ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ: ಡಿಕೆ ಶಿವಕುಮಾರ್‌ಗೆ ಡೆಂಗ್ಯೂ ಜ್ವರ?

|
Google Oneindia Kannada News

Recommended Video

DK Shivakumar suffering from dengue ? | Oneindia Kannada

ಬೆಂಗಳೂರು, ನವೆಂಬರ್ 2: ಮಾಜಿ ಸಚಿವ ಡಿಕೆ ಶಿವಕುಮಾರ್ ತೀವ್ರ ಜ್ವರದಿಂದ ಬಳಲುತ್ತಿದ್ದು, ಡೆಂಗ್ಯೂ ಇರುವ ಶಂಕೆ ವ್ಯಕ್ತವಾಗಿದೆ.

ಮಾಜಿ ಸಚಿವ ಡಿಕೆ ಶಿವಕುಮಾರ್ ಜ್ವರದಿಂದ ಬಳಲುತ್ತಿದ್ದು ಬೆಂಗಳೂರಿನ ಶೇಷಾದ್ರಿಪುರ ಸಮೀಪದ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಡಿಕೆಶಿ ಆರೋಗ್ಯದಲ್ಲಿ ಏರುಪೇರು, ಅಪೋಲೋ ಆಸ್ಪತ್ರೆಗೆ ದಾಖಲುಡಿಕೆಶಿ ಆರೋಗ್ಯದಲ್ಲಿ ಏರುಪೇರು, ಅಪೋಲೋ ಆಸ್ಪತ್ರೆಗೆ ದಾಖಲು

ಅವರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಅಧಿಕೃತವಾಗಿ ವೈದ್ಯರಿಂದ ವರದಿ ಇನ್ನೂ ಬರಬೇಕಿದೆ.

DK Shivakumar Is Suffering From Fever

ಆಸ್ಪತ್ರೆಗೆ ಡಿಕೆ ಶಿವಕುಮಾರ್ ಪತ್ನಿ ಹಾಗೂ ಮಗಳು ಆಗಮಿಸಿದ್ದಾರೆ, ಕುಟುಂಬಸ್ಥರನ್ನು ಹೊರತುಪಡಿಸಿ ಇನ್ಯಾರಿಗೂ ಅವರ ಭೇಟಿಗೆ ಅವಕಾಶ ನೀಡುತ್ತಿಲ್ಲ ಎನ್ನುವ ಮಾಹಿತಿ ದೊರೆತಿದೆ.

ಡಿಕೆ ಶಿವಕುಮಾರ್‌ ರಕ್ತದ ಒತ್ತಡ ಹೆಚ್ಚಾಗಿದೆ, ಶುಗರ್‌ನಲ್ಲಿ ಕೂಡ ಏರುಪೇರಾಗಿತ್ತು, ಜೊತೆಗೆ ಜ್ವರವೂ ಬಂದಿದ್ದ ಕಾರಣ ಶುಕ್ರವಾರ ರಾತ್ರಿಯೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್‌ರನ್ನು ಸೆಪ್ಟೆಂಬರ್ 3ರಂದು ಬಂಧಿಸಿತ್ತು. ಇದಕ್ಕೂ ಮೊದಲು ಆಗಸ್ಟ್ 30ರಿಂದ ಸತತ ನಾಲ್ಕು ದಿನ ವಿಚಾರಣೆಗೆ ಒಳಪಡಿಸಿತ್ತು.

ಬಳಿಕ ಅವರನ್ನು ವಿಶೇಷ ನ್ಯಾಯಾಲಯವು ಇ.ಡಿ ವಶಕ್ಕೆ ಒಪ್ಪಿಸಿತ್ತು. ನಂತರ ಹಲವು ದಿನಗಳ ಕಾನೂನು ಹೋರಾಟದ ನಂತರ ಅಕ್ಟೋಬರ್ 23 ರಂದು ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

English summary
Former minister DK Shivakumar suffers from high fever and has expressed fears of dengue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X