ʼಬೆಂಗಳೂರಲ್ಲಿ ಎಲ್ಲಾ ಮೂಲಸೌಕರ್ಯ ಇದೆ: ಸರಿಯಾಗಿ ಟ್ಯಾಕ್ಸ್‌ ಕಟ್ಟಿʼ ಡಿ.ಕೆ ಶಿವಕುಮಾರ್‌ ವಾರ್ನಿಂಗ್!

Property Tax Warning: ಬೆಂಗಳೂರಿನ ಆಸ್ತಿದಾರರಿಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್‌ ಅವರು ಬಿಗ್‌ ಶಾಕ್‌ ಹಾಗೂ ವಾರ್ನಿಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಪಾವತಿ ಮಾಡದೆ ಬರೋಬ್ಬರಿ 3 ಲಕ್ಷಕ್ಕೂ ಹೆಚ್ಚು ಆಸ್ತಿದಾರರು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಹೀಗಾಗಿ, ಈ ಆಸ್ತಿದಾರರಿಗೆ ಶಾಕ್‌ ಕೊಡಲು ರಾಜ್ಯ ಸರ್ಕಾರ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಆದರೆ, ಈ ಆಸ್ತಿದಾರರ ಮೇಲೆ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳಲಿದೆ ಎನ್ನುವ ಆತಂಕ ಇದೀಗ ಎದುರಾಗಿದೆ. ಬೆಂಗಳೂರಿನಲ್ಲಿ ಆಸ್ತಿದಾರರ ಮೇಲೆ ಕಠಿಣ ಕ್ರಮಗಳನ್ನು ಬಿಬಿಎಂಪಿ ಈಗಾಗಲೇ ಅನುಸರಿಸುತ್ತಿದೆ. ಈ ನಡುವೆ ಡಿ.ಕೆ ಶಿವಕುಮಾರ್‌ ಅವರು ವಾರ್ನಿಂಗ್ ಕೊಟ್ಟಿದ್ದಾರೆ.

ನಗರದ ಆಸ್ತಿದಾರರಿಗೆ ಡಿ.ಕೆ ಶಿವಕುಮಾರ್‌ ಅವರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಳ್ಳೆಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಆದರೆ ಕೆಲವರು ಆಸ್ತಿ ತೆರಿಗೆಯನ್ನು ಪಾವತಿ ಮಾಡಿಲ್ಲ. ಈ ರೀತಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೂಡಲೇ ಆಸ್ತಿ ತೆರಿಗೆ ಪಾವತಿ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ.

DK Shivakumars Stern Warning to Bengaluru Property Owners

ಬೆಂಗಳೂರು ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗಬೇಕು. ನೀರು, ರಸ್ತೆ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ನೀಡಿದ್ದೇವೆ. ಆದರೆ ಅನೇಕರು ಇದಕ್ಕೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ. ಇಂತಹ ಅಕ್ರಮಗಳನ್ನು 'ಎಐ' ತಂತ್ರಜ್ಞಾನದ ಮೂಲಕ ಪತ್ತೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಡಿ.ಕೆ ಶಿವಕುಮಾರ್‌ ಅವರು ಪುನರ್‌ಚ್ಚರಿಸಿದ್ದಾರೆ.

ಹೌದು ಬೆಂಗಳೂರಿನಲ್ಲಿ ಮೂಲಸೌಕರ್ಯಗಳ ಕೊರತೆಯು ಈ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಬೆಂಗಳೂರಿನ ರಸ್ತೆಗುಂಡಿಗಳ ಸಂಖ್ಯೆ ಹೆಚ್ಚಳವಾಗಿದೆ. ಟ್ರಾಫಿಕ್‌ ಜಾಮ್‌ ಸಮಸ್ಯೆ ಮಿತಿಮೀರಿದೆ. ಅಲ್ಲದೇ ಸಾರಿಗೆ ಸೇವೆಗಳ ಬೆಲೆ ಏರಿಕೆ ಹಾಗೂ ವಿವಿಧ ಸೇವೆಗಳ ಮೇಲೆ ಟ್ಯಾಕ್ಸ್‌ ಹಾಕಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ರೀತಿ ಇರುವಾಗಲೇ ನಾವು ಒಳ್ಳೆಯ ಸೇವೆ ಕೊಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಹೇಳಿದ್ದಾರೆ.

Take a Poll

ಆಸ್ತಿ ತೆರಿಗೆ ಸಂಗ್ರಹ ಹೆಚ್ಚಳ: ಇನ್ನು ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಸಂಗ್ರಹ ಪ್ರಮಾಣವು ಭರ್ಜರಿ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಬಿಜೆಪಿಯ ಅವಧಿಯಲ್ಲಿ ಕೇವಲ 4,000 ಸಾವಿರ ಕೋಟಿ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗುತ್ತಿತ್ತು. ಆದರೆ, ಇದೀಗ ಕಾಂಗ್ರೆಸ್‌ ಅವಧಿಯಲ್ಲಿ ಈ ಪ್ರಮಾಣವನ್ನು 7,000 ಸಾವಿರ ಕೋಟಿಗೆ ಹೆಚ್ಚಳವಾಗಿದೆ ಎಂದು ಡಿ.ಕೆ ಶಿವಕುಮಾರ್‌ ಅವರು ಹೇಳಿದ್ದಾರೆ. ಆದರೆ ಈ ಬಾರಿಯೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಆಸ್ತಿ ತೆರಿಗೆ ಸಂಗ್ರಹ ಗುರಿಯನ್ನು ಮುಟ್ಟುವುದಕ್ಕೆ ಸಾಧ್ಯವಾಗಿಲ್ಲ.

ಬೆಂಗಳೂರಿನಲ್ಲಿ ಈ ಬಾರಿ ಅಂದರೆ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆಸ್ತಿ ತೆರಿಗೆ ಸಂಗ್ರಹ ಗುರಿಯನ್ನು 5,200 ಕೋಟಿ ರೂಪಾಯಿ ಮಾಡಲಾಗಿತ್ತು. ಅದರಲ್ಲಿ ಬಿಬಿಎಂಪಿಯು (ಮಾರ್ಚ್‌ 30ರ ವರೆಗೆ) ಬರೋಬ್ಬರಿ 4,800 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹ ಮಾಡುವಲ್ಲಿ ಯಶಸ್ವಿಯಾಗಿದೆ. ಆದರೆ ಒಟ್ಟಾರೆ ಎಷ್ಟು ಸಂಗ್ರಹವಾಗಿದೆ ಎನ್ನುವುದನ್ನು ಬಿಬಿಎಂಪಿಯು ಇನ್ನಷ್ಟೇ ಹಂಚಿಕೊಳ್ಳಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+