ಸೋನಿಯಾ ಭೇಟಿಗೆ ಸಿಗದ ಅವಕಾಶ: ಕಾದು ವಾಪಸ್ಸಾದ ಡಿ.ಕೆ.ಶಿವಕುಮಾರ್
Recommended Video
ಬೆಂಗಳೂರು, ಜನವರಿ 29: ಸತತ ಐದು ದಿನಗಳಿಂದ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದ ಡಿ.ಕೆ.ಶಿವಕುಮಾರ್ ವರಿಷ್ಠರ ಭೇಟಿಗೆ ಅವಕಾಶಸ ಸಿಗದ ಕಾರಣ ಬೆಂಗಳೂರಿಗೆ ಹಿಂದುರಿಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಚರ್ಚಿಸಲೆಂದು ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದರು. ಕೆಲವು ನಾಯಕರನ್ನು ಅವರು ಭೇಟಿಯಾದರಾದರೂ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗಲಿಲ್ಲ.
ದೆಹಲಿ ವಿಧಾನಸಭೆ ಚುನಾವಣೆಗಳಲ್ಲಿ ನಿರತರಾಗಿರುವ ಕಾಂಗ್ರೆಸ್ ನಾಯಕರು, ಡಿ.ಕೆ.ಶಿವಕುಮಾರ್ ಅವರಿಗೆ 'ಸಂದೇಶ'ವಷ್ಟೆ ನೀಡಿ ವಾಪಸ್ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ.

ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳುವ ಮುನ್ನಾ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾತುಕತೆ ನಡೆಸಿದ್ದರು. ತಮ್ಮ ಬೆಂಬಲಿಗರಲ್ಲಿ ಒಬ್ಬರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿಸುವ ಪ್ರಯತ್ನವನ್ನು ಸಿದ್ದರಾಮಯ್ಯ ಮಾಡಿದ್ದರು. ಅಲ್ಲದೆ ಹಾಗೊಂದು ವೇಳೆ ಆಗದಿದ್ದಲ್ಲಿ, ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನಾಗಿ ಮಾಡಬೇಕೆಂಬ ಒತ್ತಾಯವನ್ನೂ ಸಿದ್ದರಾಮಯ್ಯ ಮಾಡಿದ್ದಾರೆ.
ಆದರೆ ಇದು ಡಿ.ಕೆ.ಶಿವಕುಮಾರ್ ಅವರಿಗೆ ಒಪ್ಪಿಗೆ ಆಗಿಲ್ಲವಾದ್ದರಿಂದ ಮಾತುಕತೆಗೆಂದು ದೆಹಲಿಗೆ ತೆರಳಿದ್ದ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಮಾತುಕತೆ ನಡೆಸಿ, 'ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಿಸುವುದಾದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನನಗೆ ಬೇಡ' ಎಂದು ನೇರವಾಗಿಯೇ ಹೇಳಿದ್ದಾರೆ ಎನ್ನಲಾಗುತ್ತಿದೆ.
ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ನಾಲ್ವರು ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಗೊಂದಲಗಳು ಇವೆ.












Click it and Unblock the Notifications