• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎಂ.ಬಿ.ಪಾಟೀಲ್ ವಾಗ್ದಾಳಿಗೆ ಡಿ.ಕೆ.ಶಿವಕುಮಾರ್ ಸಮಾಧಾನದ ಉತ್ತರ

|
   ಡಿಕೆಶಿ ವಿರುದ್ಧ ಏಕವಚನದ ವಾಗ್ದಾಳಿ ನಡೆಸಿದ ಎಂ.ಬಿ.ಪಾಟೀಲ್

   ಬೆಂಗಳೂರು, ಏಪ್ರಿಲ್ 13: ಸಚಿವ ಎಂ.ಬಿ.ಪಾಟೀಲ್ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರ ಬಗ್ಗೆ ಸಮಾಧಾನವಾಗಿಯೇ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

   ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

   ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಕ್ಷಮೆ ಕೇಳುತ್ತೇವೆ ಎಂದಿದ್ದ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಎಂಬಿ.ಪಾಟೀಲ್ ಅವರು ಗರಂ ಆಗಿ ದಿನೇಶ್ ಗುಂಡೂರಾವ್ ಅವರ ಬಳಿ ಏಕವಚನದಲ್ಲಿಯೇ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದರು.

   ಲಿಂಗಾಯತ ಧರ್ಮ: ಡಿಕೆಶಿ ವಿರುದ್ಧ ಏಕವಚನದ ವಾಗ್ದಾಳಿ ಮಾಡಿದ MB.ಪಾಟೀಲ್

   ಈ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ ದೊಡ್ಡವರು ಬಿಡಿ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಆದರೆ ಲೀಂಗಾಯತ ಧರ್ಮ ವಿಚಾರವಾಗಿ ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

   'ಡಿ.ಕೆ.ಶಿವಕುಮಾರ್ ಒಕ್ಕಲಿಗರ ಬಾಹುಳ್ಯದಲ್ಲಿ ಪಕ್ಷದ ಸಂಘಟನೆ ಮಾಡಲಿ' ಎಂದಿದ್ದ ಬಗ್ಗೆಯೂ ಪ್ರತಿಕ್ರಿಯಿಸಿದ ಡಿಕೆಶಿ, ನನಗೆ ಅಷ್ಟೊಂದು ಶಕ್ತಿಯಿಲ್ಲ, ಏನೋ ಜನ ಪ್ರೀತಿಯಿಂದ ಮತ ಹಾಕುತ್ತಿದ್ದಾರೆ ಅಷ್ಟೆ ಎಂದು ಪರೋಕ್ಷವಾಗಿ ಎಂ.ಬಿ.ಪಾಟೀಲ್ ಅವರಿಗೆ ಟಾಂಗ್ ನೀಡಿದ್ದಾರೆ.

   ಎಂಬಿ.ಪಾಟೀಲ್ ಅವರು ರಾಹುಲ್ ಗಾಂಧಿ ಅವರಿಗೆ ದೂರು ನೀಡಲಿ, ಪಕ್ಷದಲ್ಲಿ ಶಿಸ್ತು ಮುಖ್ಯ, ಪಕ್ಷ ಹೇಳಿದಂತೆ ಕೇಳುತ್ತೇನೆ, ಆದರೆ ಲಿಂಗಾಯತ ಧರ್ಮ ವಿಚಾರವಾಗಿ ನನ್ನ ಹೇಳಿಕೆಯನ್ನು ವಾಪಸ್ ಪಡೆಯುವುದಿಲ್ಲ ಎಂದು ಡಿಕೆಶಿ ಹೇಳಿದರು.

   ಲಿಂಗಾಯತ ಚಳವಳಿಯನ್ನು ಹದಗೆಡಿಸಿದ ರಾಜಕೀಯ ಮುಖಂಡರು

   ಡಿ.ಕೆ.ಶಿವಕುಮಾರ್ ಅವರು ಎಂ.ಬಿ.ಪಾಟೀಲ್ ಅವರ ವಾಗ್ದಾಳಿಗೆ ನಿರ್ಲಕ್ಷ್ಯದಿಂದಲೇ ಉತ್ತರ ನೀಡಿದ್ದಾರೆ. ಅಹಂಕಾರಕ್ಕೆ ನಿರ್ಲಕ್ಷ್ಯವೇ ಮದ್ದು ಎಂಬ ನೀತಿಯನ್ನು ಡಿ.ಕೆ.ಶಿ ಪಾಲಿಸುತ್ತಿರುವಂತಿದೆ.

   English summary
   MB Patil slammed DK Shivakumar yesterday for his statement about Lingayatha religion. today DK Shikaumar reply to MB Patil and said, i did not take back my statement about Lingayatha religion.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X