರೆಯುತ್ತಾರೆ. ಅದಕ್ಕೆ ಕಾಲ ಉತ್ತರ ನೀಡುತ್ತದೆ. ಸಧ್ಯದಲ್ಲೇ ಭೇಟಿಯಾಗಿ ನಿಮಗೆ ತಿಳಿಸುತ್ತೇನೆ ಎಂದೂ ಹೇಳಿದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ












Click it and Unblock the Notifications