ಡಿ.ಕೆ.ಶಿವಕುಮಾರ್ 'ಸಾಲ್ಟ್ ಆಂಡ್ ಪೆಪ್ಪರ್ ಲುಕ್' ಗೆ ನೆಟ್ಟಿಗರು ಫಿದಾ
ಬೆಂಗಳೂರು, ಅಕ್ಟೋಬರ್ 26: ಐವತ್ತು ದಿನ ಜೈಲು ವಾಸ ಅನುಭವಿಸಿ ಜಾಮೀನಿನ ಹೊರಬಂದಿರುವ ಡಿ.ಕೆ.ಶಿವಕುಮಾರ್ ಅವರ ಹೊಸ ಲುಕ್ ಭಾರಿ ಸದ್ದು ಮಾಡುತ್ತಿದೆ.
ಪ್ರಕರಣದ ವಿಚಾರಣೆಗಾಗಿ ಆಗಾಗ್ಗೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆಗಮಿಸುತ್ತಿದ್ದ ಡಿ.ಕೆ.ಶಿವಕುಮಾರ್ ಕೃಶವಾದಂತೆ ಕಾಣುತ್ತಿದ್ದರು. ಆದರೆ ಜಾಮೀನಿನ ಮೇಲೆ ಹೊರಬಂದ ದಿನ ಅವರ ಲುಕ್ ಬದಲಾಗಿ ಹೋಗಿತ್ತು.
ಡಿ.ಕೆ.ಶಿವಕುಮಾರ್ ಅವರು ಗಡ್ಡ ಬಿಟ್ಟು ಮಿಂಚುತ್ತಿದ್ದಾರೆ. ಕಪ್ಪು-ಬಿಳಿ ಮಿಶ್ರಿತ ಗಡ್ಡವನ್ನು ಫ್ಯಾಷನ್ ಲೋಕದಲ್ಲಿ 'ಸಾಲ್ಟ್ ಆಂಡ್ ಪೆಪ್ಪರ್ ಲುಕ್' ಎಂದು ಕರೆಯಲಾಗುತ್ತದೆ. ಯಾವಾಗಲೂ ಕ್ಲೀನ್ ಶೇವ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಡಿ.ಕೆ.ಶಿವಕುಮಾರ್ ಅವರ ಸಾಲ್ಟ್ ಆಂಡ್ ಪೆಪ್ಪರ್ ಲುಕ್ ಗೆ ಅಭಿಮಾನಿಗಳು, ನೆಟ್ಟಿಗರು ಫಿದಾ ಆಗಿದ್ದಾರೆ.

ಕಬಾಲಿ ಚಿತ್ರದಲ್ಲಿ ರಜನೀಕಾಂತ್, ಕೋಟಿಗೊಬ್ಬ ದಲ್ಲಿ ವಿಷ್ಣುವರ್ಧನ್, ಚಕ್ರವರ್ತಿ ಸಿನಿಮಾದಲ್ಲಿ ದರ್ಶನ್ ಮಫ್ತಿ ಚಿತ್ರದಲ್ಲಿ ಶಿವರಾಜ್ ಕುಮಾರ್ ಇನ್ನೂ ಹಲವು ನಾಯಕರು ಈ ಸಾಲ್ಟ್ ಆಂಡ್ ಪೆಪ್ಪರ್ ಲುಕ್ ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳನ್ನು ರಂಜಿಸಿದ್ದಾರೆ.
ಮನೆ ದೇವರ ದರ್ಶನದ ಬಳಿಕ ಡಿ.ಕೆ.ಶಿವಕುಮಾರ್ ಗಡ್ಡ ತೆಗೆದು ಮತ್ತೆ ತಮ್ಮ ಹಳೆ ಲುಕ್‌ಗೆ ಬರಲಿದ್ದಾರೆ ಎನ್ನಲಾಗುತ್ತಿದೆ.
ಇಂದು ಡಿ.ಕೆ.ಶಿವಕುಮಾರ್ ರಾಜ್ಯಕ್ಕೆ ಬರುತ್ತಿದ್ದು, ಸಾವಿರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಜ್ಜಾಗಿದ್ದಾರೆ. ಸುಮಾರು ಐವತ್ತೈದು ದಿನಗಳ ನಂತರ ಡಿ.ಕೆ.ಶಿವಕುಮಾರ್ ರಾಜ್ಯಕ್ಕೆ ವಾಪಸ್ಸಾಗುತ್ತಿದ್ದಾರೆ.












Click it and Unblock the Notifications