ಡಿಕೆಶಿ ಆರೋಗ್ಯದಲ್ಲಿ ಚೇತರಿಕೆ, ಸಂಜೆ ಡಿಸ್ಚಾರ್ಜ್ ಸಾಧ್ಯತೆ
Recommended Video

ಬೆಂಗಳೂರು, ಸೆಪ್ಟೆಂಬರ್ 19: ಫುಡ್ ಪಾಯ್ಸನ್ ಕಾರಣ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಮಂಗಳವಾರ ಬೆಳಿಗ್ಗೆ ಕನಕಪುರದಿಂದ ರಾಮನಗರಕ್ಕೆ ತೆರಳುವ ಮಾರ್ಗಮಧ್ಯೆ ತಿಂದ ಆಹಾರದಿಂದಾಗಿ ಡಿಕೆಶಿ ಅವರಿಗೆ ಫುಡ್ ಪಾಯ್ಸನ್ ಆಗಿತ್ತು. ನಂತರ ರಾಮನಗರದ ನಿವಾಸದಲ್ಲೇ ಅವರನ್ನು ಪರೀಕ್ಷಿಸಿದ್ದ ವೈದ್ಯರು ಡಿಹೈಡ್ರೇಶನ್ ಕಾರಣ ಸಮಸ್ಯೆಯಾಗಿದೆ ಎಂದು, ಉಪಚಾರ ಮಾಡಿದ್ದರು.
ನಂತರ ಬೆಂಗಳೂರಿಗೆ ಆಗಮಿಸಿದ ಅವರನ್ನು ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸುಮಾರು 10 ಗಂಟೆಯ ಸಮಯಕ್ಕೆ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಅಪೋಲೋ ಆಸ್ಪತ್ರೆ ಪತ್ರಿಕಾ ಪ್ರಕಟಣೆ ನೀಡಲಿದ್ದು, ಇಂದು ಸಂಜೆಯ ಹೊತ್ತಿಗೆ ಕನಕಪುರ ಶಾಸಕ ಡಿಕೆಶಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಮಂಗಳವಾರವಷ್ಟೇ ಡಿಕೆಶಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಎಫ್ ಐಆರ್ ದಾಖಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಸಂಬಂಧ ಡಿಕೆಶಿ ಅವರ ಬಂಧನವಾದರೂ ಅಚ್ಚರಿಯಿಲ್ಲ.












Click it and Unblock the Notifications