ಅರ್ಥವಾಗದ ಡಿಕೆಶಿ ನಡೆ- ತೆರಳಿದ್ದು ಮುಂಬೈಗಲ್ಲ, ದೆಹಲಿಗೆ!
ಬೆಂಗಳೂರು, ಜುಲೈ 08: ಕರ್ನಾಟಕ ರಾಜಕೀಯ ಕ್ಷಣ ಕ್ಷಣವೂ ರೋಚಕ ತಿರುವು ಪಡೆಯುತ್ತಿದ್ದು, ಮುಂಬೈಗೆ ತೆರಳಬೇಕಿದ್ದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಸೋಮವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಕನಕಪುರ ಶಾಸಕ ಡಿಕೆ ಶಿವಕುಮಾರ್ ಅವರು ಮುಂಬೈಗೆ ತೆರಳುತ್ತಾರೆ ಎನ್ನಲಾಗಿತ್ತು. ಈಗಾಗಲೇ ರಾಜೀನಾಮೆ ನೀಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಮುಂಬೈಯ ಸೋಫಿಟೆಲ್ ಹೊಟೇಲ್ ನಲ್ಲೇ ತಂಗಿರುವುದರಿಂದ ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಡಿಕೆಶಿ ಅವರೊಂದಿಗೆ ಮಾತುಕತೆ ನಡೆಸಿ, ಮನವೊಲಿಸುವ ಪ್ರಯತ್ನ ಮಾಡುತ್ತಾರೆ ಎನ್ನಲಾಗಿತ್ತು.

ಆದರೆ ಕೊನೆಯ ಕ್ಷಣದಲ್ಲಿ ನಿರ್ಧಾರ ಬದಲಿಸಿದ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಅಲ್ಲಿ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಆದರೆ ಇದುವರೆಗೆ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಿಲ್ಲ.












Click it and Unblock the Notifications