ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನ ಪ್ರತಿನಿಧಿಗಳ ಕೋರ್ಟ್‌ಗೆ ಡಿಕೆ ಶಿವಕುಮಾರ್ ಹಾಜರ್

|
Google Oneindia Kannada News

ಬೆಂಗಳೂರು, ನವೆಂಬರ್ 26: ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಆದಾಯ ತೆರಿಗೆ ಇಲಾಖೆ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಹಾಜರಾಗಿದ್ದಾರೆ.

ಕೋರ್ಟ್ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಜಿ ಸಚಿವ ಡಿಕೆ ಶಿವಕುಮಾರ್ ಮನೆ ಮೇಲೆ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು.

ಉಪ ಚುನಾವಣೆ ವೇಳೆ ಮಹದಾಯಿ ಅಸ್ತ್ರ ಬಳಸಿದ ಟ್ರಬಲ್ ಶೂಟರ್ಉಪ ಚುನಾವಣೆ ವೇಳೆ ಮಹದಾಯಿ ಅಸ್ತ್ರ ಬಳಸಿದ ಟ್ರಬಲ್ ಶೂಟರ್

ಪ್ರಕರಣದಲ್ಲಿರುವ ಡಿಕೆ ಶಿವಕುಮಾರ್ ಹಾಗೂ ಆಪ್ತರ ಹೆಸರುಗಳು ಇದ್ದವು. ಕೇಸಿನಲ್ಲಿರುವ ಹೆಸರು ಕೈಬಿಡುವಂತೆ ಡಿಕೆ ಶಿವಕುಮಾರ್ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಡಿಕೆ ಶಿವಕುಮಾರ್ ಸಚಿವರಾಗಿದ್ದ ವೇಳೆ ಅವರ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.

DK Shivakumar Apprears Before The Special Court

ಹೈಕೋರ್ಟ್ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು, ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಇಂದು ಕೋರ್ಟ್‌ಗೆ ಹಾಜರಾಗಿದ್ದರು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್‌ರನ್ನು ಸೆಪ್ಟೆಂಬರ್ 3ರಂದು ಬಂಧಿಸಿತ್ತು.

ಇದಕ್ಕೂ ಮೊದಲು ಆಗಸ್ಟ್ 30ರಿಂದ ಸತತ ನಾಲ್ಕು ದಿನ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಅವರನ್ನು ವಿಶೇಷ ನ್ಯಾಯಾಲಯವು ಇ.ಡಿ ವಶಕ್ಕೆ ಒಪ್ಪಿಸಿತ್ತು.

English summary
Fomer Minister DK Shivakumar will appear before the special Court in the case of IT Raid.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X