ಪಾದರಾಯನಪುರ ಗಲಾಟೆ: ಅಲ್ಪಸಂಖ್ಯಾತ ಮುಖಂಡರ ಜೊತೆ ಡಿಕೆ ಶಿವಕುಮಾರ್ ಸಭೆ

ಬೆಂಗಳೂರು, ಏಪ್ರಿಲ್ 20: ನಿನ್ನೆ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಭೆ ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತ ಮುಖಂಡರ ಜೊತೆಗೆ ಡಿಕೆ ಶಿವಕುಮಾರ್ ಘಟನೆಯ ಬಗ್ಗೆ ಚರ್ಚೆ ಮಾಡಲಿದ್ದಾರೆ.

ಇಂದು ತಮ್ಮ ಸದಾಶಿವನಗರದ ನಿವಾಸದಲ್ಲಿ ಬೆಳಗ್ಗೆ 11:30ಕ್ಕೆ ಡಿಕೆ ಶಿವಕುಮಾರ್ ಸಭೆ ನಡೆಸಲಿದ್ದಾರೆ. ಪಕ್ಷದ ಅಲ್ಪಸಂಖ್ಯಾತ ಘಟಕದ ಮುಖಂಡರು, ನಾಯಕರುಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ಎನ್ ಎ ಹ್ಯಾರಿಸ್, ಜಮಿರ್ ಅಹಮದ್ ಖಾನ್, ಸಿಎಂ ಇಬ್ರಾಹಿಂ ಸೇರಿದಂತೆ ಹಲವಾರು ಅಲ್ಪಸಂಖ್ಯಾತ ಮುಖಂಡರು, ನಾಯಕರು ಜೊತೆಗೆ ಡಿಕೆ ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ.

DK Shivakumar Will Be A Meeting With Muslim Leaders About Padarayanapura Incident

ನಿನ್ನೆ ನಡೆದದ್ದು ಏನು?

ಪಾದರಾಯನಪುದಲ್ಲಿ ಕ್ವಾರೆಂಟೈನ್ ಗೆ ಒಳಪಡಿಸಲು ಬಿಬಿಎಂಪಿ ಅಧಿಕಾರಿಗಳು ಮತ್ತು ವೈದ್ಯಕೀಯ ಸಿಬ್ಬಂದಿ ತೆರಳಿದ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕೆರಳಿದ ಕೆಲವರು ಸೀಲ್ ಡೌನ್ ಮಾಡಿರುವ ಏರಿಯಾದಲ್ಲಿ ಅಳವಡಿಸಿದ ಬ್ಯಾರಿಕೇಡ್ ಹಾಗೂ ತಗಡುಗಳನ್ನು ಕಿತ್ತೆಸೆದು ಗಲಾಟೆ ಮಾಡಿದ್ದಾರೆ. ಕೊರೊನಾ ವೈರಸ್ ಸೋಂಕಿತರ ದ್ವಿತೀಯ ಸಂಪರ್ಕದಲ್ಲಿದ್ದ 58ಕ್ಕೂ ಹೆಚ್ಚು ಜನರನ್ನು ಗೃಹ ದಿಗ್ಬಂಧನದಲ್ಲಿ ಇರಿಸಲಾಗಿತ್ತು. 58 ಜನರ ಪೈಕಿ 20 ಜನರನ್ನು ಬೇರೆಡೆ ಶಿಫ್ಟ್ ಮಾಡಲಾಗಿದ್ದು, ಉಳಿದ 38 ಜನರನ್ನು ಸ್ಥಳಾಂತರಿಸಲು ಬಿಬಿಎಂಪಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಕಿಡಿಗೇಡಿಗಳು ದಾಂದಲೆ ಮಾಡಿದ್ದು, ಇಂದು ಇವರನ್ನು ಜೆಜೆ ನಗರ ಪೊಲೀಸರು ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+