• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಈ ಚುನಾವಣೆ ನಂತರ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ!

|

ಬೆಂಗಳೂರು, ಅ. 24: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಳ್ಳುವುದು ಖಚಿತವಾಗಿದೆಯಾ? ಅಂಥದ್ದೊಂದು ಚರ್ಚೆಗೆ ಕಾರಣವಾಗಿದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ. ಈ ಚುನಾವಣೆ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತಾರಂತೆ. ಯಡಿಯೂರಪ್ಪ ಆವರು ಹೋದರೆ ಮುನಿರತ್ನ ಕಥೆ ಗೋವಿಂದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವಿವಿಧ ವಾರ್ಡ್ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ ಅವರ ಪರ ಪ್ರಚಾರ ನಡೆಸಿದ ಡಿ.ಕೆ. ಶಿವಕುಮಾರ್ ಅವರು

ಸಿಎಂ ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯದೊಂದಿಗೆ ಮುನಿರತ್ನ ಅವರ ರಾಜಕೀಯವೂ ಮುಗಿಯುತ್ತದೆ ಎಂದಿದ್ದಾರೆ. ಕಳೆದ ಚುನಾವಣೆಯಲ್ಲಿ ನಿಮ್ಮ ಹಾಗೂ ನಮ್ಮ ಶ್ರಮವನ್ನು 50 ಕೋಟಿಗೆ ಮಾರಿಕೊಂಡಿದ್ದಾರೆ. ಮಾತೃ ಪಕ್ಷಕ್ಕೆ ದ್ರೋಹ ಮಾಡುವುದು ಹೆತ್ತ ತಾಯಿಗೆ ದ್ರೋಹ ಮಾಡಿದಂತೆ. ಇದಕ್ಕೆ ಸರಿಯಾಗಿ ಬುದ್ಧಿ ಕಲಿಸಲು ಅವಕಾಶ ಸಿಕ್ಕಿದೆ. ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಎಲ್ಲವೂ ಒಳ್ಳೆಯದಾಗುತ್ತದೆ ಎಂದರು.

ಕ್ಷೇತ್ರಕ್ಕೆ ಮುಕ್ತಿ ತಂದುಕೊಡಬೇಕು

ಕ್ಷೇತ್ರಕ್ಕೆ ಮುಕ್ತಿ ತಂದುಕೊಡಬೇಕು

ಮುನಿರತ್ನ ಅವರಿಗೆ ಬಿಜೆಪಿಯವರೆ ಇದೊಂದು ಬಾರಿ ಅವಕಾಶ ಕೊಡುತ್ತೇವೆ ಎಂದಿದ್ದಾರೆ. ಮುಂದಿನ ಬಾರಿ ಇವರಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಇವರನ್ನು ಖಾಲಿ ಮಾಡಿಸಿ ಕ್ಷೇತ್ರಕ್ಕೆ ಮುಕ್ತಿ ತಂದುಕೊಡಬೇಕು. ಬಿಜೆಪಿ, ಕಾಂಗ್ರೆಸ್, ದಳದ ಕಾರ್ಯಕರ್ತರಿಗೆ ಮುಕ್ತಿ ಸಿಗಬೇಕು ಎಂದರೆ ಒಂದೇ ದಾರಿ ಅದು ನಮ್ಮ ಅಭ್ಯರ್ಥಿ ಕುಸುಮಾ ಅವರ ಗೆಲುವು ಎಂದರು.

ಜನರ ಆಕ್ರೋಶಕ್ಕೆ ಹೆದರಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಚಾರಕ್ಕೆ ಬಂದಿಲ್ಲ

ಎಲ್ಲರೂ ಹಣ ತೆಗೆದುಕೊಳ್ಳಿ

ಎಲ್ಲರೂ ಹಣ ತೆಗೆದುಕೊಳ್ಳಿ

ಈ ಚುನಾವಣೆಗಾಗಿ 25 ಕೋಟಿ ಕೊಟ್ಟಿದ್ದಾರಂತೆ. ಅವರು ದುಡ್ಡು ಕೊಟ್ಟರೆ ಯಾರೊಬ್ಬರೂ ಬೇಡ ಅನ್ನ ಬೇಡಿ. ಎಲ್ಲರೂ ಹಣ ತೆಗೆದುಕೊಳ್ಳಿ. ಬಿಜೆಪಿ ನೋಟು, ಕಾಂಗ್ರೆಸ್‌ಗೆ ಓಟು. ಮುನಿರತ್ನ ಅವರ ನೋಟು ಕುಸುಮಾಗೆ ಓಟು ಇದನ್ನು ಗಮನದಲ್ಲಿಟ್ಟುಕೊಳ್ಳಿ ಎಂದು ಡಿಕೆಶಿ ಮನವಿ ಮಾಡಿದರು.

ಕೆಟ್ಟ ಹುಳುವನ್ನು ತೆಗೆಯಿರಿ

ಕೆಟ್ಟ ಹುಳುವನ್ನು ತೆಗೆಯಿರಿ

ಎಲ್ಲ ಹೆಣ್ಣು ಮಕ್ಕಳು, ಯುವಕರು, ಎಲ್ಲ ವರ್ಗದವರು ಈ ಹೆಣ್ಣು ಮಗಳಿಗೆ ಆಶೀರ್ವಾದ ಮಾಡಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಿ. ಈ ಕ್ಷೇತ್ರದಲ್ಲಿರುವ ಕೆಟ್ಟ ಹುಳುವನ್ನು ತೆಗಿಯಬೇಕು. ಬಿಜೆಪಿ ಅಭ್ಯರ್ಥಿ ಸೋತರೆ ಪೊಲೀಸಿನವರಿಗೂ ಖುಷಿಯಾಗುತ್ತದೆ. ಅವರು ಒಳಗೊಳಗೇ ಕಾಯುತ್ತಿದ್ದಾರೆ.

ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಹುದ್ದೆ ಚರ್ಚೆ: ಕೊನೆಗೂ ಮೌನ ಮುರಿದ ಡಿಕೆಶಿ!

  ಎಲ್ಲರೂ BJPಗೆ ಸೇರೋದು ಪಕ್ಕ!! | Oneindia Kannada
  ಕ್ಷೇತ್ರದ ಅಭಿವೃದ್ಧಿ ಕುಸುಮಾ ಗೆಲವು ಅಗತ್ಯ

  ಕ್ಷೇತ್ರದ ಅಭಿವೃದ್ಧಿ ಕುಸುಮಾ ಗೆಲವು ಅಗತ್ಯ

  ಯಾರಿಗಾದರೂ 15 ಲಕ್ಷ ಬಂತಾ? ಚಾಲಕರು, ಸವಿತಾ ಸಮಾಜದವರಿಗೆ ಘೋಷಿಸಿದ 5 ಸಾವಿರ ಬಂತಾ? ಯಾವುದು ಬಂದಿಲ್ಲ. ಹೀಗಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಕುಸುಮಾ ಅವರನ್ನು ಗೆಲ್ಲಿಸಿ ಎಂದು ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದರು.

  English summary
  KPCC president DK Shivakumar has said that after the by-election in Karnataka Chief Minister BS Yediyurappa will step down from chief minister post. Know more
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X