DK Shivakumar: ಕೊಟ್ಟ ಮಾತು ಉಳಿಸಿಕೊಳ್ಳಿ: ಹೈಕಮಾಂಡ್ ಭರವಸೆ ನೆನಪಿಸಿ ಡಿಕೆ ಶಿವಕುಮಾರ್ ಪೋಸ್ಟ್...

ಬೆಂಗಳೂರು, ನವೆಂಬರ್ 27: ಕರ್ನಾಟಕ ರಾಜ್ಯ ರಾಜಕಾರಣದತ್ತ ಇಡೀ ದೇಶವೇ ತಿರುಗಿ ನೋಡುವಂತಾಗಿದೆ. ಕಾಂಗ್ರೆಸ್ ಸರ್ಕಾರದ ಮುಂದಿನ ಉಳಿದ 2.5ವರ್ಷದ ಅವಧಿಗೆ ಸಿಎಂ ಯಾರು? ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾಡಿರುವ ಪೋಸ್ಟ್ ಸಖತ್ ಚರ್ಚೆ ಆಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ತಮ್ಮ ಭರವಸೆ ನೆನಪಿಸಲು ಡಿಸಿಎಂ ಮುಂದಾಗಿದ್ದು, ಸ್ಪಷ್ಟವಾಗಿ ಕಾಣಿಸುತ್ತದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯ ಕುರ್ಚಿಗಾಗಿ ಸಂಘರ್ಷ ಗುಟ್ಟಾಗಿ ಉಳಿದಿಲ್ಲ. ಇವರ ಸಿಎಂ ಸ್ಥಾನದ ಪೈಪೋಟಿ ಹೈಕಮಾಂಡ್‌ಗೆ ತಲೆನೋವಾಗಿದೆ. ಅಧಿಕಾರ ಹಂಚಿಕೆ ವೇಳೆ 2.5 ವರ್ಷ ಸಿದ್ದರಾಮಯ್ಯ ಸಿಎಂ, ನಂತರದ 2.5 ವರ್ಷ ಡಿಕೆ ಶಿವಕುಮಾರ್ ಅವರು ಸಿಎಂ ಆಗಿರಲಿದ್ದಾರೆ ಎಂಬ ಮಾತು ಸರ್ಕಾರ ಅಧಿಕಾರಕ್ಕೆ ಬಂದಾಗಿ ಕೇಳಿ ಬಂದಿತ್ತು. ಹೀಗೆಂದು ಹೇಳಿಯೇ ಡಿಕೆ ಶಿವಕುಮಾರ್ ಅವರಿಗೆ ಡಿಸಿಎಂ ಹುದ್ದೆ ನೀಡಲಾಗಿತ್ತು ಎನ್ನಲಾಗಿದೆ.

DK Shivakumar Reminds Congress of Power-Sharing Promise with Word is World Power Message

ಆದರೆ ಈಗ ಸಿದ್ದರಾಮಯ್ಯ ಅವರು ತಾವೇ ಐದು ವರ್ಷ ಪೂರ್ಣಾವಧಿ ಸಿಎಂ ಎಂದು ಹೇಳಿಕೊಂಡಿದ್ದಾರೆ. ಜೊತೆಗೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಅಂತಲೂ ತಿಳಿಸಿದ್ದರು. ಇದು ಡಿಸಿಎಂ ಡಿಕೆ ಶಿವಕುಮಾರ್ ಅವರ ನಿದ್ದೆಗಡಿಸಿದೆ. ಅವರ ಬೆಂಬಲಿಗರನ್ನು ದೆಹಲಿಗೆ ದೌಡಾಯಿಸುವಂತೆ ಮಾಡಿದೆ. ಇದೆಲ್ಲ ಬೆಳವಣಿಗೆ ಮಧ್ಯೆ ಡಿಕೆಶಿ ಅವರು ಹೈಕಮಾಂಡ್ ತಾನು ಕೊಟ್ಟಿದ್ದ ಭರವಸೆ, ಮಾತು ಉಳಿಸಿಕೊಳ್ಳಬೇಕೆಂದು ನೆನಪಿಸಿ ಪೋಸ್ಟ ಮಾಡಿದ್ದಾರೆ.

"ಪದ ಶಕ್ತಿಯೇ ವಿಶ್ವ ಶಕ್ತಿ'

ಡಿಕೆ ಶಿವಕುಮಾರ್ ಅವರು ಗುರುವಾರ ಬೆಳಗ್ಗೆ, ""ಪದ ಶಕ್ತಿಯೇ ವಿಶ್ವ ಶಕ್ತಿ', "ಜಗತ್ತಿನ ಅತಿದೊಡ್ಡ ಶಕ್ತಿ ಎಂದರೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು. ನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ ಅಥವಾ ನಾನು ಸೇರಿದಂತೆ ಬೇರೆ ಯಾರೇ ಆಗಿರಲಿ, ಎಲ್ಲರೂ ಹೇಳಿದಂತೆ ನಡೆಯಬೇಕು. ಪದ ಶಕ್ತಿಯೇ ವಿಶ್ವ ಶಕ್ತಿ'' ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರಿನ ಶಾಂಗ್ರೀಲಾ ಹೋಟೆಲ್ ಸಭೆ ಬಳಿಕ ದೆಹಲಿಯಲ್ಲಿ ನಡೆದ ಮಹತ್ವ ಚರ್ಚೆಗಳು, ಸಭೆಯಲ್ಲಿ ನೀಡಿದ್ದ ಭರವಸೆಯನ್ನು ವರಿಷ್ಠರಿಗೆ ನೆನಪಿಸುವ ಕೆಲಸ ಮಾಡಿದ್ದಾರೆ. ಈ ವಿಚಾರದಲ್ಲಿ ಈ ಸಲ ತಾವು ಮನವೊಲಿಕೆ ಬಗ್ಗುವುದಿಲ್ಲ ಎಂಬ ಸ್ಪಷ್ಟ ಸಂದೇಶ ಡಿಕೆ ಶಿವಕುಮಾರ್ ರವಾನಿಸಿದಂತೆ ಕಾಣುಸಿತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+