ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನಕಪುರ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗಾಗಿ ಡಿ.ಕೆ.ಶಿವಕುಮಾರ್‌ ಅರ್ಜಿ ಸಲ್ಲಿಕೆ

|
Google Oneindia Kannada News

ಬೆಂಗಳೂರು, ನವೆಂಬರ್‌, 15: ಕೆಪಿಸಿಸಿ ಆದೇಶದಂತೆ ವಿಧಾನಸಭಾ ಚುನಾವಣೆಗೆ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕವಾಗಿದೆ. ಈ ಹಿನ್ನೆಲೆಯಲ್ಲಿ ಕನಕಪುರ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗಾಗಿ ನನ್ನ ಪರವಾಗಿ ಕೆಪಿಸಿಸಿ ಕಚೇರಿ ಕಾರ್ಯದರ್ಶಿಗಳಾದ ನಾರಾಯಣ್ ಅವರಿಗೆ ಅರ್ಜಿ ಸಲ್ಲಿಸಲಾಯಿತು. ಎಂಎಲ್‌ಸಿ ರವಿ ಅವರ ನೇತೃತ್ವದಲ್ಲಿ ನಾರಾಯಣ್ ಅವರಿಗೆ ಅರ್ಜಿ ಸಲ್ಲಿಸಲಾಯಿತು ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬಿರುಸಿನ ಚಟುವಟಿಕೆ

ಹಾಗೆಯೇ ಅರ್ಜಿ ಸಲ್ಲಿಸಲು ಇಂದು ಕೊನೆ ದಿನ ಆದ್ದರಿಂದ ಕೆಪಿಸಿಸಿ ಕಚೇರಿಯಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಅವರು, ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿನ್ನೆ ಅರ್ಜಿ ಸಲ್ಲಿಸಿದ್ದರು.

Breaking; ಮಹಿಳಾ ಕೆಎಎಸ್‌ ಅಧಿಕಾರಿ 5 ಲಕ್ಷದ ಜೊತೆ ಲೋಕಾಯುಕ್ತ ಬಲೆಗೆBreaking; ಮಹಿಳಾ ಕೆಎಎಸ್‌ ಅಧಿಕಾರಿ 5 ಲಕ್ಷದ ಜೊತೆ ಲೋಕಾಯುಕ್ತ ಬಲೆಗೆ

ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿದ್ದು, ಶೃಂಗೇರಿ, ತೀರ್ಥಹಳ್ಳಿ, ಚಿಕ್ಕಮಗಳೂರು ಪಾಂಡವಪುರ ಹಾಗೂ ದೇವರಹಿಪ್ಪರಿಗೆ ಸೇರಿದಂತೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು.

DK Shivakumar application submission for Kanakapura Assembly Constituency ticket

ಪ್ರತಿ ಕ್ಷೇತ್ರಗಳಲ್ಲಿ ಅರ್ಜಿ ಸಲ್ಲಿಕೆಯ ಜೊತೆಗೆ ಐದು ಸಾವಿರ ಶುಲ್ಕ, ಎರಡು ಲಕ್ಷ ರೂಪಾಯಿ ಡಿಸಿ ಸಲ್ಲಿಕೆ ಮಾಡಬೇಕಿದೆ. ಶಿವಮೊಗ್ಗ ನಗರಕ್ಕೆ 17 ಅರ್ಜಿಗಳು ಸಲ್ಲಿಕೆ ಆದರೆ, ಹರಪ್ಪನಹಳ್ಳಿ ಕ್ಷೇತ್ರಕ್ಕೆ 13 ಅರ್ಜಿಗಳು ಸಲ್ಲಿಕೆಯಾಗಿವೆ. ಪುಲಕೇಶಿ ನಗರ ಕ್ಷೇತ್ರದ ಟಿಕೆಟ್‌ಗಾಗಿ ಅಖಂಡ ಶ್ರೀನಿವಾಸ ಮೂರ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಕೆಯ ಸಂದರ್ಭದಲ್ಲಿ ಬೆಂಬಲಿಗರು ಶಕ್ತಿ ಪ್ರದರ್ಶನ ಮಾಡಿದರು. ಆದರೆ ಪುಲಕೇಶಿ ನಗರಕ್ಕೆ ಪ್ರಸನ್ನ ಕುಮಾರ್ ಕೂಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಅಖಂಡ ಶ್ರೀನಿವಾಸ ಮೂರ್ತಿಗೆ ಪ್ರಸನ್ನ ಕುಮಾರ್ ಪೈಪೋಟಿ ನೀಡಲಿದ್ದಾರೆ.

English summary
KPCC President DK Shivakumar application submission for Kanakapura Assembly Constituency ticket, application submission to Narayan led by MLC Ravi know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X