• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳು ಹಿಂದೇಟು: ಸರ್ಕಾರಿ ವೈದ್ಯ ಸಾವು

|

ಬೆಂಗಳೂರು, ಜುಲೈ 23: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೈದ್ಯರನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲು ನಿರಾಕರಿಸಿದ್ದರಿಂದ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ.

   ಅಭಿಮಾನಿಗಳೊಂದಿಗೆ ಖುಷಿ ವಿಚಾರ ಹಂಚಿಕೊಂಡ ಸುಮಲತಾ | Oneindia Kannada

   ಕೊವಿಡ್ 19 ವರದಿ ಇಲ್ಲದೆ ಮೂರು ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸಿದ ಪರಿಣಾಮ ಸರ್ಕಾರಿ ವೈದ್ಯ ಮಂಜುನಾಥ್ ಮೃತಪಟ್ಟಿದ್ದಾರೆ.

   ಕೊವಿಡ್ 19 ತ್ಯಾಜ್ಯ ವಿಲೇವಾರಿ: ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿ

   ಈ ಸಂಬಂಧ ಬಿಬಿಎಂಪಿ ವಿಶೇಷ ಆಯುಕ್ತ ಡಿ. ರಂದೀಪ್ ಮಾತನಾಡಿ, ಡಾ. ಮಂಜುನಾಥ್ ಅವರನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ ಆಸ್ಪತ್ರೆಗಳ ವಿರುದ್ಧ ಆರೋಗ್ಯ ಇಲಾಖೆ ಕ್ರಮಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

   ಕೊವಿಡ್ 19 ವಾರಿಯರ್ ಆಗಿ ಮಂಜುನಾಥ್ ಕೆಲಸ ನಿರ್ವಹಿಸುತ್ತಿದ್ದು, ಅನಾರೋಗ್ಯ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಗಳು ನಿರಾಕರಿಸಿದವು. ಮೃತ ವೈದ್ಯರು ರಾಮನಗರ ಜಿಲ್ಲೆಯಲ್ಲಿರುವ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದರು.

   ಜೂನ್ ಕೊನೆಯಲ್ಲಿ ವೈದ್ಯರು ಜೆಪಿ ನಗರದಲ್ಲಿರುವ ರಾಜಶೇಖರ ಆಸ್ಪತ್ರೆ, ಕೆಂಗೇರಿಯಲ್ಲಿರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ಹಾಗೂ ಕುಮಾರಸ್ವಾಮಿ ಲೇ ಔಟ್ ನಲ್ಲಿರುವ ಸಾಗರ ಆಸ್ಪತ್ರೆಗೆ ಅಲೆದಾಡಿದ್ದಾರೆ. ಈ ಮೂರು ಆಸ್ಪತ್ರೆಗಳು ಕೂಡ ಕೊವಿಡ್ 19 ಟೆಸ್ಟ್ ವರದಿ ತಂದ ಬಳಿಕವೇ ದಾಖಲಿಸಿಕೊಳ್ಳುವುದಾಗಿ ತಿಳಿಸಿದವು ಎಂದು ಮಂಜುನಾಥ್ ಕುಟುಂಬಸ್ಥರು ದೂರಿದ್ದಾರೆ.

   ಮಂಜುನಾಥ್ ಕುಟುಂಬದಲ್ಲಿ ಆರು ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಎಲ್ಲರೂ ಗುಣಮುಖರಾಗಿದ್ದಾರೆ.ಕೊನೆಗೆ ವೈದ್ಯ ಕುಟುಂಬಸ್ಥರು ದಯಾನಂದ ಸಾಗರ್ ಕ್ಯಾಂಪಸ್ ಫುಟ್‍ಪಾತ್ ನಲ್ಲಿ ಈ ಸಂಬಂಧ ಧರಣಿ ನಡೆಸಿದ ಬಳಿಕ ಜುಲೈ 25ರಂದು ಮಂಜುನಾಥ್ ಅವರನ್ನು ಸಾಗರ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಯಿತು.

   ಅಲ್ಲಿ ವೆಂಟಿಲೇಟರ್‌ನಲ್ಲಿಟ್ಟಿದ್ದರೂ ಯಾವುದೇ ಪ್ರಯೋಜನವಾಗದೆ ಕೊನೆಯುಸಿರೆಳೆದಿದ್ದಾರೆ.

   English summary
   A government doctor in Bengaluru who was turned away by three private hospitals because he could not produce a coronavirus test result died today in Bengaluru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X