ಮುಷ್ಕರ: ಬೆಂಗಳೂರಿನಲ್ಲಿ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯ

ಬೆಂಗಳೂರು, ಜನವರಿ 2: ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆ ಸಂಬಂಧ ಕೇಂದ್ರ ಸಚಿವರ ಜೊತೆ ಸಂಧಾನ ಸಭೆ ವಿಫಲವಾದ ಹಿನ್ನೆಲೆ ವೈದ್ಯರು ಇಂದು (ಮಂಗಳವಾರ) ಆಸ್ಪತ್ರೆಗಳನ್ನು ಬಂದ್ ಮಾಡಿ ದೇಶಾದ್ಯಂತ ಮುಷ್ಕರ ಕೈಗೊಂಡಿದ್ದಾರೆ.

ದೇಶಾದ್ಯಂತ ಈಗಾಗಲೇ ಹೊರ ರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಸಂಜೆ 6 ಗಂಟೆಯವರೆಗೆ ತುರ್ತು ಸೇವೆ ಚಿಕಿತ್ಸೆ ಹೊರತುಪಡಿಸಿ ಯಾವುದೇ ಸೌಲಭ್ಯ ಇರುವುದಿಲ್ಲ ಎಂದು ವೈದ್ಯರ ಸಂಘಟನೆ ತಿಳಿಸಿದೆ. ಆದರೆ, ಬೆಂಗಳೂರು ನಗರದಲ್ಲಿ ಕೆಲ ಖಾಸಗಿ ಆಸ್ಪತ್ರೆಗಳ ವೈದ್ಯರು ಕಪ್ಪು ಪಟ್ಟಿ ಕಟ್ಟಿಕೊಂಡು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

Doctors strike: some private hospitals work as usual in Bangaluru

ಕಿಮ್ಸ್ ಆಸ್ಪತ್ರೆಯಲ್ಲಿ ಎಂದಿನಂತೆ ಚಿಕಿತ್ಸೆ ಇರಲಿದೆ ಎಂದು ವೈದ್ಯ ಮಧುಸೂಧನ್ ತಿಳಿಸಿದ್ದಾರೆ. ಎಂ.ಎಸ್ ರಾಮಯ್ಯ ಆಸ್ಪತ್ರೆಯೂ ಕೂಡ ಕಾರ್ಯನಿರ್ವಹಿಸಯತ್ತಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಇನ್ನು ಅಪೋಲೊ, ವಿಮ್ಸ್, ಪೋರ್ಟಿಸ್ ಆಸ್ಪತ್ರೆ ಸೇರಿದಂತೆ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಲಭ್ಯ ಇವೆ ಎಂದು ತಿಳಿಸಿವೆ. ಉಳಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದ ಹೊರ ರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಿ ಬಂದ್ ಗೆ ಬೆಂಬಲ ಸೂಚಿಸಿವೆ.

ಇತ್ತೀಚೆಗೆ ಅಷ್ಟೇ ರಾಜ್ಯ ವೈದ್ಯರ ಸಂಘ ಕೂಡು ಮೂರ್ನಾಲ್ಕು ದಿನ ಅನಿರ್ದಿಷ್ಟ ಧರಣಿ ನಡೆಸಿದ್ದರು. ಇದರಿಂದ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ರೋಗಿಗಳು ಸಾವನ್ನಪ್ಪಿದ್ದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+