ಪದ್ಮನಾಭನಗರದಲ್ಲಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ ಖಚಿತ: ಆರ್ ಅಶೋಕ್ ವಿರುದ್ಧ ಡಿಕೆಶಿ ರಣತಂತ್ರ
ಕನಕಪುರದಲ್ಲಿ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಕಣಕ್ಕಿಳಿಸಿತ್ತು. ತಮ್ಮ ವಿರುದ್ಧದ ರಾಜಕೀಯ ತಂತ್ರಕ್ಕೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಕೂಡ ನಿರ್ಧಾರ ಮಾಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಆರ್ ಅಶೋಕ್ ವಿರುದ್ಧ ಡಿಕೆ ಸುರೇಶ್ ನಾಮಪತ್ರ ಸಲ್ಲಿಸುತ್ತಾರೆ ಎಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಈ ಮೂಲಕ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮತ್ತಷ್ಟು ರಂಗೇರಿದೆ . ಕುತೂಹಲಕಾರಿ ವಿಚಾರ ಎಂದರೆ, ಕಾಂಗ್ರೆಸ್ ಈಗಾಲೇ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ರಘುನಾಥ್ ನಾಯ್ಡು ಅವರಿಗೆ ಟಿಕೆಟ್ ಘೋಷಣೆ ನೀಡಿದೆ, ಹೊಸ ಬೆಳವಣಿಗೆಯಲ್ಲಿ ಡಿಕೆ ಸುರೇಶ್ ಕೂಡ ಉಮೇದುವಾರಿಕೆ ಸಲ್ಲಿಸುವುದರಿಂದ ಕೊನೆಗೆ ಕಣದಲ್ಲಿ ಯಾರು ಉಳಿಯುತ್ತಾರೆ ಎನ್ನುವುದು ಕುತೂಹಲಕಾರಿಯಾಗಿದೆ.

ಡಿಕೆ ಸುರೇಶ್ ನಾಮಪತ್ರ ಸಲ್ಲಿಸುವ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, "ಬಿಜೆಪಿ, ಜೆಡಿಎಸ್‌ನವರು ಚೆಸ್ ಆಡುತ್ತಿದ್ದಾರೆ ನಾವೂ ಆಡುತ್ತಿದ್ದೇವೆ" ಎಂದು ಹೇಳಿದರು. ಕನಕಪುರದಲ್ಲಿ ತಮ್ಮ ವಿರುದ್ಧವೇ ತೊಡೆ ತಟ್ಟಲು ಬಂದಿರುವ ಆರ್ ಅಶೋಕ ಅವರನ್ನು ಮಣಿಸಲು ಡಿಕೆ ಶಿವಕುಮಾರ್ ಈ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ. ಡಿಕೆ ಸುರೇಶ್ ಪದ್ಮನಾಭನಗರ ಮತಕ್ಷೇತ್ರದಿಂದ ಸ್ಪರ್ಧಿಸುವುದರಿಂದ ಆರ್ ಅಶೋಕ ತಮ್ಮ ತವರು ಕ್ಷೇತ್ರದ ಕಡೆ ಹೆಚ್ಚಿನ ಗಮನ ನೀಡುವಂತೆ ಮಾಡಲು ರಣತಂತ್ರ ರೂಪಿಸಿದ್ದಾರೆ.
ಅಂತಿಮವಾಗಿ ಕಣದಲ್ಲಿ ಉಳಿಯುವುದು ಯಾರು?
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಂದು ಪದ್ಮನಾಭನಗರ ಕ್ಷೇತ್ರದಿಂದ ಸಂಸದ ಡಿಕೆ ಸುರೇಶ್ ಮತ್ತು ರಘುನಾಥ ನಾಯ್ಡು ಕೂಡ ನಾಮಪತ್ರ ಸಲ್ಲಿಸುತ್ತಾರೆ. ನಾನೂ ಕೂಡ ನಾಮಪತ್ರ ಸಲ್ಲಿಸುವ ವೇಳೆ ಜೊತೆಯಲ್ಲಿ ಇರುತ್ತೇನೆ, ರಘುನಾಥ ನಾಯ್ಡು ಇಲ್ಲಿ ಗೆಲ್ಲುವ ವಾತಾವರಣ ಇದೆ. ಇಬ್ಬರು ನಾಮಪತ್ರ ಸಲ್ಲಿಸಿದ್ದರೂ ಅಂತಿಮವಾಗಿ ಯಾರು ಕಣದಲ್ಲಿ ಉಳಿಯುತ್ತಾರೆ ಎನ್ನುವುದು ಹೈಕಮಾಂಡ್ ನಿರ್ಧಾರದ ಬಳಿಕ ತಿಳಿಯಲಿದೆ.
ಡಿಕೆ ಶಿವಕುಮಾರ್ ಕ್ಷೇತ್ರದಲ್ಲಿ ಚುನಾವಣೆಯ ಜವಾಬ್ದಾರಿಯನ್ನು ಡಿಕೆ ಸುರೇಶ್ ನೋಡಿಕೊಳ್ಳುತ್ತಿದ್ದರು, ಕನಕಪುರ ಸಹೋದರರ ಭದ್ರಕೋಟೆಯಾಗಿರುವುದರಿಂದ ಇಬ್ಬರೂ ಸೋಲಿಲ್ಲದ ಸರದಾರರಾಗಿದ್ದಾರೆ. ಡಿಕೆಶಿ ಹೆಚ್ಚಿನ ಪ್ರಚಾರಕ್ಕೆ ಹೋಗದಿದ್ದರೂ ಸುಲಭವಾಗಿ ಗೆಲುವು ಸಾಧಿಸುತ್ತಿದ್ದರು. ಆದರೆ, ಈ ಬಾರಿ ಕನಕಪುರದಲ್ಲಿ ಆರ್ ಅಶೋಕ ಅವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಸಂಚಲನ ಸೃಷ್ಟಿಸಿದೆ. ಅಲ್ಲದೆ ಬಿಜೆಪಿ ವರುಣಾದಲ್ಲಿ ಸಿದ್ದರಾಮಯ್ಯ ಎದುರಾಗಿ ವಿ ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ.
ಖರ್ಗೆ, ರಾಹುಲ್ ಗಾಂಧಿ ಸೂಚನೆ ನಂತರ ತೀರ್ಮಾನ
ಪದ್ಮನಾಭನಗರ ಮತಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ವಿಚಾರವಾಗಿ ಮಾತನಾಡಿರುವ ಸಂಸದ ಡಿಕೆ ಸುರೇಶ್, ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಸೂಚನೆಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು. ಸ್ವತಃ ರಘುನಾಥ ನಾಯ್ಡು ಅವರೇ ನನಗೆ ಆಹ್ವಾನ ನೀಡಿದ್ದಾರೆ. ಆರ್ ಅಶೋಕ್ ಅವರ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ, ಕಾಂಗ್ರೆಸ್ ಕಾರ್ಯಕರ್ತರ ನಿರ್ಧಾರವೇ ನನಗೆ ಮುಖ್ಯವಾಗುತ್ತದೆ ಎಂದು ಅವರು ಹೇಳಿದರು. ಡಿಕೆ ಶಿವಕುಮಾರ್ ಹೊಸ ರಾಜಕೀಯ ದಾಳ ಉರುಳಿಸಿದ್ದು, ಆರ್ ಅಶೋಕ್ ಇದಕ್ಕೆ ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂದು ಕಾದುನೋಡಬೇಕಿದೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications