ಜಮೀರ್ ಅಹ್ಮದ್ ಸಂಪುಟ ಸೇರಲು ಅಡ್ಡಿಯಾದ್ರಾ ಡಿಕೆ ಶಿವಕುಮಾರ್?
ಬೆಂಗಳೂರು, ಮೇ 19: ಕಾಂಗ್ರೆಸ್ ಸರ್ಕಾರ ರಚನೆಗೆ ಈಗಾಗಲೇ ಮುಹೂರ್ತ ಫಿಕ್ಸ್ ಆಗಿದೆ. ಮೇ 20 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಸಿಎಂ ಆಗಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರ ಜೊತೆ 20 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ತಮ್ಮ ಆಪ್ತ 20 ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಬೇಡಿಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಒಪ್ಪಿಕೊಂಡ ನಂತರವೇ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜಿಯಾಗಿದ್ದು ಎಂದು ಹೇಳಲಾಗಿದೆ. ಡಿಕೆ ಶಿವಕುಮಾರ್ ಅವರು ಜಲಸಂಪನ್ಮೂಲ ಮತ್ತು ಇಂಧನ ಖಾತೆಗಳನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ.

ಸಿದ್ಧರಾಮಯ್ಯ ಅವರ 13 ಆಪ್ತರಿಗೆ ಮಾತ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸಿದ್ದು ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಜಮೀರ್ ಅಹ್ಮದ್‌ರನನ್ನು ಸಚಿವ ಸಂಪುಟದಂದ ಹೊರಗಿಡಲು ಡಿಕೆ ಶಿವಕುಮಾರ್ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಸ್ಲಿಂ ಕೋಟಾದಲ್ಲಿ ಈಗಾಗಲೇ ಹಿರಿಯ ನಾಯಕರಾದ ಯು ಟಿ ಖಾದರ್ ಮತ್ತು ತನ್ವೀರ್ ಸೇಠ್ ಸಚಿವರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್‌ರನ್ನು ಸಂಪುಟದಿಂದ ಹೊರಗಿಡುವಂತೆ ಡಿಕೆ ಶಿವಕುಮಾರ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ಅವರಿಗೆ ನಿಷ್ಠರಾಗಿರುವ ಜಮೀರ್
ಜಮೀರ್ ಅಹ್ಮದ್ ಸಿದ್ದರಾಮಯ್ಯ ಅವರಿಗೆ ಅತ್ಯಾಪ್ತರಾಗಿದ್ದಾರೆ. ಸಿದ್ದರಾಮಯ್ಯ ಬಣದಲ್ಲಿ ಮೊದಲಿನಿಂದಲೂ ಗುರುತಿಸಿಕೊಂಡಿರುವ ಅವರು, ಸಚಿವ ಸ್ಥಾನ ಸಿಗದೆ ಇದ್ದರೆ ಮುಂದಿನ ನಡೆ ಹೇಗಿರಲಿದೆ ಎನ್ನುವುದು ಕುತೂಹಲಕಾರಿಯಾಗಿದೆ. ಸಿದ್ದರಾಮಯ್ಯ ತಮ್ಮ ಆಪ್ತರನ್ನು ಹೇಗೆ ಸಮಾಧಾನ ಪಡಿಸುತ್ತಾರೆ ಎಂದು ಕಾದು ನೋಡಬೇಕಿದೆ.
ಇದಕ್ಕೆ ಸಾಕಷ್ಟಿ ಎನ್ನುವಂತೆ ಸಿದ್ದರಾಮಯ್ಯ ಅವರು ಸಿಎಂ ಆಗುವವರೆಗೂ ದೆಹಲಿಯಲ್ಲಿ ಜೊತೆಯಲ್ಲೇ ಇದ್ದ ಜಮೀರ್ ಅಹ್ಮದ್ ನಂತರ ಸಿದ್ದರಾಮಯ್ಯ ಅವರ ಜೊತೆ ಕಾಣಿಸಿಕೊಂಡಿಲ್ಲ, ಸಿದ್ದರಾಮಯ್ಯ ದೆಹಲಿಯಿಂದ ಬೆಂಗಳೂರಿಗೆ ಬಂದಾಗ ಕೂಡ ಬೈರತಿ ಸುರೇಶ್ ಅವರ ಕಾರಿಗೆ ಸಾರಥಿಯಾಗಿದ್ದರು.
ಕಾಂಗ್ರೆಸ್‌ನಲ್ಲಿ ಈ ಬಾರಿ 9 ಮುಸ್ಲಿಂ ಶಾಸಕರಿದ್ದು, ಒಂದು ಡಿಸಿಎಂ ಸ್ಥಾನ ಮತ್ತು 5 ಸಚಿವ ಸ್ಥಾನ ನೀಡಬೇಕು ಎಂದು ವಕ್ಫ್ ಮಂಡಳಿ ಒತ್ತಾಯ ಮಾಡಿತ್ತು. ಆದರೆ, ಇಬ್ಬರು ಹಿರಿಯ ಮುಸ್ಲಿಂ ಶಾಸಕರು ಮಾತ್ರ ಸಚಿವರಾಗುವುದು ಪಕ್ಕಾ ಆಗಿದೆ. ಜಮೀರ್ ಅಹ್ಮದ್‌ಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.












Click it and Unblock the Notifications