ಬೆಂಗಳೂರಿನಲ್ಲಿ ದೇಶದ ಎರಡನೇ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದ ಬಗ್ಗೆ ಡಿಕೆಶಿ ಮಹತ್ವದ ಮಾಹಿತಿ
India's 2nd Largest Stadium: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿಯಾಗಿ ಗೆದ್ದು 17 ವರ್ಷಗಳ ಬಳಿಕ ಮೊಟ್ಟ ಮೊದಲ ಟ್ರೋಫಿಗೆ ಮುತ್ತಿಟ್ಟಿತು. ಆದರೆ, ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿದ್ದು, ಈ ವೇಳೆ ಎಂ.ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದುರಂತದ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಹೊಸ ಸ್ಟೇಡಿಯಂ ನಿರ್ಮಾಣದತ್ತ ಗಮನಹರಿಸಿದ್ದು, ಈ ಕುರಿತು ಇದೀಗ ಡಿಸಿಎಂ ಡಿಕೆಶಿ ಅವರು ಟ್ವೀಟ್ ಮೂಲಕ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.
ಐಪಿಎಲ್ 18ನೇ ಆವೃತ್ತಿಯ ಫೈನಲ್ ಪಂದ್ಯ ಅಹಮದಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜೂನ್ 3ರಂದು ನಡೆಯಿತು. ಈ ವೇಳೆ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿಯುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಟ್ರೋಫಿ ಗೆದ್ದುಕೊಂಡಿತು. ಅಂದು ಬರೀ ಕರ್ನಾಟಕ ಮಾತ್ರವಲ್ಲದೆ, ಇಡೀ ದೇಶವೇ ಆರ್‌ಸಿಬಿ ಗೆಲುವಿನ ಸಂಭ್ರಾಮಾಚರಣೆ ಮಾಡಿತು.

ಬಳಿಕ ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿತ್ತು. ಈ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡರು. ಬಳಿಕ ಹಲವು ಬೆಳವಣಿಗೆಗಳು ಆದ್ವು. ಈ ದುರಂತ ಸಂಬಂಧ ರಾಜ್ಯ ಸರ್ಕಾರ ಆರ್‌ಸಿಬಿ, ಕೆಎಸ್‌ಸಿಎ ವಿರುದ್ಧ ಎಫ್‌ಐಆರ್ ದಾಖಲಿಸಿತು. ಅಷ್ಟೇ ಅಲ್ಲದೆ, ಇದೇ ವೇಳೆ ವಿರಾಟ್ ಕೊಹ್ಲಿ ಮೇಲೂ ದೂರು ದಾಖಲಾಯಿತು.
ಇವೆಲ್ಲ ಬೆಳವಣಿಗೆಗಳು ಆದ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ, ಹೊಸ ಕ್ರೀಡಾಂಗಣ ನಿರ್ಮಾಣ ಮಾಡಲು ನಿರ್ಧರಿಸಿತು. ಇದೀಗ ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿಯೊಂದನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಹಾಗಾದ್ರೆ ಅದರಲ್ಲಿ ಏನಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಂಗಳೂರಿನ ಹೊರವಲಯ ಬೊಮ್ಮಸಂದ್ರದಲ್ಲಿ ಇರುವ ಸೂರ್ಯ ಸಿಟಿಯಲ್ಲಿ 60,000 ಆಸನ ಸಾಮರ್ಥ್ಯದ ಹೊಸ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡಲು ಸಿದ್ಧತೆ ನಡೆಯುತ್ತಿದೆ. ಈ ಹೊಸ ಕ್ರೀಡಾಂಗಣ ದೇಶದಲ್ಲೇ 2ನೇ ಅತಿದೊಡ್ಡ ಸ್ಟೇಡಿಯಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಇದು 1,650 ಕೋಟಿ ರೂಪಾಯು ವೆಚ್ಚದಲ್ಲಿ ನಿರ್ಮಾಣ ಆಗುತ್ತಿದೆ. ಇದರ ಸಂಪೂರ್ಣ ಜವಾಬ್ದಾರಿಯನ್ನು ಕೆಎಚ್‌ಬಿ ಹೊತ್ತುಕೊಂಡಿದೆ. ಈ ನಡುವೆಯೇ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
Bengaluru’s Big Leap into Global Sports!
— DK Shivakumar (@DKShivakumar) August 21, 2025
75 Acres • ₹1,650 Cr • 60,000 Seats
India’s 2nd Largest Stadium: Coming Soon pic.twitter.com/YNMNiSbqxX
ಬೊಮ್ಮಸಂದ್ರದಲ್ಲಿರುವ ಸೂರ್ಯ ಸಿಟಿಯಲ್ಲಿ 75 ಹೆಕ್ಟೇರ್ ಪ್ರದೇಶದಲ್ಲಿ ಕ್ರೀಡಾ ಕೇಂದ್ರವನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಈ ಕ್ರೀಡಾಂಗಣಕ್ಕೆ ಅಂದಾಜು ₹1,650 ಕೋಟಿ ವೆಚ್ಚ ಆಗಲಿದೆ. ಇದು ಒಲಂಪಿಕ್ ಶೈಲಿಯ ಸ್ವಿಮ್ಮಿಂಗ್ ಪೂಲ್, ಜಿಮ್, ಹೊಟೇಲ್ಸ್, ಟ್ರೈನಿಂಗ್ ಸೆಂಟರ್ಸ್, ಇಂಡೋರ್ & ಔಟ್ ಡೋರ್ ಏರಿಯಾ, ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಅತಿಥಿಗೃಹ, ರೆಸ್ಟೋರೆಂಟ್ ಮತ್ತು ಇಂಟರ್‌ನ್ಯಾಷನಲ್ ಸೆಮಿನಾರ್ ಹಾಲ್‌ಗಳನ್ನು ಹೊಂದಿರಲಿದೆ. ಸುಸಜ್ಜಿತ ಕಟ್ಟಡ ಹಾಗೂ ಜಾಗತಿಕ ಗುಣಮಟ್ಟದ ಕ್ರೀಡಾಂಗಣ ಆಗಲಿದೆ ಎಂದು ಬರೆದಿರುವ ಪೋಸ್ಟ್ ಅನ್ನ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಇದರಿಂದ ಇಲ್ಲಿನ ಭೂಮಿ ಬೆಲೆ ಗಗನಕ್ಕೇರುವುದರಲ್ಲಿ ಆಶ್ಚರ್ಯವಿಲ್ಲ. ಈಗಾಗಲೇ ಹೂಡಿಕೆದಾರರು ನಾಮುಂದು ತಾಮುಂದು ಎಂದು ಈ ಭಾಗದಲ್ಲಿ ಭೂಮಿ ಖರೀದಿ ಹಾಗೂ ಹೂಡಿಕೆ ಮಾಡಲು ಮುಂದಾಗುತ್ತಿದ್ದಾರೆ. ಮತ್ತೊಂದೆಡೆ ತುಮಕೂರಿನಲ್ಲಿ 42 ಹೆಕ್ಟೇರ್ ಪ್ರದೇಶದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ವಿಧಾನಸಭೆಯಲ್ಲಿ ಹೇಳಿದ್ಧಾರೆ.












Click it and Unblock the Notifications