ಡಿ.ಕೆ. ಸುರೇಶ್ ಚನ್ನಪಟ್ಟಣದಲ್ಲಿ ಗೆದ್ದು ಸೇಡು ತೀರಿಸಿಕೊಳ್ಳುತ್ತಾರಾ?
ಡಿ.ಕೆ. ಸುರೇಶ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸೋಲು ಕಂಡ ನಂತರ ಈ ಸಮಯದಲ್ಲಿ ದೊಡ್ಡ ಚರ್ಚೆಯು ಶುರುವಾಗಿದೆ. ಯಾಕಂದ್ರೆ ಡಿ.ಕೆ. ಸುರೇಶ್ ಅವರ ಅಣ್ಣ ಡಿ.ಕೆ. ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಕೂಡ ಆಗಿದ್ದಾರೆ. ಇಷ್ಟೆಲ್ಲಾ ಇದ್ದರೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಸೋಲು ಕಂಡಿದ್ದಾರೆ. ಇದು ದೊಡ್ಡ ಆಘಾತ ನೀಡಿರುವ ಬೆನ್ನಲ್ಲೇ ಚನ್ನಪಟ್ಟಣ ವಿಧಾನಸಭೆ ಚುನಾವಣೆಗೆ ಡಿ.ಕೆ. ಸುರೇಶ್ ಎಂಟ್ರಿ ಆಗಲಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ.
ಹೌದು, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಶಾಸಕ ಆಗಿದ್ದರು. ಆದ್ರೆ ಈಗ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಬಿಟ್ಟು ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದ ಲೋಕಸಭಾ ಸದಸ್ಯರಾಗಿ ಆಯ್ಕೆ ಆಗಿದ್ದಾರೆ. ಹೀಗಿದ್ದಾಗ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಬಿಟ್ಟು ಕೊಡಬೇಕಾಗಿದೆ. ಅತ್ತ ಜೆಡಿಎಸ್ & ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಥವಾ ಸಿ.ಪಿ. ಯೋಗೇಶ್ವರ್ ಸ್ಪರ್ಧೆ ಖಚಿತವಾಗಿದೆ. ಮತ್ತೊಂದು ಕಡೆ ಇತ್ತ ಡಿ.ಕೆ. ಸುರೇಶ್ ಇಲ್ಲಿಂದಲೇ ಸ್ಪರ್ಧಿಸಿ ಸೇಡು ತೀರಿಸಿಕೊಳ್ಳುತ್ತಾರಾ? ಎಂಬ ಪ್ರಶ್ನೆ ಮೂಡಿದೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಸಂಚಲನ!
ಇದೇ ಕಾರಣಕ್ಕೆ ಇನ್ನು 6 ತಿಂಗಳ ಒಳಗೆ ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಈ ಕ್ಷೇತ್ರದಲ್ಲಿ ಜಿದ್ದಾಜಿದ್ದಿ ನಡೆಯುತ್ತಿದೆ. ಮತ್ತೊಂದು ಕಡೆ ಬೆಂಗಳೂರು ಗ್ರಾಮಾಂತರದಲ್ಲಿ ಸೋತ ಸೇಡನ್ನ ಚನ್ನಪಟ್ಟಣ ವಿಧಾನಸಭೆ ಚುನಾವಣೆಯಲ್ಲಿ ತೀರಿಸಿಕೊಳ್ಳಲು ಡಿ.ಕೆ. ಸುರೇಶ್ ಸಿದ್ಧರಾಗಿದ್ದಾರೆ ಎಂಬ ಮಾತು ಹರಿದಾಡುತ್ತಿದೆ. ಆದ್ರೆ ಈ ಬಗ್ಗೆ ಈವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಹೀಗಾಗಿ ಕುತೂಹಲ ಕೂಡ ಡಬಲ್ ಆಗಿದೆ. ಹೀಗೆ, ಚನ್ನಪಟ್ಟಣ ಕ್ಷೇತ್ರ ಮತ್ತೊಮ್ಮೆ ಕುತೂಹಲದ ಕೇಂದ್ರ ಬಿಂದುವಾಗಿದೆ.
ಸೋತ ಜಾಗದಲ್ಲಿಯೇ ಗೆಲುವು?
ಬೆಂಗಳೂರು, ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರಿಸಿಲ್ಲ. ಈ ಪೈಕಿ ಬೆಂಗಳೂರು ನಗರದ ಮೇಲೆ ಡಿ.ಕೆ. ಶಿವಕುಮಾರ್ ಅವರು ಬಿಗಿ ಹಿಡಿತ ಹೊಂದಿದ್ದಾರೆ ಎಂಬ ಮಾತು ಇವೆ. ಇಷ್ಟೆಲ್ಲಾ ಹಿಡಿತ ಹೊಂದಿದ್ದರೂ, ಬೆಂಗಳೂರು ಭಾಗದಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನ ಕೂಡ ಗೆದ್ದಿಲ್ಲ. ಹೀಗೆ ತಮ್ಮ ಸಹೋದರ ಡಿ.ಕೆ. ಸುರೇಶ್ ಸೋತಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಭಾರಿ ದೊಡ್ಡ ಹಿನ್ನಡೆ ತಂದಿದೆ. ಆದರೆ ಸೋತ ಜಾಗದಲ್ಲಿಯೇ ಗೆದ್ದು ಬೀಗಲು ಡಿ.ಕೆ. ಸುರೇಶ್ ಸಿದ್ಧವಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಕುಮಾರಸ್ವಾಮಿಗೆ ಕೃಷಿ ಸಚಿವ ಸ್ಥಾನ?
ಬಿಜೆಪಿ & ಎನ್‌ಡಿಎ ಒಕ್ಕೂಟದಲ್ಲಿ ಆಯ್ಕೆ ಆಗಿ ಬಂದಿರುವ ಸಂಸದರ ಹಿನ್ನೆಲೆ ಗಮನಿಸಿದರೆ ಇದೀಗ ಡಾ. ಸಿ.ಎನ್. ಮಂಜುನಾಥ್ ಆರೋಗ್ಯ ಸಚಿವರಾಗಲು ಸೂಕ್ತ ಅಂತಾ ಹೇಳಬಹುದು. ಯಾಕಂದ್ರೆ ಮೋದಿ ಸಂಪುಟದಲ್ಲಿ ಆರೋಗ್ಯ ಸಚಿವನ ಸ್ಥಾನ ನಿರ್ವಹಿಸಲು ವೈದ್ಯರ ಅಗತ್ಯತೆ ಇದೆ. ಈಗ ಈ ಅನಿವಾರ್ಯ ಸ್ಥಿತಿಯಲ್ಲಿ ಕನ್ನಡ ನಾಡಿನ ಸಂಸದ ಡಾ. ಸಿ.ಎನ್. ಮಂಜುನಾಥ್ ಆರೋಗ್ಯ ಸಚಿವರಾಗಿ ಕೆಲಸ ಮಾಡಲು ಎಲ್ಲಾ ರೀತಿಯಲ್ಲೂ ಸೂಕ್ತ ಎನ್ನಬಹುದು. ಹೀಗೆ ಪ್ರಧಾನಿ ಮೋದಿ ಅವರ ಮೊದಲ ಆಯ್ಕೆ ಕೂಡ ಡಾ. ಸಿ.ಎನ್. ಮಂಜುನಾಥ್ ಇರಬಹುದು ಎಂಬ ಅಭಿಪ್ರಾಯ ಕೇಳಿಬಂದಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications