• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಬಿಎಂಪಿ ಚುನಾವಣೆ ಕುರಿತು ಹೈಕೋರ್ಟ್ ಆದೇಶ ಸ್ವಾಗತಾರ್ಹ: ಶಿವಕುಮಾರ್

|

ಬೆಂಗಳೂರು, ಡಿಸೆಂಬರ್ 04: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಕುರಿತು ಹೈಕೋರ್ಟ್ ನೀಡಿರುವ ಆದೇಶ ಸ್ವಾಗತಾರ್ಹ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮುಂದಿನ ಆರು ವಾರಗಳ ಅವಧಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್ ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶ ನೀಡಿದೆ.

198 ವಾರ್ಡ್ ಗಳಿಗೆ ಬಿಬಿಎಂಪಿ ಚುನಾವಣೆ ಆರು ವಾರದಲ್ಲಿ ಪ್ರಕಟಿಸಿ : ಹೈಕೋರ್ಟ್‌ ತೀರ್ಪು

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅವಧಿಗೆ ಅನುಗುಣವಾಗಿ ಚುನಾವಣೆಗಳು ನಡೆಯಬೇಕು. ಆದರೆ ಬಿಜೆಪಿ ಸರ್ಕಾರ ಇದನ್ನು ಮುಂದಕ್ಕೆ ತಳ್ಳಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡಿತ್ತು. ಆದರೆ, ನ್ಯಾಯಾಲಯ ಅದರ ಹುನ್ನಾರಕ್ಕೆ ಕಡಿವಾಣ ಹಾಕಿ, ಚುರುಕು ಮುಟ್ಟಿಸಿದೆ. ನ್ಯಾಯಾಲಯದ ಈ ತೀರ್ಪನ್ನು ಸ್ವಾಗತಿಸುತ್ತೇವೆ' ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆ ಅಧಿಸೂಚನೆ ಪ್ರಕಟವಾದಾಗ, ಬಿಬಿಎಂಪಿ ಚುನಾವಣೆಯನ್ನೂ ನಡೆಸಬೇಕು ಎಂದು ನಾನು ಒತ್ತಾಯಿಸಿದ್ದೆ. ಸರಕಾರ ಇದಕ್ಕೆ ಕಿವಿಗೊಡಲಿಲ್ಲ.

ಹೀಗಾಗಿ ಬಿಬಿಎಂಪಿ ಚುನಾವಣೆ ನಡೆಸಲು ನಮ್ಮ ಪಕ್ಷ ಮತ್ತೆ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯವಾಗಿತ್ತು. ಇದೀಗ ಕೋರ್ಟ್ ನೀಡಿರುವ ತೀರ್ಪು ಪ್ರಜಾತಂತ್ರ ವ್ಯವಸ್ಥೆಯ ಮೂಲ ಆಶಯವನ್ನು ಎತ್ತಿ ಹಿಡಿದಿದೆ ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

ಈ ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ. ತಾವು ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇಟ್ಟಿರುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿಯವರು ಗ್ರಾಮ ಪಂಚಾಯಿತಿ ಚುನಾವಣೆಯನ್ನೂ ಮುಂದೂಡಲು ಪ್ರಯತ್ನಿಸಿದ್ದರು. ಜನಸಾಮಾನ್ಯರಿಗೆ ಅಧಿಕಾರ ಸಿಗಬೇಕು ಎಂಬುದು ಕಾಂಗ್ರೆಸ್ ಉದ್ದೇಶ.

   ಸ್ತಬ್ದವಾಗತ್ತಾ ಕರ್ನಾಟಕ | Oneindia Kannada

   ಹೀಗಾಗಿ ಸರ್ಕಾರದ ತೀರ್ಮಾನದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದವು. ಆಗಲೂ ನ್ಯಾಯಾಲಯ ನಮ್ಮ ಅಹವಾಲಿಗೆ ಮನ್ನಣೆ ನೀಡಿತ್ತು.

   English summary
   KPCC President DK Shivakumar Welcomes Highcourt Order For BBMP Election.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X