ಡಿಕೆಶಿ ರೋಡ್ ಶೋ; 15 ಜನರ ವಿರುದ್ಧ ಎಫ್‌ಐಆರ್

ಬೆಂಗಳೂರು, ಅಕ್ಟೋಬರ್ 29 : ಮಾಜಿ ಸಚಿವ ಡಿ. ಕೆ. ಶಿವಕುಮಾರ್ ರೋಡ್ ಶೋಗೆ ಸಂಬಂಧಿಸಿದಂತೆ 15 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂಬ ದೂರಿನ ಅನ್ವಯ ಕ್ರಮ ಕೈಗೊಳ್ಳಲಾಗಿದೆ.

ಅಕ್ಟೋಬರ್ 26ರ ಶನಿವಾರ ಡಿ. ಕೆ. ಶಿವಕುಮಾರ್ ಬೆಂಗಳೂರು ವಿಮಾನ ನಿಲ್ದಾಣದಿಂದ ರೋಡ್ ಶೋ ಮೂಲಕ ಕೆಪಿಸಿಸಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಈಶಾನ್ಯ ವಿಭಾಗ ಡಿಸಿಪಿ ಗನ್‌ ಮ್ಯಾನ್ ಭರಮಪ್ಪ ಸುನಾಗರ್ ದೂರು ನೀಡಿದ್ದರು.

DK Shivakumar Road Show FIR Against 15 People

ರೋಡ್ ಶೋ ಸಂದರ್ಭದಲ್ಲಿ ಡಿ. ಕೆ. ಶಿವಕುಮಾರ್ ಅಭಿಮಾನಿಗಳು ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ ಅನ್ವಯ 15 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿತ್ತು. ಸುಮಾರು 50 ದಿನಗಳ ಬಳಿಕ ರಾಜ್ಯಕ್ಕೆ ವಾಪಸ್ ಆಗಿದ್ದ ಡಿ. ಕೆ. ಶಿವಕುಮಾರ್‌ಗೆ ಅದ್ದೂರಿ ಸ್ವಾಗತ ಸಿಕ್ಕಿತ್ತು. ವಿಮಾನ ನಿಲ್ದಾಣದಿಂದ ಮೆರವಣಿಗೆ ಮೂಲಕ ಅವರನ್ನು ಕೆಪಿಸಿಸಿ ಕಚೇರಿಗೆ ಕರೆತರಲಾಗಿತ್ತು.

ಡಿ. ಕೆ. ಶಿವಕುಮಾರ್ ವಿಮಾನ ನಿಲ್ದಾಣದಿಂದ ಕೆಪಿಸಿಸಿ ಕಚೇರಿಗೆ ಬರುವಾಗ ಹಲವಾರು ಕಡೆ ಸಂಚಾರ ದಟ್ಟಣೆ ಉಂಟಾಗಿತ್ತು. ಪೊಲೀಸರ ಕರ್ತವ್ಯಕ್ಕೂ ಅಡ್ಡಿ ಪಡಿಸಲಾಗಿದೆ ಎಂದು ದೂರು ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+