ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಲ್ಲೇಶ್ವರ ಶಾಸಕ ಅಶ್ವಥ್‌ನಾರಾಯಣ ವಿರುದ್ಧ ಡಿಕೆಶಿ ಆಕ್ರೋಶ

|
Google Oneindia Kannada News

ಬೆಂಗಳೂರು, ಏಪ್ರಿಲ್ 05: ಮಲ್ಲೇಶ್ವರದ ಶಾಸಕ ಸರ್ಕಾರವನ್ನೇ ಬೀಳಿಸಲು ಯತ್ನಿಸುತ್ತಿದ್ದಾರೆ, ಇವರಿಗೆ ಈಗ ಅಲ್ಲ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಂದು ಉತ್ತರಕೊಡುತ್ತೇನೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಅವರು ಮಲ್ಲೇಶ್ವರ ಬಿಜೆಪಿ ಶಾಸಕ ಅಶ್ವಥ್‌ನಾರಾಯಣ್ ವಿರುದ್ಧ ಗುಡುಗಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಬೈರೇಗೌಡ ಪರವಾಗಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಈ ಮೂವರಿಗೂ ಅಧಿಕಾರವೇ ಮುಖ್ಯ:ಕರಾವಳಿಯ ಬಿಜೆಪಿ ಸಂಸದರ ವಿರುದ್ಧ ಡಿಕೆಶಿ ವಾಗ್ದಾಳಿಈ ಮೂವರಿಗೂ ಅಧಿಕಾರವೇ ಮುಖ್ಯ:ಕರಾವಳಿಯ ಬಿಜೆಪಿ ಸಂಸದರ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸದಾನಂದಗೌಡರ ಕೊಡುಗೆ ಏನು, ಕೇಂದ್ರ ಸಚಿವರಾಗಿದ್ದರೂ ಅವರ ಕೊಡುಗೆ ಏನಿದೆ ಎಂದು ಹೇಳಲಿ, ದೇಶದಲ್ಲಿ ಬದಲಾವಣೆ ಅವಶ್ಯಕತೆ ಇದೆ ಎಂದು ಅವರು ಹೇಳಿದರು.

DK Shivakumar lambasted on Malleshwaram MLA Ashwathnarayan

ಸರ್ಜಿಕಲ್ ಸ್ಟ್ರೈಕ್ ನಿಂದ ನಮಗೆ 22 ಸೀಟ್ ಸಿಗುತ್ತೆ ಅಂತ ಯಡಿಯೂರಪ್ಪ ಹೇಳ್ತಾರೆ, ನಮ್ಮ ಸೈನಿಕರು ಅಲ್ಲಿ ಹೋರಾಟ ಮಾಡಿದ್ರೆ ನಾವು ಇಲ್ಲಿ ಗೆಲ್ಲುತ್ತೇವೆ ಎನ್ನುತ್ತಾರೆ, ಬಿಜೆಪಿ ನಾಯಕರು ಸೈನಿಕರು ಮಾಡಿರೋ ಕೆಲವನ್ನ ನಾವು ಮಾಡಿದ್ದು ಎನ್ನುತ್ತಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿನ ಅನಂತ್ ಕುಮಾರ್ ಅವರಿಗೆ ಟಿಕೆಟ್ ನೀಡಿಲ್ಲ, ಆರ್ ಎಸ್ ಎಸ್ ನಿಂದ ಬಂದ ವ್ಯಕ್ತಿಗೆ ಟಿಕೆಟ್ ಕೊಟ್ಟಿದ್ದಾರೆ ರಾಜ್ಯದಲ್ಲಿ ಬಿಜೆಪಿ ಎರಡು ಸೀಟು ಕೂಡ ಗೆಲ್ಲಲ್ಲ ಎಂದು ಅವರು ಹೇಳಿದರು.

ನಿಖಿಲ್ ಕುಮಾರಸ್ವಾಮಿ ಗೆದ್ದರೆ ಅಂಬರೀಶ್ ಆತ್ಮಕ್ಕೆ ಶಾಂತಿ: ಡಿಕೆಶಿ ನಿಖಿಲ್ ಕುಮಾರಸ್ವಾಮಿ ಗೆದ್ದರೆ ಅಂಬರೀಶ್ ಆತ್ಮಕ್ಕೆ ಶಾಂತಿ: ಡಿಕೆಶಿ

ಬಿಎಸ್ ವೈ ಪುತ್ರ ಬಿ.ವೈ ರಾಘವೇಂದ್ರ ಚುನಾವಣೆಯಲ್ಲಿ ಗೆಲ್ಲುವುದಿಲ್ಲ, ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ನವರೇ ಗೆಲ್ಲುತ್ತಾರೆ ಬೆಂಗಳೂರಿನ ನಾಲ್ಕು ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ, ಬೆಂಗಳೂರಿನ ಮೂರು ಮತ್ತು ಬೆಂಗಳೂರು ಗ್ರಾಮಾಂತರ ಸೇರಿ ನಾಲ್ಕೂ ಸೀಟುಗಳನ್ನ ನಾವೇ ಗೆಲ್ತೀವಿ ಎಂದು ಡಿಕೆ.ಶಿವಕುಮಾರ್ ಹೇಳಿದರು.

ಡಿಕೆಶಿ ಅಹಂಕಾರ ಬಹಳ ದಿನ ಉಳಿಯುವುದಿಲ್ಲ: ಜಗದೀಶ್ ಶೆಟ್ಟರ್ ಡಿಕೆಶಿ ಅಹಂಕಾರ ಬಹಳ ದಿನ ಉಳಿಯುವುದಿಲ್ಲ: ಜಗದೀಶ್ ಶೆಟ್ಟರ್

ಬೆಂಗಳೂರಿಗೆ ಬಿಜೆಪಿ ಕೊಡುಗೆ ಶೂನ್ಯ ಎಂದ ಡಿಕೆಶಿ, ಸಿದ್ದರಾಮಯ್ಯ ಅವರ ಅವಧಿಯಲ್ಲಿ 13 ಸಾವಿರ ಕೋಟಿ ಬೆಂಗಳೂರಿಗೆ ಕೊಟ್ಟಿದ್ದೇವೆ, ಈಗ ಮೈತ್ರಿ ಸರ್ಕಾರದಲ್ಲಿ 25 ಸಾವಿರ ಕೋಟಿ ಯೋಜನೆ ಸಿದ್ದವಾಗಿದೆ ಎಂದು ಮಾಹಿತಿ ನೀಡಿದರು.

English summary
Minister DK Shivakumar said malleshwaram BJP MLA Ashwathnarayan trying to break government. He said minister Sadananda Gowda did nothing for Bengaluru North constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X