ಭೂಸ್ವಾಧೀನವಾದಾಗ ಬಿಜೆಪಿ ಮೌನವಾಗಿದ್ದೇಕೆ; ಗೃಹಲಕ್ಷ್ಮಿ ಹಣದಿಂದ ನಕಲಿ ಫೈನಾನ್ಸ್ ವಿರುದ್ಧ ಡಿಕೆಶಿ ಖಡಕ್ ಎಚ್ಚರಿಕೆ
ಬೆಂಗಳೂರು: ಬಿಡಿದ ಟೌನ್‌ಶಿಪ್ ಯೋಜನೆ ನನ್ನದಲ್ಲ. ಈ ಹಿಂದೆಯೇ ಅಧಿಸೂಚನೆ ಹೊರಡಿಸಲಾಗಿದೆ. ಆಗ 1000 ಎಕ್ರೆ ಭೂಮಿ ಸ್ವಾಧೀನಪಡಿಸಿಕೊಟ್ಟಾಗ ಇದೇ ಬಿಜೆಪಿ ನಾಯಕರು ಮೌನವಾಗಿದ್ದಿದ್ದೇಕೆ? ಎಂದು ಡಿಕೆ ಶಿವಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ. ಇದರೊಂದಿಗೆ ಕೆಲವರು 'ಗೃಹಲಕ್ಷ್ಮಿ' ಯೋಜನೆ ಫಲಾನುಭವಿಗಳು ಜಮೆ ಆಗುವ ಹಣವನ್ನು ನಕಲಿ ಫೈನಾನ್ಸ್ ವ್ಯವಹಾರಕ್ಕೆ ಬಳಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಅದರ ಕಡಿವಾಣಕ್ಕೆ ಪಂಚಾಯಿತಿ ಮಟ್ಟದಲ್ಲಿ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.
ಬೆಂಗಳೂರಿನ ವೈದೇಹಿ ಆಸ್ಪತ್ರೆ ಬಳಿ ಸೋಮವಾರ ಸುದ್ದಿಗಾರರ 'ಬಿಡದಿ ಮತ್ತು ಗ್ಯಾರೆಂಟಿ' ಯೋಜನೆ ಕುರಿತ ಕೆಲವು ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ನಮ್ಮ ಸರ್ಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸರ್ಕಾರ ಸ್ಥಗಿತಗೊಳಿಸುವುದಿಲ್ಲ.

ನಕಲಿ ಫೈನಾನ್ಸ್ ವ್ಯವಹಾರಕ್ಕೆ ಯೋಜನೆ ಹಣ ಬಳಕೆ
ಕೆಲವರು ಗೃಹಲಕ್ಷ್ಮಿ ಹಣವನ್ನು ನಕಲಿ ಫೈನಾನ್ಸ್ ವ್ಯವಹಾರಕ್ಕೆ ಬಳಸುತ್ತಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಬೆಳಗಾವಿಯ ಪ್ರಕರಣವೊಂದನ್ನು ಉಲ್ಲೇಖಿಸಿದರು. ಇದಕ್ಕಾಗಿ ಗ್ರಾಮ ಪಂಚಾಯ್ತಿಯಿಂದ ತಾಲ್ಲೂಕು ಪಂಚಾಯ್ತಿವರೆಗೆ ಎಲ್ಲೆಲ್ಲಿ ಇಂತಹ ಫೈನಾನ್ಸ್ ಯೋಜನೆಗಳಿಗೆ, ಅವುಗಳನ್ನು ಗುರುತಿಸಿ ಕಡಿವಾಣ ಹಾಕಲು ಸರ್ಕಾರ ನಿರ್ದೇಶನ ನೀಡಿದೆ ಎಂದರು.
ರಾಜ್ಯದ ಜನರಿಗೆ ನಮ್ಮ ಹೃದಯದಿಂದ ಕೊಟ್ಟ ಯೋಜನೆಗಳಿವು. ಹೆಣ್ಣು ಕುಟುಂಬದ ಕಣ್ಣು ಎಂದು ಅವರಿಗೆ ಆರ್ಥಿಕ ಶಕ್ತಿ ಸಿಗಬೇಕು. ಅವರ ಮನೆಗಳು ಬೆಳಗಬೇಕು ಎಂದು ನೀಡಲಾಗಿದೆ. ನಮ್ಮ ಯೋಜನೆಗಳ ಬಗ್ಗೆ ವಿರೋಧ ಪಕ್ಷಗಳು ಹೀಗೆ ಮಾತನಾಡುತ್ತಿರಲಿ. ಅವರು ಇರುವುದೇ ಸರ್ಕಾರವನ್ನು ಟೀಕೆ ಮಾಡಲು. ಸರ್ಕಾರ ಏನೇ ಉತ್ತಮ ಕೆಲಸ ಮಾಡಲು ಮುಂದಾದರೂ ಅದಕ್ಕೆ ವಿರೋಧ ಪಕ್ಷಗಳು ಅಡ್ಡಗಾಲು ಹಾಕುತ್ತವೆ. ಅವರ ಕೈಯಲ್ಲಿ ಆಗದ ಜನಪರ ಕೆಲಸಗಳನ್ನು ಕಾಂಗ್ರೆಸ್ ಮಾಡಿದೆ. ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಯೋಜನೆ ಜಾರಿ ಆದಾಗ ಆರಂಭದಲ್ಲಿ ಕೆಲವು ಫಲಾನುಭವಿಗಳು ಬೇರೆಯವರ ದೂರವಾಣಿ ಸಂಖ್ಯೆ ಹಾಗೂ ಇತರೆ ಮಾಹಿತಿ ನೀಡಿದ್ದಾರೆ. ಬೇರೆಯವರ ಖಾತೆಗೆ ಹಣ ಹೋಗುತ್ತಿರುವ ಬಗ್ಗೆ ನಮಗೆ ಮಾಹಿತಿ ಲಭಿಸಿತ್ತು. ಫಲಾನುಭವಿಗಳ ಖಾತೆಗೆ ಮಾತ್ರವೇ ಹಣ ಹೋಗುವಂತೆ ಮಾಡುವುದು ಸರ್ಕಾರದ ಉದ್ದೇಶ ಎಂದು ಯೋಜನೆಯಿಂದ ಕೈಬಿಟ್ಟವರ ಕುರಿತ ಆರೋಪಗಳಿಗೆ ಅವರು ಪ್ರತಿಕ್ರಿಯಿಸಿದರು.
ಫಲಾನುಭವಿಗಳಿಗೆ ಗುರುತಿನ ಚೀಟಿ
ಸರ್ಕಾರವು ಕರ್ನಾಟಕದವರಿಗೆ ಈ ಯೋಜನೆ ನೀಡುತ್ತಿದೆ ಹೊರತು ಅನ್ಯ ರಾಜ್ಯದವರಿಗೆ ಅಲ್ಲ. ಉಚಿತ ವಿದ್ಯುತ್ ಅನ್ನು ನಮ್ಮ ರಾಜ್ಯದ ಮತದಾರರಿಗೆ ನೀಡಬೇಕೇ ಹೊರತು, ಬೇರೆ ರಾಜ್ಯದವರಿಗೆ ಯಾಕೆ ಕೊಡಬೇಕು? ಹೀಗಾಗಿ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದ್ದೇವೆ. ಆ ಪ್ರಕ್ರಿಯೆ ನಡೆಯುತ್ತಿದೆ. ಯೋಜನೆ ನಿಲ್ಲಿಸುವುದು ನಮ್ಮ ಉದ್ದೇಶವಲ್ಲ. ನಮ್ಮ ಗ್ಯಾರಂಟಿ ದೇಶಕ್ಕೆ ಮಾದರಿ. ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ ಸೇರಿದಂತೆ ಬೇರೆ ರಾಜ್ಯಗಳು ನಮ್ಮ ಮಾದರಿ ಅನುಸರಿಸಿವೆ ಎಂದು ಅವರು ರಾಜ್ಯ ಸರ್ಕಾರ ಯೋಜನೆಗಳ ಜಾರಿಯನ್ನು ಸಮರ್ಥಿಸಿಕೊಂಡರು.
1 ಸಾವಿರ ಎಕರೆ ಸ್ವಾಧೀನ ವೇಳೆ ಬಿಜೆಪಿ ಸುಮ್ಮನಿದ್ದಿದ್ದೇಕೆ?
ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ. ರಾಜ್ಯದ ಬಿಡದಿಯ ಯೋಜನೆ ನನ್ನದಲ್ಲ. ಈ ಹಿಂದೆ ಸಿಎಂ ಆಗಿದ್ದ ಎಚ್.ಡಿ ಕುಮಾರಸ್ವಾಮಿ ಅವರು ಈ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರ ಈ ಜಾಗದಲ್ಲಿ 1 ಸಾವಿರ ಎಕರೆಯನ್ನು ಕೆಐಎಡಿಬಿಗೆ ಸ್ವಾಧೀನ ಪಡಿಸಿಕೊಟ್ಟಾಗ ಇವರು ಯಾಕೆ ಸುಮ್ಮನಿದ್ದರು? ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಮಾಡಿದ್ದು ಯಾರು? ಆಗ ರೈತರನ್ನು ಕಳುಹಿಸಲಿಲ್ಲವೇ? ಇಲ್ಲಿ ರೈತರು ಜಮೀನು ನೀಡಲು ಮುಂದಾಗಿದ್ದಾರೆ. ಆದರೆ ಇವರಿಗೆ ರಾಜಕಾರಣ ಮಾಡಬೇಕು, ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.












Click it and Unblock the Notifications