ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂದುವರೆದ ಸರ್ಕಾರಿ ವೈದ್ಯರ ಮುಷ್ಕರ: ಖಾಸಗಿ ವೈದ್ಯರ ಸಾಥ್

|
Google Oneindia Kannada News

ಬೆಂಗಳೂರು, ನವೆಂಬರ್ 6: ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸಿರುವ ಹಲ್ಲೆ ಖಂಡಿಸಿ ನಡೆಸುತ್ತಿರುವ ವೈದ್ಯರ ಪ್ರತಿಭಟನೆ ಬುಧವಾರವೂ ಮುಂದುವರೆದಿದೆ.

ಸರ್ಕಾರಿ ವೈದ್ಯರ ಮುಷ್ಕರಕ್ಕೆ ಖಾಸಗಿ ಆಸ್ಪತ್ರೆ ವೈದ್ಯರು ಕೂಡ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದಾರೆ.

ಒಂದೊಮ್ಮೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ನವೆಂಬರ್ 8ರಂದು ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಬಂದ್ ಮಾಡುವುದಾಗಿ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಸರ್ಕಾರವು ನಿಮ್ಮ ಜೊತೆಗಿದೆ ಎಂದು ಉಪಮುಖ್ಯಮಂತ್ರಿಗಳು ಭರವಸೆ ನೀಡಿದ್ದರೂ ಕೂಡ ತಮ್ಮ ಬೇಡಿಕೆಗಳ ಬಗ್ಗೆ ಒಪ್ಪಿಗೆ ಸೂಚಿಸಿಲ್ಲ ಎನ್ನುವುದು ವೈದ್ಯರ ವಾದವಾಗಿದೆ.

ಆರೋಪ, ಮುಷ್ಕರ: ಕರವೇ, ವೈದ್ಯರ ನಡುವೆ ಏನಿದು ಕಿತ್ತಾಟ?ಆರೋಪ, ಮುಷ್ಕರ: ಕರವೇ, ವೈದ್ಯರ ನಡುವೆ ಏನಿದು ಕಿತ್ತಾಟ?

ನಿನ್ನೆ, ವೈದ್ಯರ ನಿರ್ಲಕ್ಷ್ಯತನ ಖಂಡಿಸಿ, ಹಾಗೂ ತಪ್ಪಿತಸ್ಥ ವೈದ್ಯರ ಮೇಲೆ ಶಿಸ್ತಿನ ಕ್ರಮಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರು ನಗರದ ಟೌನ್ ಹಾಲ್​ನಲ್ಲಿ ಪ್ರತಿಭಟನೆ ನಡೆಸಿದ್ದರು. ಕರವೇ ಅಧ್ಯಕ್ಷ ನಾರಾಯಣ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಮೊದಲಾದವರೂ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಆರನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಆರನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಕಿರಿಯ ವೈದ್ಯರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ನಡುವಿನ ಗುದ್ದಾಟ ಯಾಕೋ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಕರವೇ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಹೋರಾಟ ಇವತ್ತಿಗೆ 6ನೇ ದಿನಕ್ಕೆ ಕಾಲಿಟ್ಟಿದೆ.

ಮಿಂಟೋ ಆಸ್ಪತ್ರೆಯಲ್ಲಿ ನಡೆದಿದ್ದೇನು?

ಮಿಂಟೋ ಆಸ್ಪತ್ರೆಯಲ್ಲಿ ನಡೆದಿದ್ದೇನು?

ಕನ್ನಡ ರಾಜ್ಯೋತ್ಸವ ದಿನದಂದು ಮಿಂಟೋ ಆಸ್ಪತ್ರೆಗೆ ನುಗ್ಗಿ ಗಲಾಟೆ ಮಾಡಿ ಕೆಲ ವೈದ್ಯರ ಮೇಲೆ ಹಲ್ಲೆ ಎಸಗಿತ್ತೆನ್ನಲಾದ ಕರ್ನಾಟಕ ರಕ್ಷಣಾ ವೇದಿಕೆ ವಿರುದ್ಧ ವೈದ್ಯರ ಪ್ರತಿಭಟನೆ ಆರನೇ ದಿನವೂ ಮುಂದುವರಿದಿದೆ.

ರೋಗಿಗಳಿಗೆ ತೊಂದರೆ

ರೋಗಿಗಳಿಗೆ ತೊಂದರೆ

ಇವರಿಬ್ಬರ ಜಗಳದಿಂದ ಚಿಕಿತ್ಸೆಗೆ ಬರುತ್ತಿರುವ ರೋಗಿಗಳಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಪರದಾಡುತ್ತಿದ್ದಾರೆ. ಇನ್ನೂ ಶುಕ್ರವಾರದವರೆಗೆ ಕಾದು ನೋಡಲು ನಿರ್ಧರಿಸಿರುವ ಕಿರಿಯ ವೈದ್ಯರು, ಶುಕ್ರವಾರದೊಳಗೆ ಬೇಡಿಕೆ ಈಡೇರದಿದ್ದರೆ, ರಾಜ್ಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡುವ ನಿರ್ಧಾರ ಮಾಡಿದ್ದಾರೆ.

ಎಲ್ಲೆಲ್ಲಿ ಪ್ರತಿಭಟನೆ

ಎಲ್ಲೆಲ್ಲಿ ಪ್ರತಿಭಟನೆ

ಕರ್ನಾಟಕ ರಕ್ಷಣಾ ವೇದಿಕೆಯವರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಇಂದು ಮತ್ತೆ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ವಾಣಿವಿಲಾಸ, ವಿಕ್ಟೋರಿಯಾ, ಮಿಂಟೋ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ವೈದ್ಯರ ಮುಷ್ಕರ ದಿನೇ ದಿನೇ ತಾರಕಕ್ಕೇರುತ್ತಿದೆ. ಇಂದು ವೈದ್ಯರು ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಲಿದ್ದಾರೆ. ನವೆಂಬರ್​ 8ರಂದು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್​ ಮಾಡುವ ಸಾಧ್ಯತೆ ಇದೆ. ಸರ್ಕಾರಿ ವೈದ್ಯರಿಗೆ ಖಾಸಗಿ ವೈದ್ಯರು ಸಹ ಬೆಂಬಲ ನೀಡುತ್ತಿದ್ದಾರೆ.

English summary
Minto Doctors demand action against Karnataka Rakshana Vedike activists.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X