ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಹುನ್ನಾರಾ: ಡಿಕೆ ಶಿವಕುಮಾರ್
ಬೆಂಗಳೂರು, ಮೇ 22: ಗ್ರಾಮ ಪಂಚಾಯಿತಿ ಚುನಾವಣೆ ನಡೆಸದೆ ಬಿಜೆಪಿ ಹುನ್ನಾರಾ ನಡೆಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವಿಟ್ಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Recommended Video
ಗ್ರಾಮ ಪಂಚಾಯಿತಿ ಚುನಾವಣೆ ಮುಂದಕ್ಕೆ ಹೋದ ಬಗ್ಗೆ ಬಿಜೆಪಿ ವಿರುದ್ಧ, ವಿರೋಧ ಪಕ್ಷದವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕೊರೊನಾ ನಡುವೆ ಗ್ರಾಮ ಪಂಚಾಯಿತಿ ಚುನಾವಣೆ ಮುಂದಕ್ಕೆ ಹಾಕಿ, ಅದರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದಿದ್ದಾರೆ.

ಗ್ರಾಮ ಪಂಚಾಯಿತಿಯಲ್ಲಿ ಸದಸ್ಯರ ಅಧಿಕಾರವಧಿ ಮುಗಿದಿದ್ದು, ಬಿಜೆಪಿ ಸದಸ್ಯರನ್ನ ನಾಮನಿರ್ದೇಶನ ಮಾಡುತ್ತಿದೆ ಎನ್ನುವ ಆರೋಪ ಜೋರಾಗಿದೆ. ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆಯನ್ನು ಕರ್ನಾಟಕ ಕಾಂಗ್ರೆಸ್ ಪಕ್ಷದ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಲಾಗಿದೆ.
ರಾಜ್ಯಸರ್ಕಾರ ಈವರೆಗೂ ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳದೇ, ಬಿಜೆಪಿ ಸದಸ್ಯರನ್ನ ನಾಮನಿರ್ದೇಶನ ಮಾಡುವ ಹುನ್ನಾರ ನಡೆಸಿದೆ.
— Karnataka Congress (@INCKarnataka) May 22, 2020
ಪಂಚಾಯಿತಿಗಳಿಗೆ ಚುನಾವಣೆ ನಡೆಯಬೇಕು ಅಥವಾ ಇರುವ ಸಮಿತಿಗಳನ್ನೇ ಮುಂದುವರೆಸಬೇಕು.
ಇಲ್ಲವಾದರೆ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ರಾಜ್ಯದಾದ್ಯಂತ ಹೋರಾಟ ನಡೆಸಲಾಗುತ್ತದೆ.
- @DKShivakumar pic.twitter.com/4LkTakbH1O
''ರಾಜ್ಯ ಸರ್ಕಾರ ಈವರೆಗೂ ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳದೇ, ಬಿಜೆಪಿ ಸದಸ್ಯರನ್ನ ನಾಮನಿರ್ದೇಶನ ಮಾಡುವ ಹುನ್ನಾರ ನಡೆಸಿದೆ. ಪಂಚಾಯಿತಿಗಳಿಗೆ ಚುನಾವಣೆ ನಡೆಯಬೇಕು ಅಥವಾ ಇರುವ ಸಮಿತಿಗಳನ್ನೇ ಮುಂದುವರೆಸಬೇಕು.'' ಎಂದು ಟ್ವೀಟ್ ಮಾಡಲಾಗಿದೆ.
''ಸಮಿತಿಗಳ ಮುಂದುವರೆಸದೇ ಇಲ್ಲವಾದರೆ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ರಾಜ್ಯದಾದ್ಯಂತ ಹೋರಾಟ ನಡೆಸಲಾಗುತ್ತದೆ.'' ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications