ಮಹದಾಯಿ ವಿಚಾರದಲ್ಲಿ ರಾಜಕೀಯ ಆಟ ಬೇಡ: ಡಿಕೆಶಿ ಮನವಿ
ಬೆಂಗಳೂರು, ಆಗಸ್ಟ್ 28: ಮಹದಾಯಿ ರಾಜ್ಯದ ಎಲ್ಲರಿಗೂ ಸಂಬಂಧಿಸಿದ್ದು, ಈ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ, ಜನರಲ್ಲಿ ಭರವಸೆ ಮೂಡಿಸುವಂತಹ ಮಾತುಗಳನ್ನು ಆಡಿ ಅದರ ಬದಲು ರಾಜಕೀಯ ಮಾಡಬೇಡಿ ಎಂದು ಸಚಿವ ಡಿಕೆ ಶಿವಕುಮಾರ್ ಮನವಿ ಮಾಡಿದರು.
ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಈ ವಾರದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಲಿದೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕೂಡ ಪರಿಶೀಲನೆಗೆ ಬರಲಿದ್ದಾರೆ, ಅವರ ಜೊತೆ ಸಭೆ ನಡೆಸಿದ ಬಳಿಕ ಗೋವಾ ಎನ್‌ಜಿಟಿಗೆ ಹೋಗುವ ವಿಚಾರ ಅಥವಾ ಮುಂದಿನ ಹೋರಾಟದ ಬಗ್ಗೆ ಸಿದ್ಧತೆ ಮಾಡಲಾಗುತ್ತದೆ. ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಹೇಳಿದರು.
ಗೋವಾದ ಜೀವನದಿಯಾಗಿರುವ ಮಾಂಡೋವಿ-ಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಮೂರು ದಶಕಗಳಿಗೂ ಅಧಿಕ ವರ್ಷಗಳಿಂದ ಇದೆ, ಮಹದಾಯಿ ಯೋಜನೆ ಕಾಲಾನುಕ್ರಮದಲ್ಲಿ ನಡೆದ ಬೆಳವಣಿಗೆಗಳತ್ತ ಅವಲೋಕನ ಮಾಡಲಾಗಿದೆ.

ಕಳಸಾ ಬಂಡೂರಿ ನಾಲೆ ಕಾಮಗಾರಿಗೆ ಆಗ್ರಹಿಸಿ ಉತ್ತರ ಕರ್ನಾಟಕದ ರೈತರು ಮುಷ್ಕರ ನಿರತರಾಗಿ ವರ್ಷ ಕಳೆದಿದೆ. ಸರ್ಕಾರಗಳು ಬದಲಾದರೂ ಕುಡಿಯುವ ನೀರಿಗಾಗಿ ಹೋರಾಟ ನಿಂತಿಲ್ಲ.
ಮಹದಾಯಿ ನ್ಯಾಯಾಧಿಕರಣದ ಅಂತಿಮ ತೀರ್ಪು ಮಂಗಳವಾರ ಪ್ರಕಟವಾಗಿದೆ. ಕರ್ನಾಟಕಕ್ಕೆ 13.42 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಇದು ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಜಲ ವಿವಾದ. ನ್ಯಾಯಮೂರ್ತಿ ಜೆ.ಎಂ.ಪಾಂಚಾಲ್ ನೇತೃತ್ವದ ನ್ಯಾಯಾಧಿಕರಣ ಅಂತಿಮ ತೀರ್ಪನ್ನು ಪ್ರಕಟಿಸಿದೆ.
ಕರ್ನಾಟಕಕ್ಕೆ 13.42, ಗೋವಾ ರಾಜ್ಯಕ್ಕೆ 24 ಮತ್ತು ಮಹಾರಾಷ್ಟ್ರಕ್ಕೆ 1.30 ಟಿಎಂಸಿ ನೀರನ್ನು ನ್ಯಾಯಾಧೀಕರಣ ಹಂಚಿಕೆ ಮಾಡಿದೆ.ಆದರೆ, ಕರ್ನಾಟಕಕ್ಕೆ ಇನ್ನೂ 7 ಟಿಎಂಸಿ ನೀರು ಸಿಗಬೇಕಿತ್ತು ಎಂಬ ಬೇಡಿಕೆ ಇದೆ.












Click it and Unblock the Notifications