ವಿಡಿಯೋ: ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ; ಡಿಕೆಶಿ ಸ್ಪಷ್ಟನೆ
ಬೆಂಗಳೂರು, ಜುಲೈ 10: ಹೆಗಲ ಮೇಲೆ ಕೈ ಹಾಕಲು ಬಂದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಕೈ ಮಾಡಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
Recommended Video
"ಹೆಗಲ ಮೇಲೆ ಕೈ ಹಾಕೋದು ಅಂದ್ರೆ ಏನ್ ಅರ್ಥ? ಹೆಗಲ ಮೇಲೆ ಕೈ ಹಾಕಿದರೆ ನೋಡುವವರು ಏನಂದುಕೊಳ್ಳುತ್ತಾರೆ? ಇದಕ್ಕೆಲ್ಲಾ ಅವಕಾಶ ಕೊಡಲು ಆಗುತ್ತಾ?,'' ಎಂದು ಹೇಳುವ ಮೂಲಕ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಕುರಿತು ಡಿಕೆಶಿ ಸ್ಪಷ್ಟನೆ ನೀಡಿದ್ದಾರೆ.
ಪಕ್ಕದಲ್ಲಿ ಬಂದು ಹೆಗಲ ಮೇಲೆ ಕೈ ಹಾಕಲು ಪ್ರಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತನಿಗೆ ಡಿ.ಕೆ. ಶಿವಕುಮಾರ್ ಹೊಡೆದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ. ದೊಡ್ಡಿಯಲ್ಲಿ ನಡೆದಿದೆ.

ಕಾವೇರಿ ಹೋರಾಟಗಾರ ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೆ.ಎಂ. ದೊಡ್ಡಿಗೆ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತ ಹಿಂಭಾಗದಲ್ಲಿ ಬಂದು ಶಿವಕುಮಾರ್ ಹೆಗಲ ಮೇಲೆ ಕೈ ಹಾಕಲು ಪ್ರಯತ್ನಸಿದ್ದಾನೆ.
ತಕ್ಷಣವೇ ಕಾರ್ಯಕರ್ತನ ತಲೆಗೆ ಬಾರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಅಲ್ಲಿದ್ದವರಿಗೆ ಆಶ್ಚರ್ಯವನ್ನುಂಟು ಮಾಡಿದರು. ಮೊಬೈಲ್ನಲ್ಲಿ ವಿಡಿಯೋ ಮಾಡುತ್ತಿರುವುದನ್ನು ನೋಡಿ ಹೆಗಲ ಮೇಲೆ ಕೈ ಹಾಕ್ತಿಯಾ, ಕಾಮನ್‌ಸೆನ್ಸ್ ಇಲ್ವಾ ಎಂದು ಡಿ.ಕೆ. ಶಿವಕುಮಾರ್ ಗದರಿದರು. ಕೆಪಿಸಿಸಿ ಅಧ್ಯಕ್ಷರ ನಡೆಗೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಧಾನ ತಂದಿದೆ. ಈ ಹಿಂದೆ ಸೆಲ್ಫಿಗೆ ಬರುವ ಕಾರ್ಯಕರ್ತರಿಗೂ ಡಿಕೆಶಿ ಹೊಡೆದಿದ್ದರು.
ಜೂನ್ 12 ರಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಡಿ.ಕೆ. ಶಿವಕುಮಾರ್ ಗರಂ ಆಗಿದ್ದರು. ನಾನು ಮಾತನಾಡುವಾಗ ಮಧ್ಯೆ ಮಾತಾಡಿದರೆ ಒದ್ದು ಹೊರಗೆ ಹಾಕುವೆ. ನಾನು ಕತ್ತೆ ಕಾಯೋಕೆ ಇಲ್ಲಿಗೆ ಬಂದಿಲ್ಲವೆಂದು ಡಿಕೆಶಿ ಆಕ್ರೋಶ ಹೊರಹಾಕಿದ್ದರು.
ಕಾರ್ಯಕರ್ತರಿಗೆ ಶಿಸ್ತು ಕಲಿಸಿ ಎಂದು ಜಿಲ್ಲಾಧ್ಯಕ್ಷ ತಾಜ್ ಪೀರ್ಗೆಗೆ ಸೂಚನೆ ನೀಡಿದ್ದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಮಾತನಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಮಧ್ಯದಲ್ಲಿ ಮಾತನಾಡಿದ್ದರು. ಇದಕ್ಕೆ ಸಿಟ್ಟಾದ ಡಿಕೆಶಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧವೇ ಸಿಟ್ಟಾಗಿದ್ದರು.











Click it and Unblock the Notifications