Get Updates
Get notified of breaking news, exclusive insights, and must-see stories!

Bengaluru Traffic: 100 ದಿನಗಳಲ್ಲಿ ಹೊರ ವರ್ತುಲ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಯೋಜನೆ: ಡಿಕೆಶಿ ಭರವಸೆ

ಮುಂದಿನ 100 ದಿನಗಳಲ್ಲಿ ಹೊರ ವರ್ತುಲ ರಸ್ತೆ (ಒಆರ್‌ಆರ್) ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ಯೋಜನೆ ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಐಟಿ ಸಂಸ್ಥೆಗಳಿಗೆ ಭರವಸೆ ನೀಡಿದರು.

ಟ್ರಾಫಿಕ್ ಸಮಸ್ಯೆಗಳನ್ನು ಪರಿಹರಿಸಲು ಹೊರವರ್ತುಲ ರಸ್ತೆಯಲ್ಲಿರುವ ಕಂಪನಿಗಳು ಮತ್ತು ಸಂಘಗಳು (ಒಆರ್‌ಆರ್‌ಸಿಎ) ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 27 ರಂದು 17 ಕಿಮೀ ವ್ಯಾಪ್ತಿಯಲ್ಲಿ ತೀವ್ರ ಟ್ರಾಫಿಕ್ ಉಂಟಾಗಿತ್ತು, ಇದು ಸಹಜ ಸ್ಥಿತಿಗೆ ಬರಲು ಸುಮಾರು 5 ಗಂಟೆಗಳನ್ನು ತೆಗೆದುಕೊಂಡಿತು, ಸಮಸ್ಯೆಯ ಬಗ್ಗೆ ತಮಗೆ ಅರಿವು ಇದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

DK Shivakumar Pledges to Alleviate ORR Traffic Concerns for Tech Companies in 100 Days

ಸಂಸ್ಥೆಗಳ ಸಮಸ್ಯೆಗಳನ್ನು ಆಲಿಸಲು ಮತ್ತು ಪರಿಹರಿಸಲು ಸರ್ಕಾರ ನಿಗಮಗಳ ಮನೆ ಬಾಗಿಲಿಗೆ ಬಂದಿದೆ. "ನಮ್ಮ ಸರ್ಕಾರವು ಜನರ ಸಮಯವನ್ನು ರಸ್ತೆಗಳಲ್ಲಿ ವ್ಯರ್ಥ ಮಾಡಲು ಬಿಡುವುದಿಲ್ಲ. ನಗರದ ಆದಾಯದ ಐದನೇ ಒಂದು ಭಾಗವು ಹೊರ ವರ್ತುಲ ರಸ್ತೆಯ ಕೈಗಾರಿಕೆಗಳಿಂದ ಬರುತ್ತದೆ ಮತ್ತು ಅವುಗಳ ಪ್ರಾಮುಖ್ಯತೆಯ ಬಗ್ಗೆ ನಮಗೆ ತಿಳಿದಿದೆ. ನಿಮಗೆ, ನಿಮ್ಮ ನೌಕರರಿಗೆ ಮತ್ತು ಕ್ಷೇತ್ರದ ನಿವಾಸಿಗಳಿಗೆ ಯಾವುದೇ ತೊಂದರೆಯಾಗದಂತೆ ಸಮಸ್ಯೆ ಬಗೆಹರಿಸುವುದು ನಮ್ಮ ಆದ್ಯತೆಯಾಗಿದೆ" ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಸಮಸ್ಯೆಗಳಿಗೆ ಪರಿಹಾರ

ಮಹದೇವಪುರ ವಲಯ ಒಆರ್‌ಆರ್‌ನಿಂದ ಭೋಗನಹಳ್ಳಿ, ಗುಂಜೂರು ಮತ್ತು ವರ್ತೂರು ಮೂಲಕ ಹೊಸ ಪೆರಿಫೆರಲ್ ರಿಂಗ್ ರಸ್ತೆ (ಪಿಆರ್‌ಆರ್) ಅನ್ನು ಸಂಪರ್ಕಿಸಲು ಸುಮಾರು 5.6 ಕಿಮೀ ಉದ್ದದ 45 ಮೀಟರ್ ಅಗಲದ ರಸ್ತೆಯನ್ನು ನಿರ್ಮಿಸಲಾಗುತ್ತಿದೆ. ಈ ರಸ್ತೆಯ 4 ಕಿ.ಮೀ ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಉಳಿದಿರುವ ರಸ್ತೆ ಕಾಮಗಾರಿಗಳಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಾಗೂ ಭೂಮಿಯನ್ನು ಅರಣ್ಯ ಇಲಾಖೆಯಿಂದ ಪಡೆಯಬೇಕು, ಅಗತ್ಯ ಕ್ರಮಗಳನ್ನು ಕೈಗೊಂಡು ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈಗಾಗಲೇ ಆರರಿಂದ ಎಂಟು ಅಧಿಕ ಟ್ರಾಫಿಕ್ ವಲಯಗಳನ್ನು ಗುರುತಿಸಲಾಗಿದ್ದು, ಟ್ರಾಫಿಕ್ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸಲಾಗುವುದು. ಇನ್ನು ಮೂರು ತಿಂಗಳಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೇ ಗುಂಡಿ ಮುಚ್ಚಲಾಗುವುದು, ಸಂಚಾರ ದಟ್ಟಣೆ ಉಂಟು ಮಾಡುತ್ತಿರುವ ಅನಧಿಕೃತ ಅಂಗಡಿಗಳನ್ನು ಗುರುತಿಸಿ ತೆರವುಗೊಳಿಸಲಾಗುವುದು. ಅಲ್ಲದೆ ರಾಜಕಾಲುವೆ ಒತ್ತುವರಿಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ ಅವರು, ಅಧಿಕಾರಿಗಳು ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳಲು ಸ್ವತಂತ್ರರಾಗಿದ್ದಾರೆ ಎಂದರು.

ಸಾರ್ವಜನಿಕ ಸಾರಿಗೆ ಬಳಸಲು ಮನವಿ

ಇದಕ್ಕೂ ಮೊದಲು, ಬೆಂಗಳೂರು ಪೊಲೀಸ್ ಮುಖ್ಯಸ್ಥ ಬಿ ದಯಾನಂದ್ ಅವರು ಕಾರ್ಪೊರೇಟ್‌ಗಳನ್ನು ಉದ್ದೇಶಿಸಿ ಮಾತನಾಡಿ, ಪೊಲೀಸರು 17 ಕಿಮೀ ವ್ಯಾಪ್ತಿಯಲ್ಲಿ ವಾಹನಗಳ 'ಟೋವಿಂಗ್' ಪರಿಚಯಿಸಲಿದ್ದಾರೆ ಮತ್ತು ಪೀಕ್ ಅವರ್‌ಗಳಲ್ಲಿ ಭಾರಿ ವಾಹನಗಳ ಚಲನೆಯನ್ನು ನಿಷೇಧಿಸುತ್ತಾರೆ ಎಂದು ಹೇಳಿದರು. ತಮ್ಮ ವೈಯಕ್ತಿಕ ದೃಷ್ಟಿಯಲ್ಲಿ ಮೇಲ್ಸೇತುವೆಗಳು ಪರಿಹಾರವಲ್ಲ ಎಂದು ಅವರು ಹೇಳಿದ ಅವರು ಸಾರ್ವಜನಿಕ ಸಾರಿಗೆಯನ್ನು ಬಳಸಿದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+