ನೀರಿನ ಮಹತ್ವ ತಿಳಿಯಲು ಈ ಜಿಲ್ಲೆಗೆ ಹೋಗಿ ಎಂದ ಡಿಕೆಶಿ!
ನೀರಿನ ಮಹತ್ವ ಹಾಗೂ ನೀರಿನ ಸಂರಕ್ಷಣೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮತ್ತೊಮ್ಮೆ ಮಾತನಾಡಿದ್ದಾರೆ. ಈ ಬಾರಿ ಅವರು ನೀರಿನ ಮಹತ್ವದ ಬಗ್ಗೆ ಮಾತನಾಡುವಾಗ ನೀರಿನ ಸಮಸ್ಯೆಯ ವಿವರಣೆ ನೀಡಲು ಕರ್ನಾಟಕದ ಜನರಿಗೆ ಕರ್ನಾಟಕದ ಈ ಜಿಲ್ಲೆಯನ್ನು ಉದಾಹರಣೆಗೆ ಉಲ್ಲೇಖಿಸಿದ್ದಾರೆ.
ನಿಮಗೆ ನೀರಿನ ಮಹತ್ವದ ಬಗ್ಗೆ ತಿಳಿಯಬೇಕಾದರೆ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಒಮ್ಮೆ ಹೋಗಿ ನೋಡಿ. ಆ ಭಾಗದಲ್ಲಿ ಜನರು ನೀರಿಗಾಗಿ ಸಂಕಷ್ಟ ಅನುಭವಿಸುತ್ತಿದ್ದಾರೆ. 2013ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾವು ಆದ್ಯತೆಯ ಮೇಲೆ ಕೆ.ಸಿ ವ್ಯಾಲಿ ಯೋಜನೆಯನ್ನು ಪರಿಚಯಿಸಿದ್ದೇವೆ. ಈ ಯೋಜನೆಯಿಂದ ನೀರಿನ ಸಮಸ್ಯೆ ತಕ್ಕಮಟ್ಟಿಗೆ ಕಡಿಮೆಯಾಗಿದೆ. ಕೆ.ಸಿ ವ್ಯಾಲಿ ಯೋಜನೆಯ ಮೂಲಕ ಕೊಳಚೆ ನೀರನ್ನು ಶುದ್ಧೀಕರಣ ಮಾಡಿ, ಕೋಲಾರದ ಕೆರೆಗಳನ್ನು ತುಂಬಿಸಲಾಗುತ್ತಿದೆ. ಇದೀಗ ಎತ್ತಿನಹೊಳೆಯಿಂದ ಕುಡಿಯುವ ನೀರನ್ನು ಪೂರೈಸಲಾಗುವುದು ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನೀರಿನ ಮಹತ್ವದ ಬಗ್ಗೆ ಮಾತನಾಡಿರುವ ಡಿ.ಕೆ ಶಿವಕುಮಾರ್ ಅವರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಬೆಳೆದು ರೈತರು ಜೀವನ ನಡೆಸುತ್ತಿದ್ದಾರೆ. ಇನ್ನು ಮಲೆನಾಡು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿಲ್ಲ. ಹೀಗಾಗಿ, ಅರ್ಕಾವತಿ ಬಲದಂಡೆ ನಾಲೆ ಏತ ನೀರಾವರಿ ಯೋಜನೆಯನ್ನು ಶೀಘ್ರ ಪುನಶ್ಚೇತನ ಮಾಡಲು ಮುಂದಾಗಿದ್ದೇವೆ. ಈ ಯೋಜನೆ ನನ್ನ ಬಹುದಿನಗಳ ಕನಸಾಗಿತ್ತು. ಈ ಯೋಜನೆಯನ್ನು ಜಾರಿ ಮಾಡುವುದರಿಂದ ಒಂದು ಸಾವಿರಕ್ಕೂ ಹೆಚ್ಚು ಎಕರೆ ಭೂ ಭಾಗಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ ಎಂದು ಹೇಳಿದ್ದಾರೆ.
ದೇವರ ಅನುಗ್ರಹದಿಂದ ನಾನೇ ಈಗ ನೀರಾವರಿ ಸಚಿವನಾಗಿದ್ದೇನೆ. ಈ ರೀತಿಯ ನೂರು ಯೋಜನೆಗಳನ್ನು ಜಾರಿ ಮಾಡುವ ಶಕ್ತಿಯನ್ನು ದೇವರು ನೀಡಿದ್ದಾನೆ. ಇನ್ನು ಶಿಂಷಾ ನೀರನ್ನು ಸಾತನೂರು ಮತ್ತು ಕೆಂಪಮ್ಮನ ದೊಡ್ಡಿವರೆಗೂ ಪೂರೈಸಲಾಗುತ್ತಿದೆ. ದೊಡ್ಡ ಆಲಹಳ್ಳಿ ಕೆರೆಗೂ ಈ ಮೂಲಕ ನೀರನ್ನು ತುಂಬಿಸಲಾಗುತ್ತಿದೆ. ಅಲ್ಲದೇ ಕೈಲಾಂಚ, ಮಾಗಡಿ, ಮಾತೂರು ಕೆರೆ, ಚನ್ನಪಟ್ಟಣ ಕೆರೆಗಳಿಗೆ ನೀರು ಹರಿಸಲಾಗಿದೆ. ಇಷ್ಟೆಲ್ಲ ಮಾಡಿದರೂ, ನಮ್ಮ ಕೆಲಸದ ಮಹತ್ವ ನಮ್ಮ ಜನರಿಗೇ ಗೊತ್ತಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಈ ಯೋಜನೆಯನ್ನು ಜಾರಿ ಮಾಡುವ ಸಂದರ್ಭದಲ್ಲಿ ಸಾವಿರಾರು ಜನರು ತಮ್ಮ ಜಮೀನನ್ನು ಅತ್ಯಂತ ಕಡಿಮೆ ಬೆಲೆಗೆ ನೀಡಿದ್ದಾರೆ. ಕಡಿಮೆ ದುಡ್ಡಿಗೆ ಭೂಮಿ ನೀಡಿದ್ದಾರೆ. ಇನ್ನೂ ಕೆಲವರು ಕೇವಲ ಮೂರರಿಂದ ನಾಲ್ಕು ಸಾವಿರಕ್ಕೆ ತಮ್ಮ ಜಮೀನುಗಳನ್ನು ನೀಡಿದ್ದಾರೆ. ಈ ರೀತಿ ಕಡಿಮೆ ಮೊತ್ತಕ್ಕೆ ರೈತರು ಜಮೀನು ಕಳೆದುಕೊಂಡ ವಿಚಾರ ನೆನಪಿಸಿಕೊಂಡರೆ ನನಗೆ ಈಗಲೂ ಬೇಸರವಾಗುತ್ತದೆ. ಹಣಕಾಸಿನ ಸಮಸ್ಯೆ ಇದ್ದ ಸಂದರ್ಭದಲ್ಲೂ ಅಂದಿನ ಮುಖ್ಯಮಂತ್ರಿಯಾಗಿದ್ದ ಎಸ್. ಎಂ. ಕೃಷ್ಣ ಅವರ ಸಹಕಾರ (ಕೈಯಿಂದ) ಅಂದಾಜು 300 ರೈತರಿಗೆ ಎಕರೆಗೆ ಹೆಚ್ಚುವರಿಯಾಗಿ 7 ಕೋಟಿ ರೂಪಾಯಿ ಪರಿಹಾರ ನೀಡಲಾಗಿತ್ತು ಎಂದು ಡಿ.ಕೆ ಶಿವಕುಮಾರ್ ಅವರು ಸ್ಮರಿಸಿದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications