• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆರ್ ಆರ್ ನಗರ: ಮುನಿರತ್ನಗೆ ಕಾಂಗ್ರೆಸ್ ಟಿಕೆಟ್ ಡಿ.ಕೆ. ಶಿವಕುಮಾರ್ ವಿಷಾದ!

|

ಬೆಂಗಳೂರು, ಅ. 22: ರಾಜರಾಜೇಶ್ವರಿ ನಗರದಲ್ಲಿ ಉಂಟಾಗುತ್ತಿರುವ ಅಶಾಂತಿಗೆ ಅಂತ್ಯ ಹಾಡಿ, ಕ್ಷೇತ್ರವನ್ನು ಎಲ್ಲ ರಂಗದಲ್ಲೂ ಅಭಿವೃದ್ಧಿ ಮಾಡಲು ನಿಮ್ಮ ಸಹೋದರಿ ಕುಸುಮಾ ಅವರಿಗೆ ಮತ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ.

ನನ್ನ ಹಾಗೂ ನಿಮ್ಮ ಸೋದರಿ ಕುಸುಮಾ ಅವರಿಗೆ ಆಶೀರ್ವಾದ ಮಾಡಿ ಎಂದು ಕೇಳಲು ಪಕ್ಷದ ನಾಯಕರು ಇಂದು ನಿಮ್ಮ ಮುಂದೆ ಬಂದಿದ್ದೇವೆ. ನೀವೆಲ್ಲರೂ ವಿದ್ಯಾವಂತರು, ಬುದ್ಧಿವಂತರಿದ್ದೀರಿ. ಈ ಚುನಾವಣೆ ಯಾಕೆ ಬಂತು ಅಂತಾ ಒಮ್ಮೆ ಆಲೋಚನೆ ಮಾಡಿ. ಐದು ವರ್ಷ ಕೆಲಸ ಮಾಡಲು ನೀವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಳಿಸಿಕೊಟ್ಟಿರಿ. ಆದರೆ ಅವರು ಮಾಡಿದ್ದಾದರೂ ಏನು? ನಿಮ್ಮ ಮತವನ್ನು, ನಿಮ್ಮ ವಿಶ್ವಾಸವನ್ನು, ನಂಬಿಕೆಯನ್ನೇ ಅವರು ಮಾರಿಕೊಂಡರು ಎಂದು ಡಿಕೆಶಿ ಹೇಳಿದ್ದಾರೆ. ಜೊತೆಗೆ ಈ ಹಿಂದಿನ ಚುನಾವಣೆಯಲ್ಲಿ ಮುನಿರತ್ನ ಅವರಿಗೆ ಪಕ್ಷದಿಂದ ಟಿಕೆಟ್ ಕೊಟ್ಟಿದ್ದಕ್ಕೂ ಅವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಅಶಾಂತಿ ನಿಗ್ರಹಕ್ಕೆ ಮನಗೆ ಮತ ಕೊಡಿ

ಅಶಾಂತಿ ನಿಗ್ರಹಕ್ಕೆ ಮನಗೆ ಮತ ಕೊಡಿ

ನೀವು ನಮಗೆ ಮತ ನೀಡುತ್ತೀರಿ ಅಂತ ನನಗೆ ವಿಶ್ವಾಸ ಇದೆ. ಅದಷ್ಟೇ ಸಾಲದು. ನೀವು ಬೇರೆ ಹತ್ತು ಜನರಿಂದ ಮತ ಹಾಕಿಸಬೇಕು. ಆ ಶಕ್ತಿ ನಿಮಗೆ ಬರಲಿ, ನಿಮಗದು ಇದೆ. ನಿಮ್ಮ ಕುಟುಂಬ, ಸ್ನೇಹಿತರು, ಅಕ್ಕ ಪಕ್ಕದವರೊಂದಿಗೆ ಚರ್ಚಿಸಿ. ನೀವು ನಿಮ್ಮ ಕ್ಷೇತ್ರದ ರಕ್ಷಣೆ, ಎಲ್ಲ ರಂಗದ ಅಭಿವೃದ್ಧಿಗೆ, ಈ ಕ್ಷೇತ್ರದಲ್ಲಿ ಮೂಡುತ್ತಿರುವ ಅಶಾಂತಿ ನಿಗ್ರಹಕ್ಕೆ, ನಿಮ್ಮ ಮತದಾರ ಗುರುತಿನ ಚೀಟಿ ಕಿತ್ತುಕೊಂಡು ಚುನಾವಣೆ ಮಾಡುತ್ತಿರುವುದಕ್ಕೆ ಇತೀಶ್ರೀ ಹಾಡಲು ನೀವು ಮತ ಹಾಕಬೇಕು ಎಂದು ಮನವಿ ಮಾಡಿದರು.

ನಮ್ಮದು ಮಹಾಪರಾಧ

ನಮ್ಮದು ಮಹಾಪರಾಧ

ಇಂತಹ ವ್ಯಕ್ತಿಗೆ ಟಿಕೆಟ್ ಕೊಟ್ಟು, ಬೆಳೆಸಿ ನಾವು ಕೂಡ ತಪ್ಪು ಮಾಡಿದ್ದೇವೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಹೆಸರು ಹೇಳದೇ ಡಿಕೆ ಶಿವಕುಮಾರ್ ಪ್ರಸ್ತಾಪ ಮಾಡಿದರು. ಹಿಂದೆ ಕಾಂಗ್ರೆಸ್ ಪಕ್ಷದಿಂದ ಅವರಿಗೆ ಟಿಕೆಟ್ ಕೊಟ್ಟಿರುವುದು ನಮ್ಮ ಮಹಾಪರಾಧ. ಅದಕ್ಕೆ ಈಗ ಪಶ್ಚಾತ್ತಾಪ ಪಡುತ್ತಿದ್ದೇವೆ ಎಂದರು.

ಕಾರ್ಯಕರ್ತರ ರಕ್ಷಣೆಗೆ ಬದ್ಧ

ಕಾರ್ಯಕರ್ತರ ರಕ್ಷಣೆಗೆ ಬದ್ಧ

ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ನೋಡಿಕೊಂಡು ಸುಮ್ಮನೆ ಕೂರುವುದಿಲ್ಲ. ಕಾರ್ಯಕರ್ತರ ರಕ್ಷಣೆಗೆ ನಾವು ಸದಾ ಬದ್ಧರಾಗಿದ್ದೇವೆ. ಕಾರ್ಯಕರ್ತರ ರಕ್ಷಣೆ ವಿಚಾರದಲ್ಲಿ ರಾಜಿ ಇಲ್ಲ ಎಂದರು.

  ಮುಂದೆ ಜೆಡಿಎಸ್ ಕಥೆ ಏನು? | Ramachandrappa | Oneindia Kannada
  ಕ್ಷೇತ್ರದಾದ್ಯಂತ ಡಿಕೆಶಿ ಪ್ರಚಾರ

  ಕ್ಷೇತ್ರದಾದ್ಯಂತ ಡಿಕೆಶಿ ಪ್ರಚಾರ

  ಆರ್ ಆರ್ ನಗರ ಕ್ಷೇತ್ರದ ವ್ಯಾಪ್ತಿಯ ಸಿದ್ಧಾರ್ಥನಗರ, ಜಾಲಹಳ್ಳಿ, ಜ್ಞಾನಭಾರತಿ ವಾರ್ಡ್ ಮತ್ತಿತರ ಕಡೆ ಗುರುವಾರ ಅಭ್ಯರ್ಥಿ ಕುಸುಮಾ ಅವರ ಪರ ಪ್ರಚಾರ ನಡೆಸಿದ ಅವರಿಗೆ ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಭೈರೇಗೌಡ, ಉಮಾಶ್ರೀ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ರಾಜಕುಮಾರ್, ಆನೇಕಲ್ ಶಾಸಕ ಶಿವಣ್ಣ, ಮಾಜಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಮತ್ತಿತರರು ಸಾತ್ ನೀಡಿದರು. ಕುಸುಮಾ ಅವರು ಭಾಗವಹಿಸಿದ್ದರು.

  English summary
  KPCC President D.K. Shivakumar has said that your sister Kusuma should be voted to develop the sector on all fronts. D.K. Shivakumar has appealed to RR Nagar voters. Know more,
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X