ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಲಸಿಕೆ ವಿರೋಧಿಸಿದ್ದರೆ ಏಕೆ ತೆಗೆದುಕೊಳ್ಳುತ್ತಿದ್ದೆವು?: ಡಿಕೆ ಶಿವಕುಮಾರ್

|
Google Oneindia Kannada News

ಬೆಂಗಳೂರು, ಮೇ 21: ಕೊರೊನಾ ಲಸಿಕೆಯನ್ನು ಒಂದೊಮ್ಮೆ ನಾವು ವಿರೋಧಿಸಿದ್ದೇ ಆಗಿದ್ದಲ್ಲಿ ಯಾಕೆ ಲಸಿಕೆ ತೆಗೆದುಕೊಳ್ಳುತ್ತಿದ್ದೆವು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ, ಅದನ್ನು ಬಡ ಆಶಾ ಕಾರ್ಯಕರ್ತೆಯರು ಸೇರಿದಂತೆ ಕೊರೊನಾ ವಾರಿಯರ್ಸ್‌ಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ ಎಂದರು.

'ಯವ ಕಾಂಗ್ರೆಸ್ ಸದಸ್ಯರು ರಾಜ್ಯದ ಉದ್ದಗಲಕ್ಕೂ ಜನರ ಪ್ರಾಣ ಉಳಿಸಲು ಅಗತ್ಯ ಸೇವೆ ಒದಗಿಸುತ್ತಿದ್ದಾರೆ. ವಿದೇಶಗಳಿಗೆ ಲಸಿಕೆ ರಫ್ತು ಸ್ಥಗಿತಗೊಳಿಸಿ, ನಮ್ಮ ದೇಶದ ಜನರಿಗೆ ಮೊದಲು ನೀಡಬೇಕು.

ಬಿಜೆಪಿಯವರು ಎಷ್ಟೇ ಮುಚ್ಚಿಟ್ಟರೂ ನನಗೆ ಮಾಹಿತಿ ಸಿಗುತ್ತದೆ; ಡಿಕೆಶಿಬಿಜೆಪಿಯವರು ಎಷ್ಟೇ ಮುಚ್ಚಿಟ್ಟರೂ ನನಗೆ ಮಾಹಿತಿ ಸಿಗುತ್ತದೆ; ಡಿಕೆಶಿ

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

 ಜನರ ರಕ್ಷಣೆ ಮುಖ್ಯ

ಜನರ ರಕ್ಷಣೆ ಮುಖ್ಯ

ಕೋವಿಡ್ ಪಿಡುಗಿನ ಸಂಕಷ್ಟದ ಸಮಯದಲ್ಲಿ ಜನರ ರಕ್ಷಣೆ ನಮ್ಮ ಕರ್ತವ್ಯ. ಹೀಗಾಗಿ ತಾಲೂಕು ಮಟ್ಟದಿಂದ ರಾಜ್ಯ ಮಟ್ಟದವರೆಗೂ, ಸಹಾಯವಾಣಿ, ಆಂಬ್ಯುಲೆನ್ಸ್ ಸೇವೆ, ಆಕ್ಸಿಜನ್ ಪೂರೈಕೆ, ಮೆಡಿಕಲ್ ಕಿಟ್, ಆಹಾರ ಕಿಟ್ ವಿತರಣೆಯಿಂದ ಉಚಿತ ಲಸಿಕೆ ನೀಡಲು 100 ಕೋಟಿ ರೂ. ಯೋಜನೆವರೆಗೂ ಕಾಂಗ್ರೆಸ್ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

 ಹಳ್ಳಿ ಜನರಿಗೆ ಆನ್‌ಲೈನ್ ಗೊತ್ತಿಲ್ಲ

ಹಳ್ಳಿ ಜನರಿಗೆ ಆನ್‌ಲೈನ್ ಗೊತ್ತಿಲ್ಲ

ಲಸಿಕೆ ಪಡೆಯಲು ಆನ್ ಲೈನ್ ನೋಂದಣಿ ಮಾಡಿಸಬೇಕೆಂದು ಹೇಳಿದ್ದಾರೆ. ಹಳ್ಳಿ ಜನರಿಗೆ ಆನ್ಲೈನ್ ಬಗ್ಗೆ ಏನು ಗೊತ್ತಿರುತ್ತದೆ? ಹೀಗಾಗಿ ನಮ್ಮ ಯೂತ್ ಕಾಂಗ್ರೆಸ್ ಸದಸ್ಯರು ಪಕ್ಷ, ಜಾತಿ, ಧರ್ಮ ಬೇಧವಿಲ್ಲದೆ, ಹಳ್ಳಿಯಿಂದ ನಗರದವರೆಗೆ ಆನ್ಲೈನ್ ನೋಂದಣಿ ಅಭಿಯಾನ ಆರಂಭಿಸುತ್ತಿದ್ದಾರೆ.

ನಮ್ಮ ವಿದ್ಯಾರ್ಥಿ ಘಟಕದವರು ಕಳೆದ ವರ್ಷ ರಕ್ತ ದಾನ ಮಾಡಿದ್ದರು. ಈ ವರ್ಷವೂ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದಾರೆ. ಮಹಿಳಾ ಕಾಂಗ್ರೆಸ್ ಸದಸ್ಯೆಯರು ವಿಶೇಷ ಆರೋಗ್ಯ ಕಿಟ್ ಗಳನ್ನು ಅಗತ್ಯವಿರುವವರಿಗೆ ನೀಡುತ್ತಿದ್ದಾರೆ.

ಅನುಮತಿ ಕೊಡಿ, ನಾವೂ ಸರ್ಕಾರದ ಜತೆ ಕೈ ಜೋಡಿಸುತ್ತೇವೆ; ಡಿಕೆಶಿಅನುಮತಿ ಕೊಡಿ, ನಾವೂ ಸರ್ಕಾರದ ಜತೆ ಕೈ ಜೋಡಿಸುತ್ತೇವೆ; ಡಿಕೆಶಿ

 ಸಹಾಯವಾಣಿ ಆರಂಭ

ಸಹಾಯವಾಣಿ ಆರಂಭ

160 ಕ್ಷೇತ್ರಗಳಲ್ಲಿ ಕೇರ್ ಸೆಂಟರ್, ಸಹಾಯವಾಣಿ ಆರಂಭಿಸಲಾಗಿದ್ದು ಉಳಿದ ಕಡೆಗಳಲ್ಲೂ ಮಾಡಲಾಗುವುದು. ರಾಜ್ಯದಲ್ಲಿ 150 ಆಂಬ್ಯುಲೆನ್ಸ್ ಗಳು ಸೇವೆ ಸಲ್ಲಿಸುತ್ತಿವೆ.
ಸರ್ಕಾರ ಘೋಷಿಸಿರುವ ಪ್ಯಾಕೇಜ್ ಬಡವರಿಗೆ ಸಾಲುವುದಿಲ್ಲ. ಹೀಗಾಗಿ ನಮ್ಮ ನಾಯಕರು ಸ್ಥಳೀಯವಾಗಿ ಆಹಾರ ಕಿಟ್ ಹಂಚುತ್ತಿದ್ದಾರೆ. ಉಚಿತ ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಲಾಗುತ್ತಿದೆ.
ಹೀಗೆ ಕಾಂಗ್ರೆಸ್ ಪಕ್ಷ ಈ ಕಷ್ಟದ ಸಮಯದಲ್ಲಿ ಜನರಿಗೆ ನೆರವಾಗಲು ಹತ್ತಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಸರ್ಕಾರದ ವೈಫಲ್ಯ ಪ್ರಶ್ನಿಸುವುದು ನಮ್ಮ ಕರ್ತವ್ಯ.

 ಸಭೆ ನಡೆಸಲು ವಿರೋಧ

ಸಭೆ ನಡೆಸಲು ವಿರೋಧ

ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಲು ವಿರೋಧ ಪಕ್ಷದ ನಾಯಕರಿಗೆ ಸರ್ಕಾರ ಅವಕಾಶ ನಿರಾಕರಿಸಿದೆ. ಆದರೂ ನಾವು ನಮ್ಮ ಹೋರಾಟ ನಿಲ್ಲಿಸುವುದಿಲ್ಲ.

 ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ

ಸಿದ್ದರಾಮಯ್ಯನವರ ಸರ್ಕಾರದಲ್ಲಿ ಜಾರಿಗೆ ತರಲಾಗಿದ್ದ ಇಂದಿರಾ ಕ್ಯಾಂಟೀನ್ ಕುರಿತು ಬಿಜೆಪಿಯವರು ಮಾತನಾಡಿದ್ದರು. ಈಗ ಅಲ್ಲಿ ಉಚಿತವಾಗಿ ಊಟ ಕೊಡಲು ನಿರ್ಧರಿಸಿದ್ದಾರೆ. ಆದರೆ ಊಟ ಪಡೆಯುವವರು, ಫೋಟೋ, ಗುರುತಿನ ಚೀಟಿ ತನ್ನಿ ಎಂದು ಆದೇಶಿಸಿರುವುದು ನೀಚ ಕೆಲಸ. ನಾನು ಇದನ್ನು ಪ್ರಶ್ನಿಸಿದಾಗ ಈ ನಿರ್ಧಾರ ಹಿಂಪಡೆದರು. ಆದರೆ ಈ ಊಟ ನೀಡಲು ಆಪ್ ನಲ್ಲಿ ಫೋಟೋ ಹಾಕಲು ನಿನ್ನೆ ಆದೇಶ ಹೊರಡಿಸಿದೆ. ಕಾಂಗ್ರೆಸ್ ಇದನ್ನು ಖಂಡಿಸುತ್ತದೆ. ಇದರ ವಿರುದ್ಧ ನಾವು ಹೋರಾಡುತ್ತೇವೆ.

Recommended Video

Congress vs BJP ವೋಟ್ ಹಾಕುವಾಗ ಯೋಚ್ನೆ ಮಾಡಬೇಕಿತ್ತು ! | Oneindia Kannada
 ಲಸಿಕೆಗೆ ವಿರೋಧ ಮಾಡಿಲ್ಲ

ಲಸಿಕೆಗೆ ವಿರೋಧ ಮಾಡಿಲ್ಲ

ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ, ಅದನ್ನು ಬಡ ಆಶಾ ಕಾರ್ಯಕರ್ತೆಯರು ಸೇರಿದಂತೆ ಕೊರೊನಾ ವಾರಿಯರ್ಸ್‌ಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ.

ಆರಂಭದಲ್ಲಿ ಲಸಿಕೆ ಬಗ್ಗೆ ಬಿಜೆಪಿಯವರಿಗೆ ನಂಬಿಕೆ ಇರಲಿಲ್ಲ. ಹೀಗಾಗಿ ಮೊದಲು ಪ್ರಧಾನ ಮಂತ್ರಿಗಳು ತೆಗೆದುಕೊಳ್ಳದೇ, ಅದನ್ನು ಬಡವರ ಮೇಲೆ ಪ್ರಯೋಗಿಸಿದ್ದರು.ನಾವು ಕೊಟ್ಟ ಸಹಕಾರವನ್ನು ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಜತೆಗೆ ಸುಖಾಸುಮ್ಮನೆ ಆರೋಪ ಮಾಡುತ್ತಿದೆ ಎಂದು ಹೇಳಿದರು.

English summary
KPCC President DK Shivakumar Asked that If The Corona Vaccine Was Opposed, Why Would We Take It?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X