ಕೆಂಪಾಪುರದಲ್ಲಿ ಕೆಂಪೇಗೌಡರ ಸಮಾಧಿ ಅಭಿವೃದ್ಧಿಗೆ ಯೋಜನೆ: ಡಿಕೆ ಶಿವಕುಮಾರ್ ಮಹತ್ವದ ಮಾಹಿತಿ
ಕೆಂಪಾಪುರದಲ್ಲಿರುವ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಸಮಾಧಿಯನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಗಡಿ ಪಟ್ಟಣದಲ್ಲಿ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿದ್ದಾರೆ. ಮಾಗಡಿಯಲ್ಲಿ ಕೆಂಪೇಗೌಡರು ನಿರ್ಮಿಸಿದ ಐತಿಹಾಸಿಕ ಕೋಟೆ, ಸೋಮೇಶ್ವರ ದೇವಾಲಯ, ನಾಡಪ್ರಭು ಕೆಂಪೇಗೌಡರು ಕಟ್ಟಿರುವ ಐತಿಹಾಸಿಕ ಮಾಗಡಿ ಕೋಟೆಯ ಹಳೆಯ ವೈಭವವನ್ನು ಹಿಂದಿರುಗಿಸಲು, ಸಂರಕ್ಷಿಸಲು ಕೋಟೆಯ ಪುನರುಜ್ಜೀವನ ಕಾರ್ಯಕ್ಕಾಗಿ 103 ಕೋಟಿ ರೂಪಾಯಿ ಅನುದಾನವನ್ನು ಬೆಂಗಳೂರು ನಗರದಿಂದ ನೀಡಿದ್ದೇನೆ ಎಂದಿದ್ದಾರೆ.
ಬೆಂಗಳೂರಿನ ಸುಮನಹಳ್ಳಿಯಲ್ಲಿ 5 ಎಕರೆ ಜಾಗದಲ್ಲಿ ಕೆಂಪೇಗೌಡ ಭವನ ನಿರ್ಮಿಸುವ ಕಾರ್ಯ ನಡೆಯುತ್ತಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಈ ಬಗ್ಗೆ ರೂಪುರೇಷೆ ಸಿದ್ಧಪಡಿಸಿ, ಚರ್ಚಿಸಿದ್ದಾರೆ. ಕೆಂಪೇಗೌಡರ ಋಣ ತೀರಿಸಲು ಮಾಗಡಿ ಅಭಿವೃದ್ಧಿಗೆ ನಾವು ಬದ್ಧ. ಮಾಗಡಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಿ, ಕೆಂಪೇಗೌಡರ ಹೆಸರು ಶಾಶ್ವತವಾಗಿ ಉಳಿಸಲು ನಾವು ಬದ್ಧ ಎಂದು ಹೇಳಿದ್ದಾರೆ.

ಇಂದು ಮಾಗಡಿ ಪಟ್ಟಣದಲ್ಲಿ 40 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಎಕರೆ ಜಾಗದಲ್ಲಿ 100 ಹಾಸಿಗೆ ಸಾಮರ್ಥ್ಯದ ಆತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಈ ವಿಚಾರ ಹಂಚಿಕೊಂಡಿದ್ದಾರೆ.
ಮಾಗಡಿಯಲ್ಲಿ 100 ಹಾಸಿಗೆಗಳ ಆಸ್ಪತ್ರೆ
ನಮ್ಮ ಸರ್ಕಾರದ ವತಿಯಿಂದ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಕ್ರಾಂತಿಯಾಗಿದೆ. ಮಾಗಡಿಯಲ್ಲಿ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ ಮಾಡಬೇಕು ಎನ್ನುವುದು ಹಲವು ದಿನಗಳ ಬೇಡಿಕೆಯಾಗಿತ್ತು. 41 ಕೋಟಿ ರೂ. ವೆಚ್ಚದಲ್ಲಿ, ಎರಡು ಎಕರೆ ಜಾಗದಲ್ಲಿ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸುತ್ತಿದ್ದೇವೆ. ಸಾರಿಗೆ ಸಚಿವರಾಗಿರುವ ರಾಮಲಿಂಗಾರೆಡ್ಡಿ ಅವರು ಬಸ್ ನಿಲ್ದಾಣ ಹಾಗೂ ಡಿಪೋ ನಿರ್ಮಾಣ ಮಾಡಿಕೊಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದಿದ್ದಾರೆ.

ಮಾಗಡಿಯ ಕೆರೆಗಳಿಗೆ ನೀರು ತುಂಬಿಸಲು 90 ಕೋಟಿ
20 ಕೋಟಿ ರೂಪಾಯಿ ವೆಚ್ಚದಲ್ಲಿ ಮಾಗಡಿಯ ಗೌರಮ್ಮನ ಕೆರೆ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. 159 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದ್ದೇವೆ. 1200 ಜನರಿಗೆ ಇ -ಸ್ವತ್ತು ವಿತರಿಸಲಾಗಿದೆ. ಇನ್ನುಳಿದವರಿಗೆ ಶೀಘ್ರದಲ್ಲೇ ವಿತರಿಸಲು ಸಿದ್ಧತೆ ನಡೆಸಲಾಗಿದೆ. 13 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಚನಬೆಲೆ ಬಳಿ ಹಲವು ಅಭಿವೃದ್ಧಿ ಕೆಲಸಗಳನ್ನು ಆರಂಭಿಸುತ್ತಿದ್ದು 90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮಾಗಡಿಯ ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಯನ್ನು ಕೈಗೆತ್ತಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ನಾನು ಇಂಧನ ಸಚಿವನಾಗಿದ್ದ ಸಂದರ್ಭದಲ್ಲಿ ಹೆಚ್‌ವಿಡಿಎಸ್ ಯೋಜನೆಯಡಿ ರೈತರಿಗೆ ವಿದ್ಯುತ್ ಪರಿವರ್ತಕಗಳನ್ನು ನೀಡಿರುವುದು ಒಂದು ದಾಖಲೆಯಾಗಿ ಉಳಿದಿದೆ. ರೈತರಿಗೆ ಟ್ರಾನ್ಸ್‌ಫಾರ್ಮರ್ ಒದಗಿಸುವ ಯೋಜನೆ ದೇಶದಲ್ಲಿ ಯಾವುದೇ ಲೋಕಸಭಾ ಕ್ಷೇತ್ರದಲ್ಲಿಯೂ ಮಾಡಲಾಗದ ಯೋಜನೆಯನ್ನ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾವು ಮಾಡಿದ್ದೇವೆ ಎಂದು ಸಂತೋಷವಾಗುತ್ತದೆ. ಮಾಗಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾವು ಸದಾ ಬದ್ಧರಾಗಿರುತ್ತೇವೆ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications