ಪಕ್ಷೇತರರು ನಮ್ಮ ವಿರುದ್ಧ ಹೇಗೆ ಮತ ಹಾಕುತ್ತಾರೋ ನೋಡೋಣ: ಡಿಕೆಶಿ
ಬೆಂಗಳೂರು, ಜುಲೈ 23: ಪಕ್ಷೇತರ ಶಾಸಕರು ಇಲ್ಲೇ ವಿಧಾನಸೌಧದ ಹತ್ತರಿದಲ್ಲೇ ಇದ್ದಾರೆ. ನಾನೂ ಅವರನ್ನು ಭೇಟಿ ಮಾಡಲು ಕಾಯುತ್ತಿದ್ದೇನೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ವಿಧಾನಸೌಧದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಮ್ಮ ಪಕ್ಷೇತರ ಶಾಸಕರು ಇಬ್ಬರನ್ನು ಇಲ್ಲೆ ಇಟ್ಟುಕೊಂಡಿದ್ದಾರೆ. ಅವರು ಬರಲಿ ಎಂದು ನಾನು ಕಾಯುತಿದ್ದೇನೆ, ಅದು ಹೇಗೆ ನಮ್ಮ ವಿರುದ್ಧ ಕೈ ಎತ್ತುತ್ತಾರೋ ನೋಡೋಣ' ಎಂದರು.
ಪಕ್ಷೇತರ ಶಾಸಕರು ವಿಧಾನಸೌಧಕ್ಕೆ ಬರುವಾಗ ಅವರನ್ನು ಡಿ.ಕೆ.ಶಿವಕುಮಾರ್ ಅವರು ಎದುರುಗೊಳ್ಳುವವರಿದ್ದಾರೆ, ಅವರೊಂದಿಗೆ ಮಾತನಾಡುವವರಿದ್ದಾರೆ ಎಂಬುದು ಖಚಿತವಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಧಮಕಿ ಹಾಕುವ ದನಿಯಲ್ಲಿ ಮಾತನಾಡಿರುವುದು ನೋಡಿದರೆ ವಿಧಾನಸೌಧದಲ್ಲಿ ಮತ್ತೆ ಹೈಡ್ರಾಮಾ ನಡೆಯುವ ಸಾಧ್ಯತೆ ಕಂಡು ಬರುತ್ತಿದೆ.

ನಾಗೇಶ್ ಅವರು ಸದನಕ್ಕೆ ಬರುವ ಸಾಧ್ಯತೆ
ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಚ್.ನಾಗೇಶ್ ಅವರು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದು ಬಿಜೆಪಿ ಜೊತೆ ಸೇರಿಕೊಂಡಿದೆ. ಅದರಲ್ಲಿ ಎಚ್.ನಾಗೇಶ್ ಅವರನ್ನು ವಿಶ್ವಾಸಮತ ಸಮಯದಲ್ಲಿ ಸದನಕ್ಕೆ ಕರೆದುಕೊಂಡು ಬರುವ ಸಾಧ್ಯತೆ ಇದೆ.

ಕೆಪಿಜೆಪಿ ಕಾಂಗ್ರೆಸ್‌ನಲ್ಲಿ ವಿಲೀನ
ಕೆಪಿಜೆಪಿಯಿಂದ ಗೆದ್ದಿದ್ದ ಆರ್.ಶಂಕರ್ ಅವರು ತಮ್ಮ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದು, ಅವರ ಹೆಸರಿಗೂ ವ್ಹಿಪ್ ಅನ್ನು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದಾರೆ. ಹಾಗಾಗಿ ಅವರು ಸದನಕ್ಕೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ.

ಬಿಜೆಪಿಯು ನಮ್ಮ ಶಾಸಕರ ದಿಕ್ಕು ತಪ್ಪಿಸುತ್ತಿದ್ದಾರೆ: ಡಿ.ಕೆ.ಶಿ
ಮುಂದುವರೆದು ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ವ್ಹಿಪ್ ಬಗ್ಗೆ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರು ಸದನಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಶಾಸಕರ ಮೇಲೆ ವ್ಹಿಪ್ ಜಾರಿ ಆಗುವುದಿಲ್ಲ ಎನ್ನುತ್ತಿದ್ದಾರೆ ಹಾಗಾದರೆ ಅವರು ಏಕೆ ತಮ್ಮ ಶಾಸಕರಿಗೆ ವ್ಹಿಪ್ ನೀಡಿದರು ಎಂದು ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದರು.

ವ್ಹಿಪ್ ಬಗ್ಗೆ ದೇಶದ ದಿಕ್ಕು ತಪ್ಪಿಸುತ್ತಿದ್ದಾರೆ: ಡಿಕೆ.ಶಿವಕುಮಾರ್
ಬಿಜೆಪಿಯವರು ನಮ್ಮ ಶಾಸಕರ ದಿಕ್ಕು ತಪ್ಪಿಸುತ್ತಿದ್ದಾರೆ ಅಷ್ಟೆ ಅಲ್ಲದೆ ಇಡೀಯ ದೇಶಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications