ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಡ್ ಹಗರಣ ಬಯಲಿಗೆಳೆದ ತೇಜಸ್ವಿಗೆ ಕಂಗ್ರಾಟ್ಸ್ ಎಂದ ಡಿಕೆ ಶಿವಕುಮಾರ್

|
Google Oneindia Kannada News

ಬೆಂಗಳೂರು, ಮೇ 4: ಕೊವಿಡ್ 19 ಅಬ್ಬರವನ್ನು ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಸೋತಿದೆ. ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ತರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದು ನೆನಪಿರಬಹುದು. ಇಂದು ಡಿಕೆ ಶಿವಕುಮಾರ್ ಅವರು ಸಂಸದ ತೇಜಸ್ವಿ ಸೂರ್ಯ ಹಾಗೂ ತಂಡಕ್ಕೆ ಕಂಗ್ರಾಟ್ಸ್ ಹೇಳಿ ಟ್ವೀಟ್ ಮಾಡಿದ್ದಾರೆ.

ಬೃಹತ್ ಬೆಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿತರಿಗೆ ಸರಿಯಾಗಿ ಬಿಯು ನಂಬರ್ ಸಿಗುತ್ತಿಲ್ಲ, ಕೊವಿಡ್ ಪರೀಕ್ಷೆ ಫಲಿತಾಂಶ ಪ್ರಯೋಜನವಿಲ್ಲ, ಆಸ್ಪತ್ರೆಗೆ ದಾಖಲಾಗಲು ಬೆಡ್ ಇರಲ್ಲ ಎಂಬ ಪರಿಸ್ಥಿತಿ ಎದುರಾಗಿದೆ ಎಂದು ಪ್ರತಿನಿತ್ಯ ವರದಿಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಬಿಬಿಎಂಪಿ ವಾರ್ ರೂಮ್ ಉಸ್ತುವಾರಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಬದಲಾಯಿಸಿದ್ದರು. ಬಂಗಾಳದ ಚುನಾವಣೆ ಮುಗಿಸಿಕೊಂಡು ಬಂದಿರುವ ಅರವಿಂದ ಲಿಂಬಾವಳಿಗೆ ವಾರ್ ರೂಮ್ ಉಸ್ತುವಾರಿ ನೀಡಲಾಗಿದೆ.

ಈ ವಾರ್ ರೂಮ್ ಕಾರ್ಯ ನಿರ್ವಹಣೆ ಬಗ್ಗೆ ಅಪಸ್ವರ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ಅವರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬೆಡ್ ಬ್ಲಾಕಿಂಗ್ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿರುವುವುದನ್ನು ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದರು.

DK Shivakumar on MP Tejasvi Surya BBMP Covid bed allocation Scam

ಕಳೆದ 1 ತಿಂಗಳ ಅವಧಿಯಲ್ಲಿನ 10 ಸಾವಿರಕ್ಕೂ ಅಧಿಕ ರೋಗಿಗಳಿಗೆ ಬೆಡ್ ಹಂಚಿಕೆ, ವಿಧಾನ, ಸಮಯವನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಬಿಬಿಎಂಪಿ ಅಧಿಕಾರಿಗಳು, ಆಸ್ಪತ್ರೆಗಳ ಹಾಗೂ ವಲಯವಾರು ಸಹಾಯವಾಣಿ ಸಿಬ್ಬಂದಿಗಳ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿದರು.

ಬೆಡ್ ಬ್ಲಾಕಿಂಗ್ ಅವ್ಯವಹಾರ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಅವ್ಯವಹಾರ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ

ಈ ಬಗ್ಗೆ ಟ್ವೀಟ್ ಮಾಡಿ ವ್ಯಂಗ್ಯವಾಗಿ ತೇಜಸ್ವಿ, ಸತೀಶ್, ಸುಬ್ರಹ್ಮಣ್ಯ, ಗರುಡಾಚಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಂಗ್ರಾಟ್ಸ್ ಹೇಳಿದ್ದಾರೆ. ಬಿಬಿಎಂಪಿ ಯಾರ ನಿಯಂತ್ರಣದಲ್ಲಿದೆ, ಯಾವ ಬಿಜೆಪಿ ಸಚಿವರು ಇದಕ್ಕೆಲ್ಲ ಕಾರಣ ಎಂಬುದನ್ನು ಹೆಸರಿಸಬೇಕು ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

Recommended Video

ಕೈಗಾರಿಕೆಗಳಿಂದ ಆಕ್ಸಿಜನ್‌ ಪೂರೈಕೆ ಕುರಿತು ಚರ್ಚೆ, ಸಚಿವ ಜಗದೀಶ್‌ ಶೆಟ್ಟರ್ ನೇತೃತ್ವದಲ್ಲಿ ಸಭೆ | Oneindia Kannada

English summary
DK Shivakumar on MP Tejasvi Surya exposing major scam by BBMP in bed allocation for Covid patients.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X