• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆರ್.ಆರ್. ನಗರ ಕಾಂಗ್ರೆಸ್ ಅಭ್ಯರ್ಥಿ ಕುರಿತು ಡಿಕೆಶಿ ಮಹತ್ವದ ಹೇಳಿಕೆ!

|

ಬೆಂಗಳೂರು, ಅ. 08: ಆರ್‌ಆರ್‌ ನಗರ ಅಭ್ಯರ್ಥಿ ಕುಸುಮಾ ಅವರನ್ನು ಸಿದ್ದರಾಮಯ್ಯ ಅವರು ಇಂದು ಭೇಟಿ ಮಾಡದೇ ಕಳುಹಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದುದರಿಂದ ಭೇಟಿಗೆ ಸಿಬ್ಬಂದಿ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆರ್‌.ಆರ್. ನಗರ ಅಭ್ಯರ್ಥಿ ಕುಸುಮಾ ಆಯ್ಕೆಯ ಕುರಿತು ಮಹತ್ವದ ಮಾತನ್ನಾಡಿದ್ದಾನೆ.

ಜೊತೆಗೆ ಕೊರೊನಾ ವೈರಸ್ ಆತಂಕದ ಮಧ್ಯೆಯೂ ರಾಜ್ಯದಲ್ಲಿ ಉಪ ಚುನಾವಣೆ ರಂಗೇರುತ್ತಿದೆ. ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಮಹತ್ವ ಪಡದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದು ಆರು ವರ್ಷವಾಗಿದೆ. ಈ ಅವಧಿಯಲ್ಲಿ ದೇಶ ಯಾವ ರಂಗದಲ್ಲಿ ಪ್ರಗತಿ ಸಾಧಿಸಿದೆ? ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಘಟಕ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರಕಾರಗಳ ಜನ ವಿರೋಧಿ ನಡೆ ಕುರಿತ ಗೀತೆಗಳುಳ್ಳ ಆಡಿಯೋ-ವಿಡಿಯೋ ಸಿಡಿ ಬಿಡುಗಡೆಯನ್ನು ಮಾಡಲಾಗಿದೆ.

ಸರ್ಕಾರ ನುಡಿದಂತೆ ನಡೆದಿದೆಯಾ?

ಸರ್ಕಾರ ನುಡಿದಂತೆ ನಡೆದಿದೆಯಾ?

'ದೇಶದಲ್ಲಿ ಅತಿ ದೊಡ್ಡ ಬಹುಮತ ಇರುವ ಸರ್ಕಾರ ಇದೆ. ಇದು ಜನರು ಕೊಟ್ಟ ತೀರ್ಪು. ನಾವು ಅದರ ಬಗ್ಗೆ ಮಾತನಾಡುವುದಿಲ್ಲ. ಆದರೆ ಸರ್ಕಾರ ನುಡಿದಂತೆ ನಡೆಯಿತಾ? ಕೊಟ್ಟ ಮಾತು ಉಳಿಸಿಕೊಂಡಿತಾ? ಈ ದೇಶಕ್ಕೆ ಆದ ಲಾಭ ಏನು? ಹಿಂದೆ ಆರ್ಥಿಕ ತಜ್ಞರು ಪ್ರಧಾನ ಮಂತ್ರಿಯಾಗಿದ್ದಾಗ ದೇಶ ಹೇಗಿತ್ತು? ಮೋದಿ ಅವರು ಅಧಿಕಾರಕ್ಕೆ ಬಂದು ಆರು ವರ್ಷ ಆಯ್ತು. ದೇಶ ಯಾವ ರಂಗದಲ್ಲಿ ಪ್ರಗತಿ ಸಾಧಿಸಿದೆ? ಜನರಿಗೆ ಅವರು ಉದ್ಯೋಗ ಕೊಟ್ಟರಾ? ಕಪ್ಪು ಹಣ ತಂದರಾ? ರಾಜ್ಯದಲ್ಲಿ ಶಾಂತಿ ಕಾಪಾಡಿದರಾ? ದೇಶದ ಗಡಿ ಉಳಿಸಿಕೊಂಡರಾ? ದೇಶದ ಐಕ್ಯತೆ, ಸಮಗ್ರತೆ, ಶಾಂತಿ ಉಳಿಸಿಕೊಂಡರಾ? ರೈತ ಉಳಿದನಾ? ಕಾರ್ಮಿಕ ಉಳಿದನಾ? ಇದರ ಬಗ್ಗೆ ಬಿಜೆಪಿ ಸ್ನೇಹಿತರು ಉತ್ತರಿಸಬೇಕು ಎಂದರು.

ಮನುಕುಲ ನರಳುತ್ತಿದೆ

ಮನುಕುಲ ನರಳುತ್ತಿದೆ

ಶಾಲೆ ಆರಂಭಿಸುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ನಾನು ಪ್ರಕೃತಿ ನಿಯಮದಲ್ಲಿ ನಂಬಿಕೆ ಇಟ್ಟವನು. ಇಡೀ ಪ್ರಪಂಚ, ಮನುಕುಲ ನರಳುತ್ತಿದೆ. ಇಂತಹ ಸಂದರ್ಭದಲ್ಲಿ ಜನರನ್ನು ಕಾಪಾಡದ ಸರ್ಕಾರ ನಮಗೆ ಬೇಕೇ? ಶಾಲೆಗೆ ಹೋಗುವ ಚಿಕ್ಕ ಮಕ್ಕಳು, ಅವರ ಪೋಷಕರು ಆತಂಕ ಪಡುವಂತಾಗಿದೆ ಎಂದು ಹೇಳಿದ್ದಾರೆ.

ಈ ದೇಶದಲ್ಲಿ ಶಾಂತಿ ಕಾಪಾಡಿ, ಅಭಿವೃದ್ಧಿ ಮಾಡಬೇಕು. ಜನರ ಬದುಕಿನ ಬಗ್ಗೆ ಕಾಳಜಿ ವಹಿಸಿ, ನಾವೆಲ್ಲರೂ ಕೆಲಸ ಮಾಡಬೇಕು ಎಂದರು.

ಚುನಾವಣಾ ಅಧಿಸೂಚನೆ ಆಗಿಲ್ಲ

ಚುನಾವಣಾ ಅಧಿಸೂಚನೆ ಆಗಿಲ್ಲ

ಚುನಾವಣಾ ಅಧಿಸೂಚನೆ ಇನ್ನೂ ಬಿಡುಗಡೆ ಆಗಿಲ್ಲ. ಅದಕ್ಕಾಗಿ ನಾವು ಕಾಯುತ್ತಿದ್ದೇವೆ. ಅದಾದ ನಂತರ 14 ನೇ ತಾರೀಖು ರಾಜರಾಜೇಶ್ವರಿ ನಗರ ಉಪಚುನಾವಣೆ ನಾಮಪತ್ರ ಸಲ್ಲಿಕೆ ಮಾಡುತ್ತೇವೆ. 15 ರಂದು ಶಿರಾದಲ್ಲಿ ನಾವೆಲ್ಲರೂ ಹೋಗಿ ನಾಮಪತ್ರ ಸಲ್ಲಿಸುತ್ತೇವೆ. ಎರಡೂ ಕಡೆ ನಾನು ಹಾಗೂ ಸಿಎಲ್ ಪಿ ನಾಯಕರಾದ ಸಿದ್ದರಾಮಯ್ಯನವರು ಇರುತ್ತಾರೆ.

ನನಗೆ ರಾಜೇಶ್ ಗೌಡ ಯಾರೂ ಅಂತಾನೆ ಗೊತ್ತಿಲ್ಲ. ರಾಜಣ್ಣ ಅವರು ಜಯಚಂದ್ರ ಅವರ ಹೆಸರು ಪ್ರಸ್ತಾಪ ಮಾಡಿದರು. ಪರಮೇಶ್ವರ್ ಅವರು ಅದಕ್ಕೆ ಒಪ್ಪಿದರು. ನಾವೆಲ್ಲ ಒಮ್ಮತದಿಂದ ಒಂದೇ ಅಭ್ಯರ್ಥಿ ಹೆಸರನ್ನು ರವಾನಿಸಿದ್ದೇವು ಎಂದಿದ್ದಾರೆ.

  Kusuma : ರಾಜಕೀಯ ವ್ಯಾಪಾರ ಅಲ್ಲ ,ಪ್ರತಿ ಸ್ಪರ್ಧಿ ಬಗ್ಗೆ NO TENSION | Oneindia Kannada
  ಎಲ್ಲರ ಜತೆ ಚರ್ಚಿಸಿ ಅಭ್ಯರ್ಥಿ ಆಯ್ಕೆ

  ಎಲ್ಲರ ಜತೆ ಚರ್ಚಿಸಿ ಅಭ್ಯರ್ಥಿ ಆಯ್ಕೆ

  ರಾಜರಾಜೇಶ್ವರಿ ನಗರ ಸೇರಿದಂತೆ ವಿಧಾನಸಭೆ, ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆ ಮಾಡುವಾಗ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಜತೆ ಚರ್ಚಿಸಿ ಅಂತಿಮಗೊಳಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಕಾರ್ಯಕ್ರಮದ ಬಳಿಕ ಮಾಧ್ಯಮಗಳಿಗೆ ಅವರು ಹೇಳಿಕೆಯನ್ನು ಕೊಟ್ಟಿದ್ದಾರೆ.

  ಜೊತೆಗೆ ನಾನು ಭ್ರಷ್ಟ ಅನ್ನೋ ಸಾಕ್ಷಿಯನ್ನು ಜನರ ಮುಂದೆ ಇಡಲಿ ಎಂದು ಬಿಜೆಪಿ ನಾಯಕರಿಗೆ ಡಿಕೆಶಿ ಸವಾಲು ಹಾಕಿದ್ದಾರೆ. ನಾನು ಭ್ರಷ್ಟನೋ ಅಥವಾ ತತ್ವಜ್ಞಾನಿಯೋ ಎಂಬುದನ್ನು ಸಿ.ಟಿ ರವಿ ಅವರು ಜನರ ಮುಂದೆ ಇಡಲಿ. ನನ್ನ ವಿರುದ್ಧ ಎಷ್ಟು ತನಿಖೆಯಾಗಿದೆ? ಯಾವ ದಾಖಲೆ ಇದೆ ಎಂಬುದನ್ನು ಜನರ ಮುಂದೆ ಇಡಲಿ. ಕೆಲವರಿಗೆ ನನ್ನ ಹೆಸರು ಹೇಳಿದರೆ ಮಾರ್ಕೆಟ್ ಸಿಗುತ್ತದೆ, ಹೀಗಾಗಿ ನನ್ನ ಬಗ್ಗೆ ಮಾತನಾಡುತ್ತಾರೆ. ಮಾತಾಡಿಕೊಳ್ಳಲಿ ಬಿಡಿ. ನಾನು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.

  English summary
  KPCC President DK Shivakumar said that the election of candidates, including Rajarajeshwari Nagar, was finalized in consultation with party leaders and activists during the election.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X