ಇಡಿ ಸಮನ್ಸ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಡಿ.ಕೆ.ಶಿವಕುಮಾರ್
ಬೆಂಗಳೂರು, ಸೆಪ್ಟೆಂಬರ್ 03: ಇಡಿ (ಜಾರಿ ನಿರ್ದೇಶನಾಲಯ) ನೀಡಿರುವ ಸಮನ್ಸ್ ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಕೆಲವು ದಿನಗಳ ಹಿಂದಷ್ಟೆ ಇಡಿ ನೀಡಿದ್ದ ಸಮನ್ಸ್ ರದ್ದು ಮಾಡುವಂತೆ ಕೋರಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅದನ್ನು ಹೈಕೋರ್ಟ್ ರದ್ದು ಮಾಡಿತ್ತು. ಈಗ ಮತ್ತೆ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮೂರನೇ ದಿನ ಇಡಿಯಿಂದ ಡಿ.ಕೆ.ಶಿವಕುಮಾರ್ ವಿಚಾರಣೆ
ದೆಹಲಿಯ ಫ್ಲಾಟ್‌ನಲ್ಲಿ ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಡಿಕೆ.ಶಿವಕುಮಾರ್ ಮತ್ತು ಇತರೆ ಆರೋಪಿಗಳಾದ ಆಂಜನೇಯ, ಸಚಿನ್ ನಾರಾಯಣ್, ಸುನಿಲ್ ಶರ್ಮಾ ಅವರುಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯ ವಿಚಾರಣೆಯನ್ನು ಇಂದೇ ಕೈಗೊಳ್ಳುವಂತೆ ಮನವಿ ಕೂಡ ಸಲ್ಲಿಸಲಾಯಿತು.
ಅರ್ಜಿಯ ಶೀಘ್ರ ವಿಚಾರಣೆಗೆ ಮನಸ್ಸು ಮಾಡದ ಹೈಕೋರ್ಟ್, ಸೆಪ್ಟೆಂಬರ್ ಐದಕ್ಕೆ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ. ಕೆಲವು ದಿನಗಳ ಹಿಂದಷ್ಟೆ ಹೈಕೋರ್ಟ್ ಡಿಕೆಶಿ ಸಲ್ಲಿಸಿದ್ದ ಇದೇ ಮಾದರಿಯ ಅರ್ಜಿಯನ್ನು ತಿರಸ್ಕರಿಸಿತ್ತು.
ವಿಚಾರಣೆಗೆ ತೆರಳುವ ಮುನ್ನಾ ಭಾವುಕರಾದ ಗಟ್ಟಿ ಗುಂಡಿಗೆಯ ಡಿಕೆ.ಶಿವಕುಮಾರ್
ಶುಕ್ರವಾರದಿಂದ ಇಂದಿನ ವರೆಗೂ ಸತತವಾಗಿ (ಭಾನುವಾರ ಹೊರತುಪಡಿಸಿ) ಡಿ.ಕೆ.ಶಿವಕುಮಾರ್ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ.