ಬೆಂಗಳೂರು ಅಭಿವೃದ್ಧಿ ಬಗ್ಗೆ ಮಹತ್ವದ ನಿರ್ಣಯಗಳನ್ನು ತೆಗೆದುಕೊಂಡ ಡಿಕೆ ಶಿವಕುಮಾರ್- ಏನಿದೆ ತಿಳಿಯಿರಿ
ಬೆಂಗಳೂರು, ಜೂನ್ 05: ಶಾಸಕರು, ಸಂಸದರು, ಪರಿಷತ್ ಸದಸ್ಯರೊಂದಿಗೆ ಬೆಂಗಳೂರು ಸಮಗ್ರ ಅಭಿವೃದ್ಧಿ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
'ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರಿನ ಎಲ್ಲ ಶಾಸಕರು, ಸಂಸದರು, ಎಂಎಲ್‌ಸಿ ಪರಿಷತ್ ಸದಸ್ಯರೊಂದಿಗೆ ಇಂದು ಬೆಂಗಳೂರು ಸಮಗ್ರ ಅಭಿವೃದ್ಧಿ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಿ, ಅವರ ಸಲಹೆ, ಅಭಿಪ್ರಾಯವನ್ನು ಸಂಗ್ರಹಿಸಿದೆ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ' ಎಂದು ಡಿಕೆಶಿ ತಿಳಿಸಿದ್ದಾರೆ.

'ಬೆಂಗಳೂರಿನ ನಿವಾಸಿಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ, ತ್ಯಾಜ್ಯದ ಸಮಸ್ಯೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಂಡರ್ ಪಾಸ್ ರಸ್ತೆಗಳಲ್ಲಿ ಕ್ಯಾಮೆರಾ ಅಳವಡಿಸುವ ಮೂಲಕ ಮಳೆ ಸುರಿಯವ ವೇಳೆ ಸಂಭವಿಸುವ ಅನಾಹುತಗಳನ್ನು ತಡೆಯಲು ಚಿಂತಿಸಲಾಗಿದೆ' ಎಂದು ಶಿವಕುಮಾರ್ ಹೇಳಿದ್ದಾರೆ.
'ಬೆಂಗಳೂರಿನ ಪ್ರತಿಯೊಂದು ವಾರ್ಡ್‌ಗೂ ಪ್ರತ್ಯೇಕ ಫೈಲ್ ಇರಬೇಕು. ಸರ್ಕಾರದ ಯಾವುದೇ ಕಾಮಗಾರಿ ನಡೆದರೂ ಕೆಲಸ ಆರಂಭಿಸುವ ಮುನ್ನ, ಕಾಮಗಾರಿ ಪೂರ್ಣಗೊಂಡಿರುವ ಫೋಟೋ ಇರಬೇಕು. ಪ್ರತಿದಿನ ನಡೆಯುವ ಕಾಮಗಾರಿಗಳ ಫೋಟೋ ಇರಬೇಕು. ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕಾಂಗ್ರೆಸ್ ಸರ್ಕಾರ ಬದ್ಧವಿದೆ' ಎಂದು ತಿಳಿಸಿದ್ದಾರೆ.
ಇದೇ ವೇಳೆ, ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದೆ. ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಈ ಕೆಳಕಂಡಂತಿವೆ.
* ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ ಗಳನ್ನು ಸೇವೆಯಿಂದ ಅಮಾನತು ಮಾಡುವಂತೆ ಸೂಚಿಸಿದೆ.
* ಈಜಿಪುರ ಮೇಲ್ಸೇತುವೆ ಯೋಜನೆಯನ್ನು ತಕ್ಷಣ ಪೂರ್ಣಗೊಳಿಸಬೇಕು. ಈ ಬಗ್ಗೆ ಅಗತ್ಯವಿರುವ ಆಡಳಿತಾತ್ಮಕ ನಿರ್ಣಯಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಆದೇಶಿಸಿದೆ.

* ಬೆಂಗಳೂರಿನ ಮುಂದಿನ 20 ವರ್ಷಗಳ ಅಗತ್ಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಿದೆ.
* ಬೆಂಗಳೂರಿನ ಕೆಲವೆಡೆ ಹೋರ್ಡಿಂಗ್‌ಗಳನ್ನು ಅಳವಡಿಸಲು ಅನುಮತಿ ನೀಡಿದ ಕುರಿತು ಚರ್ಚಿಸಲಾಯಿತು.












Click it and Unblock the Notifications