Diarrhoea: ನಟ ಭಯಂಕರ ದರ್ಶನ್‌ಗಿರುವ ಖಾಯಿಲೆ ಯಾವುದು? ಇದರ ಗುಣಲಕ್ಷಣಗಳೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನು ಜೈಲಿನ ಊಟ ಸೇವಿಸಿ ದರ್ಶನ್‌ ಅತಿಸಾರದಿಂದ ಬಳಲುತ್ತಿದ್ದಾರೆ ಎಂದು ಹೇಳಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹಾಗಾದರೆ ಇದರ ಗುಣಲಕ್ಷಣಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಅತಿಸಾರ ಹಿನ್ನೆಲೆ ನಟ ದರ್ಶನ್‌ ಮನೆಯ ಆಹಾರ, ಹಾಸಿಗೆ ಮತ್ತು ಪುಸ್ತಕಗಳನ್ನು ಕೇಳಿದ್ದಾರೆ ಎಂದು ದರ್ಶನ್‌ ಪರ ವಕೀಲರು ಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಅರ್ಜಿ ಪರಿಶೀಲಿಸಿದ ನಂತರ, ನಿಯಮವು ಎಲ್ಲರಿಗೂ ಸಾಮಾನ್ಯವಾಗಿದೆ. ಮತ್ತು ಈ ಪ್ರಕರಣವನ್ನು ಸಹ ಅದೇ ರೀತಿ ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

Do you know what disease to Actor Darshan

ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ನೇತೃತ್ವದ ಪೀಠವು ಜೈಲು ಅಧಿಕಾರಿಗಳು, ಕಾಮಾಕ್ಷಿಪಾಳ್ಯ ಪೊಲೀಸರು ಮತ್ತು ರಾಜ್ಯ ಸರ್ಕಾರಕ್ಕೆ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ. ಮತ್ತು ಅಪರಾಧಿಗಳಿಗೆ ವಿಭಿನ್ನ ಮಾರ್ಗಸೂಚಿಗಳಿವೆ ಮತ್ತು ಅದರಂತೆಯೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪೀಠ ಹೇಳಿದೆ.

ಜೈಲಿನಲ್ಲಿ ಮನೆ ಆಹಾರವನ್ನು ಅನುಮತಿಸಲಾಗಿದೆ ಎಂದು ಸಲ್ಲಿಸುವ ಅಗತ್ಯ ಇಲ್ಲ ಎಂದು ಪೀಠವು ಸೂಚಿಸಿತು. ಮತ್ತು ಈ ಬಗ್ಗೆ ಇತರ ನ್ಯಾಯಾಲಯಗಳಿಂದ ಆದೇಶಗಳನ್ನು ಪ್ರಸ್ತುತಪಡಿಸಲು ವಕೀಲರಿಗೆ ಸೂಚಿಸಿತು. ಕಾನೂನಿನಲ್ಲಿ ಅನುಮತಿ ಇದ್ದರೆ, ಮನೆಯ ಆಹಾರವನ್ನು ಅನುಮತಿಸಲಾಗುವುದು. ಇಲ್ಲದಿದ್ದರೆ ಅದನ್ನು ಅನುಮತಿಸಲಾಗುವುದಿಲ್ಲ. ಎಲ್ಲಾರಿಗೂ ಒಂದೇ ಕಾನೂನು ಆಗಿದ್ದು, ಕಾನೂನಿನ ಪ್ರಕಾರ ನಿರ್ಧಾರ ತೆಗೆದುಕೊಳ್ಳಲಾಗುವುದು ಹೇಳಿದೆ.

ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ಜೈಲಿನಲ್ಲಿ ನೀಡಿದ ಆಹಾರ ಕಕ್ಷಿದಾರರಿಗೆ ಸರಿಯಾಗಿ ಜೀರ್ಣವಾಗುತ್ತಿಲ್ಲ. ಆದ್ದರಿಂದ ದರ್ಶನ್ ಅವರು ಅತಿಸಾರದಿಂದ ಬಳಲುತ್ತಿದ್ದಾರೆ. ಆತನನ್ನು ಪರೀಕ್ಷಿಸಿದ ಜೈಲು ಆರೋಗ್ಯಾಧಿಕಾರಿ ಆತನಿಗೆ ಸೋಂಕು ಅತಿಸಾರ ಇರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಅವರ ತೂಕದಲ್ಲಿ ಇಳಿಕೆಯಾಗಿದೆ. ಜೈಲಿನಲ್ಲಿ ನೀಡಲಾದ ಆಹಾರವನ್ನು ಸೇವಿಸಲು ಸಾಧ್ಯವಾಗುತ್ತಿಲ್ಲ. ಮನೆ ಆಹಾರಕ್ಕಾಗಿ ಈಗಾಗಲೇ ಜೈಲು ಅಧಿಕಾರಿಗಳಿಗೆ ಮನವಿ ಮಾಡಲಾಗಿದ್ದು, ಅದನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದರು.

"ದರ್ಶನ್ ಅವರ ತೂಕದಲ್ಲಿ ಭಾರೀ ಇಳಿಕೆಯಾಗಿದೆ. ಇದು ಹೀಗೆ ಮುಂದುವರೆದರೆ, ಅವರು ಆರೋಗ್ಯದ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಕಾರಾಗೃಹಗಳ ಕಾಯಿದೆ 1963 ಸೆಕ್ಷನ್ 30ರ ಪ್ರಕಾರ, ಖೈದಿಗಳು ಆಹಾರ, ಬಟ್ಟೆ ಮತ್ತು ಹಾಸಿಗೆಗಳನ್ನು ಹೊರಗಿನಿಂದ ಪಡೆಯಲು ಅನುಮತಿಸಲಾಗಿದೆ" ಎಂದು ವಕೀಲರು ವಾದ ವಾದ ಮಂಡಿಸಿದ್ದಾರೆ.

"ಮನೆಯಿಂದಲೇ ಊಟ, ಹಾಸಿಗೆ, ಪುಸ್ತಕಗಳು ಮತ್ತು ಪತ್ರಿಕೆಗಳನ್ನು ಅನುಮತಿಸಿದರೆ, ಸರ್ಕಾರದ ವೆಚ್ಚವೂ ಕಡಿಮೆಯಾಗುತ್ತದೆ. ಆದರೆ ದರ್ಶನ್‌ಗೆ ಮನೆ ಊಟಕ್ಕೆ ಅವಕಾಶ ನೀಡದಿರುವುದು ಅಮಾನವೀಯ ಮತ್ತು ಭಾರತೀಯ ಸಂವಿಧಾನದ 21ನೇ ವಿಧಿಯ ಉಲ್ಲಂಘನೆ" ಎಂದು ದರ್ಶನ್‌ ಪರ ವಕೀಲರು ವಾದ ಮಂಡನೆ ಮಾಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಎ2 ಆರೋಪಿಯಾಗಿದ್ದು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದಂತೆ ಅವರು 12 ದಿನಗಳ ಕಾಲ ತನಿಖೆ ಎದುರಿಸಿದ್ದಾರೆ. ಅವರನ್ನು ಜೂನ್ 22ರಿಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಜೂನ್ 8 ರಂದು ಬೆಂಗಳೂರಿನಲ್ಲಿ ರೇಣುಕಾಸ್ವಾಮಿ ಅವರ ಭೀಕರ ಹತ್ಯೆ ನಡೆದಿತ್ತು. ಆತನನ್ನು ಚಿತ್ರದುರ್ಗದಿಂದ ಅಪಹರಿಸಿ ಬೆಂಗಳೂರಿಗೆ ಕರೆತಂದು ಪಟ್ಟಣಗೆರೆಯ ಶೆಡ್‌ನಲ್ಲಿ ಚಿತ್ರಹಿಂಸೆ ನೀಡಿ ಸಾಯಿಸಲಾಗಿತ್ತು. ನಂತರ ಶವವನ್ನು ಕಾಲುವೆ ಬಳಿ ಎಸೆಯಲಾಗಿತ್ತು.

ಬಳಿಕ ಪೊಲೀಸರು ತನಿಖೆ ಆರಂಭಿಸಿದಾಗ ನಾಲ್ವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದು, ಹಣಕಾಸಿನ ವಿಚಾರದಲ್ಲಿ ಕೊಲೆಯ ಹೊಣೆ ಹೊತ್ತುಕೊಂಡಿದ್ದರು. ಕಾಮಾಕ್ಷಿಪಾಳ್ಯ ಪೊಲೀಸರು ಅವರನ್ನು ವಿಚಾರಣೆಗೊಳಪಡಿಸಿದ ಬಳಿಕ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಮತ್ತಿತರರು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ನಟ ದರ್ಶನ್‌ & ಗ್ಯಾಂಗ್‌ ರೇಣುಕಾಸ್ವಾಮಿ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದ್ದು, ಬಳಿಕ ನಟ ದರ್ಶನ್ ಸೇರಿ 17 ಮಂದಿಯನ್ನು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+