ಚಿನ್ನದ ಬೆಲೆ 90,000 ಸಾವಿರ ಏರಿಕೆಗೆ ಇದೇ ಕಾರಣ ಎಂದ ಡಿ.ಕೆ ಶಿವಕುಮಾರ್!
ಕರ್ನಾಟಕದಲ್ಲಿ ವಿವಿಧ ವಸ್ತುಗಳು ಹಾಗೂ ಸೇವೆಗಳ ಬೆಲೆ ಏರಿಕೆಯಾಗಿದ್ದು. ಜನರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆಲೆ ಏರಿಕೆಯಿಂದಾಗಿ ಹೈರಾಣಾಗಿದ್ದಾರೆ. ಇದೀಗ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿದೆ ಎಂದು ಕಾಂಗ್ರೆಸ್, ರಾಜ್ಯ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿದೆ ಎಂದು ಕರ್ನಾಟಕ ಬಿಜೆಪಿಯ ನಾಯಕರು ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇದೀಗ ಕೇಂದ್ರ ಬಿಜೆಪಿ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ (ತೆರಿಗೆ) 2 ರೂಪಾಯಿ ಹೆಚ್ಚಳ ಮಾಡಿರುವುದು ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಇಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯನದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿತು.
ಈ ಪ್ರತಿಭಟನೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ಹಲವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಕ್ಸಮರ ನಡೆಸಿದ್ದಾರೆ. ಈ ಪ್ರತಿಭಟನಾ ಸಭೆಯಲ್ಲಿ ಮಾತನಾಡಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಜನರ ಆಕ್ರೋಶ ಬೆಲೆ ಏರಿಕೆ ಮಾಡಿರುವ ಬಿಜೆಪಿಯ ವಿರುದ್ಧವೇ ಹೊರತು ಪ್ರಗತಿಪರ ಕಾಂಗ್ರೆಸ್ ಮೇಲೆ ಅಲ್ಲ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡ ಅವರು ಖಾಲಿ ಗ್ಯಾಸ್ ಸಿಲಿಂಡರ್ ಅನ್ನು ಎತ್ತಿ ತೋರಿಸುವ ಮೂಲಕ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದರು. ಎನ್‌ಡಿಎ ಕೂಟದ ಆಂತರಿಕ ಜಗಳ, ನಾಯಕತ್ವದ ಕೊರತೆಯನ್ನು ಮುಚ್ಚಿಡಲು ಅವರು ಜನಾಕ್ರೋಶ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆಯೇ ಹೊರತು ಜನರಿಗಾಗಿ ಅಲ್ಲ ಎಂದರು.
ಕರ್ನಾಟಕದ ರೈತರಿಗೆ ನೆರವಾಗುವ ಉದ್ದೇಶದಿಂದ ನಮ್ಮ ಸರ್ಕಾರವು ಹಾಲಿನ ದರ ಏರಿಕೆ ಮಾಡಿದೆ. ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಹಾಲಿನ ಬೆಲೆ ಕರ್ನಾಟಕದಲ್ಲೇ ಕಡಿಮೆ. ಸಿಮೆಂಟ್, ಕಬ್ಬಿಣ, ಎಣ್ಣೆ, ಟೂಥ್‌ಪೇಸ್ಟ್, ಮೊಟ್ಟೆ ಹೀಗೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು ಬಿಜೆಪಿ. ಚಿನ್ನದ ಬೆಲೆ 90,000 ರೂ. ಗಡಿ ದಾಟಿದ್ದು, ಕಳೆದ 11 ವರ್ಷಗಳಿಂದ ಮಧ್ಯಮ ವರ್ಗದ ಹೆಣ್ಣುಮಕ್ಕಳು ಚಿನ್ನ ಧರಿಸಲಾಗುತ್ತಿಲ್ಲ. ಹೀಗಾಗಿ ಜನಾಕ್ರೋಶ ಬಿಜೆಪಿ ಸರ್ಕಾರದ ವಿರುದ್ಧವೇ ಆಗಬೇಕಿದೆ ಎಂದು ಅವರು ಹೇಳಿದ್ದಾರೆ.
ಭ್ರಷ್ಟ ಬಿಜೆಪಿ ವಿರುದ್ಧ ಹೋರಾಟವನ್ನು ಮಾಡಿ, 2028ರಲ್ಲಿ ಮತ್ತೆ 'ನಿಮ್ಮ ಸರ್ಕಾರ' ಅಧಿಕಾರಕ್ಕೆ ಬರಲಿದೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು. ಕಾಂಗ್ರೆಸ್ ಸರ್ಕಾರ ಕಳೆದ ಎರಡು ವರ್ಷಗಳಿಂದ ಉತ್ತಮ ಆಡಳಿತವನ್ನು ನೀಡುತ್ತಿದೆ.

ನಮ್ಮದು ರೈತ ಪರ, ಕಾರ್ಮಿಕ ಪರ, ಎಲ್ಲಾ ವರ್ಗದ ಜನರ ಪರ ಇರುವ ಸರ್ಕಾರ. ಕಾಮಾಲೆ ಕಣ್ಣಲ್ಲಿ ನೋಡುವುದು ಬಿಟ್ಟು, ಆತ್ಮಸಾಕ್ಷಿಯ ಒಳಗಣ್ಣನ್ನು ತೆರೆದು ನೋಡಿ; ನಮ್ಮ ಸರ್ಕಾರದ ಪ್ರತಿಯೊಂದು ಕೆಲಸಗಳೂ ಅಭಿವೃದ್ಧಿ ಪರವಾಗಿದೆ. ಬಿಜೆಪಿಯ ಬೆಲೆ ಏರಿಕೆ ನೀತಿಯನ್ನು ತಡೆದು, ಜನರ ಬದುಕನ್ನು ಹಸನು ಮಾಡುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಜನರಿಗೆ ನೆರವಾಗುತ್ತಿವೆ ಎಂದು ಅವರು ಭರವಸೆ ನೀಡಿದ್ದಾರೆ.
2028ರಲ್ಲಿ ಮತ್ತೆ 'ನಿಮ್ಮ ಸರ್ಕಾರ': 2028ರಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದರು. ನಾವೆಲ್ಲಾ ಒಗ್ಗಟ್ಟಾಗಿ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ನಡೆಸಲಿದ್ದೇವೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.
ಇನ್ನು ಈ ಪ್ರತಿಭಟನೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಖಾಲಿ ಗ್ಯಾಸ್ ಸಿಲಿಂಡರ್ ಅನ್ನು ಎತ್ತುವ ಮೂಲಕ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದರು. ಇದು ಪ್ರತಿಭಟನೆಯ ಕೇಂದ್ರಬಿಂದುವಾಗಿತ್ತು.












Click it and Unblock the Notifications